14ರಂದು ತಾಲೂಕು ಕಚೇರಿ ಎದುರು ರೈತ ಸಂಘ ಪ್ರತಿಭಟನೆ

KannadaprabhaNewsNetwork |  
Published : Oct 09, 2026, 02:00 AM IST
7ಎಚ್.ಎಲ್.ಐ2 ಸ್ಥಳೀಯ ಪ್ರವಾಸಿ ಮಂದಿರದಲ್ಲಿ ರೈತ ಸಂಘ, ಹಸಿರುವ ಸೇನೆ ಪದಾಧಿಕಾರಿಗಳು ರಾಜ್ಯಾಧ್ಯಕ್ಷ ಕರಿಬಸಪ್ಪ ಗೌಡ ಅವರು ನೇತೃತ್ವದಲ್ಲಿ ಸುದ್ದಿಗೋಷ್ಠಿ ನಡೆಸಿ ರೈತರ ಬೇಡಿಕೆ ಈಡೇರಿಸುವಲ್ಲಿ ವಿಫಲರಾದ ಅಡಳಿತ ವ್ಯವಸ್ಥೆಯನ್ನು ಖಂಡಿಸಿ ಅಕ್ಟೋಬರ್ 14 ಬುಧವಾರದಿಂದ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸುವ ಬಗ್ಗೆ ಸುದ್ದಿಗೋಷ್ಠಿ ನಡೆಸಿದರು.  | Kannada Prabha

ಸಾರಾಂಶ

ಹೊನ್ನಾಳಿ, ನ್ಯಾಮತಿ ಅ‍ವಳಿ ತಾಲೂಕುಗಳ 40 ಗ್ರಾಮಗಳ ಸುಮಾರು 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ವಿಳಂಬ ಖಂಡಿಸಿ ಅ.14ರಂದು ತಾಲೂಕು ಕಚೇರಿ ಮುಂದೆ ರೈತ ಸಂಘ, ಹಸಿರು ಸೇವೆಯಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕರಿಬಸಪ್ಪ ಗೌಡ ಹೇಳಿದ್ದಾರೆ.

- 74 ಕೆರೆಗಳಿಗೆ ನೀರು ತುಂಬಿಸುವ ಭರವಸೆ ವಿಫಲ: ಅಧ್ಯಕ್ಷ ಕರಿಬಸಪ್ಪಗೌಡ ಆರೋಪ

- - -

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಹೊನ್ನಾಳಿ, ನ್ಯಾಮತಿ ಅ‍ವಳಿ ತಾಲೂಕುಗಳ 40 ಗ್ರಾಮಗಳ ಸುಮಾರು 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ವಿಳಂಬ ಖಂಡಿಸಿ ಅ.14ರಂದು ತಾಲೂಕು ಕಚೇರಿ ಮುಂದೆ ರೈತ ಸಂಘ, ಹಸಿರು ಸೇವೆಯಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಅಧ್ಯಕ್ಷ ಕರಿಬಸಪ್ಪ ಗೌಡ ಹೇಳಿದರು.

ಪಟ್ಟಣದ ಪ್ರವಾಸಿ ಮಂದಿರದಲ್ಲಿ ರೈತ ಸಂಘ ಮತ್ತು ಹಸಿರು ಸೇನೆಯಿಂದ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ವಿಳಂಬ ಕುರಿತಂತೆ ಈ ಹಿಂದೆ ಉಪವಿಭಾಗಾಧಿಕಾರಿ ಕಚೇರಿ ಮುಂದೆ ಹೋರಾಟ ನಡೆಸಿದ್ದ ಸಂದರ್ಭದಲ್ಲಿ ಅ‍ವಳಿ ತಾಲೂಕುಗಳ ಕೆರೆಗಳಿಗೆ ಸೆ.15ರೊಳಗೆ ಕೆರೆಗೆಳಿಗೆ ನೀರು ತಂಬಿಸುವ ಕೆಲಸ ಮಾಡುವುದಾಗಿ ನೀರಾವರಿ ಇಲಾಖೆ ಅಧಿಕಾರಿಗಳು ಹಾಗೂ ಶಾಸಕ ಡಿ.ಜಿ.ಶಾಂತನಗೌಡ ಭರವಸೆ ನೀಡಿದ್ದರು. ಆದರೆ ಭರವಸೆ ಈಡೇರಿಸುವಲ್ಲಿ ವಿಫಲವಾಗಿದ್ದಾರೆ ಎಂದು ದೂರಿದರು.

ರೈತರು ಈ ಮೊದಲು ಎ.ಸಿ. ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಆಗ ನೀರಾವರಿ ಇಲಾಖೆಯ ಜಿಲ್ಲಾ ಮತ್ತು ತಾಲೂಕು ಅಧಿಕಾರಿಗಳು, ಶಾಸಕರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯಲ್ಲಿ ಮೋಟಾರ್‌ಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕೆಲಸ ಬಾಕಿ ಇದ್ದು, ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೆ.15ರೊಳಗಾಗಿ ಅ‍ವಳಿ ತಾಲೂಕಿನ ಸುಮಾರು 74 ಕೆರೆಗಳಿಗೆ ನದಿಯಿಂದ ನೀರು ತುಂಬಿಸುತ್ತೇವೆ ಎಂದು ಭರವಸೆ ನೀಡಿದ್ದರು ಎಂಧರು.

ಆದರೆ, ಇಲ್ಲಿಯವರೆಗೂ ಭರವಸೆ ಈಡೇರಿಸಿಲ್ಲ. ರೈತರು ತಾಳ್ಮೆಯಿಂದ ಕಾದರೂ ಯಾವುದೇ ಕೆಲಸ ಆಗಿಲ್ಲ. ಇದೀಗ ಅವಳಿ ತಾಲೂಕಿನಲ್ಲಿ ಭೀಕರ ಬರಗಾಲದ ಪರಿಸ್ಥಿತಿ ಇದೆ. ಬೆಳೆಗಳು ಸಂಪೂರ್ಣ ಒಣಗಿ ರೈತರ ಬದುಕು ದುಸ್ತರವಾಗಿದೆ. ಇತ್ತ ಮಳೆಯೂ ಇಲ್ಲ, ಅತ್ತ ಕೆರೆಗಳಲ್ಲಿ ನೀರೂ ಇಲ್ಲ. ನೀರಾವರಿ ಇಲಾಖೆ ಅಧಿಕಾರಿಗಳನ್ನು ಕೇಳಿದರೆ ತಮ್ಮ ಇಲಾಖೆಗೆ ಸಂಬಂಧಿಸಿದಂತೆ ಕೆಲಸಗಳು ಪ್ರಗತಿಯಾಗಿದೆ. ಆದರೆ ಮೋಟಾರ್‌ಗಳಿಗೆ ವಿದ್ಯುತ್ ಕಲ್ಪಿಸುವ ಕೆಲಸ ಆಗಿಲ್ಲ ಎಂದು ಹೇಳುತ್ತಾರೆ ಎಂದು ಕಿಡಿಕಾರಿದರು.

ಸುದ್ದಿಗೋಷ್ಠಿಯಲ್ಲಿ ಹೊನ್ನಾಳಿ ತಾಲೂಕು ಅಧ್ಯಕ್ಷ ಕೆ.ಸಿ,ಬಸಪ್ಪ, ನ್ಯಾಮತಿಯ ಬೆಳಗುತ್ತಿ ಉಮೇಶ್, ಹಿರೇಕಲ್ಮಠದ ಬಸವರಾಜಪ್ಪ ಸೇರಿದಂತೆ ಮುಖಂಡರು, ರೈತರು ಇದ್ದರು.

- - -

(ಕೋಟ್‌)

ರಾಜ್ಯ ಸರ್ಕಾರದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಕೊಟ್ಟ ಮಾತಿನಂತೆ ನಡೆದುಕೊಳ್ಳದೇ ರೈತವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಈ ಹಿಂದೆ ಕೂಡ ರೈತ ಸಂಘದಿಂದ ಜಿಲ್ಲಾ ಉಸ್ತುವಾರಿ ಸಚಿವರು, ಜಿಲ್ಲಾಧಿಕಾರಿಗೆ ರೈತರ ಸಂಕಷ್ಟಗಳ ಬಗ್ಗೆ ಮನವಿ ನೀಡಲಾಗಿತ್ತು. ಆದರೂ, ಪ್ರಯೋಜನವಾಗಿಲ್ಲ. ಅ.14ರಂದು ತಾಲೂಕು ಕಚೇರಿ ಮುಂದೆ ರೈತ ಸಂಘ, ಹಸಿರು ಸೇವೆಯಿಂದ ಅಹೋರಾತ್ರಿ ಧರಣಿ ನಡೆಸಲಾಗುವುದು.

- ಕರಿಬಸಪ್ಪ ಗೌಡ, ಅಧ್ಯಕ್ಷ.

- - -

-7ಎಚ್.ಎಲ್.ಐ2:

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬು ಬೆಳೆಗಾರರಿಗೆ ಎಸ್‌ಎಪಿ ನಿಗದಿಪಡಿಸುವಂತೆ ಆಗ್ರಹ
ಜಿಪಂ-ತಾಪಂ ಚುನಾವಣೆ ಮೀಸಲಾತಿ ಪ್ರಕಟ, ಆಕಾಂಕ್ಷಿಗಳಲ್ಲಿ ಹುರುಪು