ನಾಲೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿ ರೈತರಿಂದ ಹೆದ್ದಾರಿ ತಡೆದು ಪ್ರತಿಭಟನೆ

KannadaprabhaNewsNetwork |  
Published : Jun 10, 2025, 10:30 AM ISTUpdated : Jun 10, 2025, 10:31 AM IST
9ಕೆಎಂಎನ್ ಡಿ26 | Kannada Prabha

ಸಾರಾಂಶ

ರೈತರು ಬೆಳೆದಿರುವ ಕಬ್ಬು, ಭತ್ತ ಸೇರಿದಂತೆ ಅನೇಕ ಬೆಳೆಗಳು ಒಣಗುತ್ತಿವೆ. ಕೃಷಿ ಚಟುವಟಿಕೆಗಳು ಕುಂಟಿತಗೊಳ್ಳುತ್ತಿವೆ. ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದೆ. ಕನ್ನಂಬಾಡಿ ಅಣೆಕಟ್ಡೆಯಲ್ಲಿ ಈಗಾಗಲೇ 108 ಅಡಿಗಳಷ್ಡು ನೀರು ಸಂಗ್ರಹಗೊಂಡಿದೆ. ಮತ್ತಷ್ಟು ನೀರು ಅಣೆಕಟ್ಟಗೆ ಹರಿದು ಬತುವ ಸಾಧ್ಯತೆಯಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ಕೆಆರ್‌ಎಸ್ ಜಲಾಶಯದಿಂದ ಜಿಲ್ಲೆಯ ಎಲ್ಲಾ ನಾಲೆಗಳಿಗೂ ಕೂಡಲೇ ನೀರು ಹರಿಸುವಂತೆ ಒತ್ತಾಯಿಸಿ ರೈತರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.

ಪಟ್ಟಣದ ಕುವೆಂಪು ವೃತ್ತದ ಬಳಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಭೂಮಿತಾಯಿ ಹೋರಾಟ ಸಮಿತಿಯಿಂದ ರೈತ ಹೋರಾಟಗಾರ ಕೆ.ಎಸ್.ನಂಜಡೇಗೌಡ ಹಾಗೂ ಸಮಿತಿ ಅಧ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ನೂರಾರು ರೈತರು, ಮಾನವ ಸರಪಳಿ ನಿರ್ಮಿಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸಿ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ವಿರುದ್ಧ ಘೋಷಣೆ ಕೂಗಿದರು.

ರೈತರು ಬೆಳೆದಿರುವ ಕಬ್ಬು, ಭತ್ತ ಸೇರಿದಂತೆ ಅನೇಕ ಬೆಳೆಗಳು ಒಣಗುತ್ತಿವೆ. ಕೃಷಿ ಚಟುವಟಿಕೆಗಳು ಕುಂಟಿತಗೊಳ್ಳುತ್ತಿವೆ. ಈ ಬಾರಿ ಎಲ್ಲೆಡೆ ಉತ್ತಮ ಮಳೆಯಾಗಿದೆ. ಕನ್ನಂಬಾಡಿ ಅಣೆಕಟ್ಡೆಯಲ್ಲಿ ಈಗಾಗಲೇ 108 ಅಡಿಗಳಷ್ಡು ನೀರು ಸಂಗ್ರಹಗೊಂಡಿದೆ. ಮತ್ತಷ್ಟು ನೀರು ಅಣೆಕಟ್ಟಗೆ ಹರಿದು ಬತುವ ಸಾಧ್ಯತೆಯಿದೆ. ಆದರೂ ಕೃಷಿ ಚಟುವಟಿಕೆಗಳಿಗಾಗಿ ನಾಲೆಗಳಿಗೆ ನೀರು ಹರಿಸದೆ ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರು ಮೌನವಹಿಸಿದ್ದಾರೆ ಎಂದು ದೂರಿದರು.

ಕೂಡಲೇ ಜಿಲ್ಲೆಯ ಎಲ್ಲಾ ನಾಲೆಗಳಿಗೂ ನೀರು ಹರಿಸಬೇಕು. ಇಲ್ಲದಿದ್ದರೆ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ನಾಳೆ ಕೆಆರ್‌ಎಸ್‌ ಬಳಿ ಪ್ರತಿಭಟನಾ ಸಭೆ

ಕನ್ನಡಪ್ರಭ ವಾರ್ತೆ ಮಂಡ್ಯ

ರೈತರ ಜೀವನಾಡಿ ಕೆಆರ್‌ಎಸ್ ಅಣೆಕಟ್ಟೆ ಬಳಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಾಗೂ ಸ್ಥಳೀಯ ಪ್ರಗತಿಪರ ರೈತ ಮುಖಂಡರೊಂದಿಗೆ ಜೂ.11ರಂದು ಬೆಳಗ್ಗೆ 11 ಗಂಟೆಗೆ ಪ್ರತಿಭಟನಾ ಸಭೆ ಕರೆಯಲಾಗಿದೆ ಎಂದು ಸಮಿತಿಯ ಸಂಘಟನಾ ಕಾರ್ಯದರ್ಶಿ ಸುನಂದಾ ಜಯರಾಮ್ ತಿಳಿಸಿದ್ದಾರೆ.

ಕೆಆರ್‌ಎಸ್ ಅಣೆಕಟ್ಟೆ ಬಳಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆ ರದ್ದುಪಡಿಸಲು ಪ್ರತಿಭಟನಾ ಸಭೆ ಆಯೋಜಿಸಲಾಗಿದೆ. ಜು.6ರಂದು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ರೈತ ಸಂಘಟನೆಗಳ ಹಾಗೂ ಸಾರ್ವಜನಿಕರ ಸಭೆಯಲ್ಲಿ ಕಾವೇರಿ ಆರತಿ, ಅಮ್ಯೂಸ್‌ಮೆಂಟ್ ಪಾರ್ಕ್ ಯೋಜನೆಯನ್ನು ಕೈ ಬಿಡಲು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು. ಆದರೆ ಸರ್ಕಾರ ಕೆಆರ್‌ಎಸ್‌ ಅಣೆಕಟ್ಟೆ ಬಳಿ ಈ ಯೋಜನೆಗಳಿಗೆ ಸಂಬಂಧಿಸಿದಂತೆ ಕೆಲಸ ಕಾರ್ಯಗಳನ್ನು ಮುಂದುವರಿಸಿ ಮರಗಳನ್ನು ಕಡಿದು, ಪ್ಲಾಟ್‌ಫಾರಂ ಮಾಡಲು ಮುಂದಾಗಿದ್ದಾರೆ ಇದು ಖಂಡನೀಯ ವಿಷಯವಾಗಿದೆ, ಈ ಸಂಬಂಧ ಕೆಆರ್‌ಎಸ್‌ ಅಣೆಕಟ್ಟೆ ಬಳಿ ರೈತ ಸಂಘಟನೆಗಳು, ಪ್ರಗತಿಪರ ಸಂಘಟನೆಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯ ಗ್ರಾಮಗಳ ಸಾರ್ವಜನಿಕರ ಸಭೆ ಕರೆಯಲಾಗಿದೆ, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಲು ಕೊರಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಸಗೊಬ್ಬರ ಬಳಕೆ ಕಡಿಮೆ ಮಾಡಿ : ಸಿಎಂ ಸಲಹೆ
''ತಾಕತ್ತು ಇದ್ದರೆ ನೋಟಿನಲ್ಲಿರುವ ಗಾಂಧೀಜಿಯವರ ಭಾವಚಿತ್ರವನ್ನು ತೆಗೆಯಲಿ''