ಕ್ಯಾನ್‌ಗೆ ಪೆಟ್ರೋಲ್,ಡೀಸೆಲ್ ಹಾಕದಪೆಟ್ರೋಲ್ ಬಂಕ್‌ಗೆ ರೈತರ ಮುತ್ತಿಗೆ

KannadaprabhaNewsNetwork |  
Published : Jun 17, 2026, 01:15 AM IST
  ಸಿಕೆಬಿ-4 ನಗರ ಹೊರವಲಯದ ಜಿಲ್ಲಾಡಳಿತ ಭವನದ ಸಮೀಪದ ಭಾರತ್ ಪೆಟ್ರೋಲಿಯಂ ಬಂಕ್ ನಲ್ಲಿ  ಕ್ಯಾನ್‌ಗಳಿಗೆ  ಪೆಟ್ರೋಲ್ , ಡೀಸೆಲ್ ಹಾಕದ ಹಿನ್ನೆಲೆಯಲ್ಲಿ ರೈತರು  ಪೆಟ್ರೋಲ್ ಬಂಕ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು | Kannada Prabha

ಸಾರಾಂಶ

ರೈತರಿಗೆ ಇಂಧನ ನೀಡದಿದ್ದರೆ ಬೇರೆ ಯಾರಿಗೂ ನೀಡಬಾರದು ಎಂದು ಆಗ್ರಹಿಸಿದರು. ಟ್ರ್ಯಾಕ್ಟರ್ ಹಾಗೂ ಪವರ್ ಟಿಲ್ಲರ್‌ಗಳೊಂದಿಗೆ ಬಂಕ್‌ಗೆ ಬಂದ ರೈತರು ಬಂಕ್ ಮಾಲೀಕ ಸಂದೀಪ್ ಜೊತೆ ವಾಗ್ವಾದ ನಡೆಸಿದರು. ಆಕ್ರೋಶಗೊಂಡ ರೈತರು ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ಹೆದ್ದಾರಿಯನ್ನು ತಡೆದರು. ರಸ್ತೆಯ ಮಧ್ಯೆ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ, ಚಿಕ್ಕಬಳ್ಳಾಪುರ:

ಕ್ಯಾನ್‌ಗಳಿಗೆ ಪೆಟ್ರೋಲ್, ಡೀಸೆಲ್ ಹಾಕದ ಹಿನ್ನೆಲೆಯಲ್ಲಿ ರೈತರು ಪೆಟ್ರೋಲ್ ಬಂಕ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ.

ನಗರ ಹೊರವಲಯದ ಜಿಲ್ಲಾಡಳಿತ ಭವನದ ಸಮೀಪದ ಭಾರತ್ ಪೆಟ್ರೋಲಿಯಂ ಬಂಕ್ ಎದುರು ರೈತರು ಆಕ್ರೋಶ ವ್ಯಕ್ತಪಡಿಸಿದರು. ರೈತರಿಗೆ ಇಂಧನ ನೀಡದಿದ್ದರೆ ಬೇರೆ ಯಾರಿಗೂ ನೀಡಬಾರದು ಎಂದು ಆಗ್ರಹಿಸಿದರು. ಟ್ರ್ಯಾಕ್ಟರ್ ಹಾಗೂ ಪವರ್ ಟಿಲ್ಲರ್‌ಗಳೊಂದಿಗೆ ಬಂಕ್‌ಗೆ ಬಂದ ರೈತರು ಬಂಕ್ ಮಾಲೀಕ ಸಂದೀಪ್ ಜೊತೆ ವಾಗ್ವಾದ ನಡೆಸಿದರು. ಆಕ್ರೋಶಗೊಂಡ ರೈತರು ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ಹೆದ್ದಾರಿಯನ್ನು ತಡೆದರು. ರಸ್ತೆಯ ಮಧ್ಯೆ ಟ್ರ್ಯಾಕ್ಟರ್ ಮತ್ತು ಪವರ್ ಟಿಲ್ಲರ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದರು. ಇದರಿಂದ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ಸ್ಥಳಕ್ಕೆ ಆಗಮಿಸಿದ ಪೊಲೀಸರು ರೈತರ ಮನವೊಲಿಸಲು ಯತ್ನಿಸಿದರು. ಹೆದ್ದಾರಿ ಬಂದ್ ಮಾಡಿದ್ದಕ್ಕೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತರು ಮತ್ತು ಸಾರ್ವಜನಿಕರ ನಡುವೆ ವಾಗ್ವಾದವೂ ನಡೆಯಿತು. ರಸ್ತೆಗೆ ಅಡ್ಡಲಾಗಿ ನಿಲ್ಲಿಸಿದ್ದ ವಾಹನಗಳನ್ನು ತೆರವುಗೊಳಿಸುವಂತೆ ಪೊಲೀಸರು ಸೂಚನೆ ನೀಡಿದ ವೇಳೆ ಪಿಎಸ್‌ಐ ಮತ್ತು ರೈತರ ನಡುವೆ ಮಾತಿನ ಚಕಮಕಿ ನಡೆಯಿತು.

ಸಿಕೆಬಿ-4 ನಗರ ಹೊರವಲಯದ ಜಿಲ್ಲಾಡಳಿತ ಭವನದ ಸಮೀಪದ ಭಾರತ್ ಬಂಕ್ ನಲ್ಲಿ ಕ್ಯಾನ್‌ಗಳಿಗೆ ಪೆಟ್ರೋಲ್, ಡೀಸೆಲ್ ಹಾಕದ ಹಿನ್ನೆಲೆಯಲ್ಲಿ ರೈತರು ಪೆಟ್ರೋಲ್ ಬಂಕ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಯಶಸ್ಸಿಗೆ ಎಲ್ಲರೂ ಕೈಜೋಡಿಸಿ
ಗ್ಯಾರಂಟಿ ಯೋಜನೆಗಳು ಯಾವುದೇ ಕಾರಣಕ್ಕೂ ನಿಲ್ಲಲ್ಲ