8ರಂದು ಉಡುಪಿ ಜಿಲ್ಲಾ ಕೃಷಿಕ ಸಂಘದಿಂದ ರೈತ ಸಮಾವೇಶ

KannadaprabhaNewsNetwork |  
Published : Feb 05, 2025, 12:32 AM IST
4ರೈತ | Kannada Prabha

ಸಾರಾಂಶ

ಉಡುಪಿ ಜಿಲ್ಲಾ ಕೃಷಿಕ ಸಂಘವು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್, ಎಸ್‌ಆರ್‌ಕೆ ಲ್ಯಾಡರ್ಸ್ ಪುತ್ತೂರು ಸಹಯೋಗದಲ್ಲಿ ಫೆ.8ರಂದು ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ಜಿಲ್ಲಾ ರೈತ ಸಮಾವೇಶ ನಡೆಯಲಿದೆ.

ಕನ್ನಡಪ್ರಭ ವಾರ್ತೆ ಉಡುಪಿ

ಉಡುಪಿ ಜಿಲ್ಲಾ ಕೃಷಿಕ ಸಂಘವು ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಮಂಗಳೂರು, ಈಸೀ ಲೈಫ್ ಎಂಟರ್‌ಪ್ರೈಸಸ್, ಎಸ್‌ಆರ್‌ಕೆ ಲ್ಯಾಡರ್ಸ್ ಪುತ್ತೂರು ಸಹಯೋಗದಲ್ಲಿ ಫೆ.8ರಂದು ಕುಂಜಿಬೆಟ್ಟು ಶ್ರೀ ಶಾರದಾ ಮಂಟಪ ಆವರಣದಲ್ಲಿ ಜಿಲ್ಲಾ ರೈತ ಸಮಾವೇಶ ನಡೆಯಲಿದೆ ಎಂದು ರೈತ ಸಂಘ ಅಧ್ಯಕ್ಷ ರಾಮಕೃಷ್ಣ ಶರ್ಮ ಬಂಟಕಲ್ಲು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ವಿಜಯಾ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನದ ಎಸ್. ನಾಗರಾಜ ಕೆದ್ಲಾಯ ಸಮಾವೇಶ ಉದ್ಘಾಟಿಸುವರು. ಕೃಷಿಕ ಸಂಘ ಅಧ್ಯಕ್ಷ ರಾಮಕೃಷ್ಣ ಶರ್ಮ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಬಡಗುಬೆಟ್ಟು ಕೋ-ಆಪರೇಟಿವ್ ಸೊಸೈಟಿಯ ಜಯಕರ ಶೆಟ್ಟಿ ಇಂದ್ರಾಳಿ, ಸಂಸ್ಕೃತಿ ವಿಶ್ವ ಪ್ರತಿಷ್ಠಾನ ಉಡುಪಿಯ ಸ್ಥಾಪಕ ಗೌರವಾಧ್ಯಕ್ಷ ವಿಶ್ವನಾಥ ಶೆಣೈ, ಕಾಪು ಶ್ರೀ ಲಕ್ಷ್ಮೀ ಜನಾರ್ದನ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕರ್ಣಾಟಕ ಬ್ಯಾಂಕ್ ಉಡುಪಿ ಎ.ಜಿ.ಎಂ. ವಾದಿರಾಜ ಭಟ್ ಕೆ., ಪೆರಂಪಳ್ಳಿ ಎಡೇರಿ ಬೊಬ್ಬರ್ಯ ದೈವಸ್ಥಾನದ ಆಡಳಿತ ಮೊಕ್ತಸರ ಪಿ.ಎನ್. ಶಶಿಧರ ರಾವ್, ಈಸೀ ಲೈಫ್ ಎಂಟರ್ ಪ್ರೈಸಸ್‌ನ ಗೋವಿಂದ ರಾಜ್ ಕಳಾಯಿ, ಪುತ್ತೂರು ಎಸ್.ಆರ್.ಕೆ. ಲ್ಯಾಡರ್ಸ್‌ನ ಕೇಶವ ಆಮೈ ಭಾಗವಹಿಸಲಿದ್ದಾರೆ ಎಂದರು.ಕೃಷಿ ವಿಚಾರ ತಾಂತ್ರಿಕ ಸಮಾವೇಶದಲ್ಲಿ ವೈಜ್ಞಾನಿಕ ಅಡಕೆ ಬೇಸಾಯ ಬಗ್ಗೆ ವಲಯ ತೋಟಗಾರಿಕಾ ಮತ್ತು ಕೃಷಿ ಸಂಶೋಧನಾ ಕೇಂದ್ರದ ಸಹ ಸಂಶೋಧನಾ ನಿರ್ದೇಶಕ ಡಾ. ಧನಂಜಯ, ಆರೋಗ್ಯ ನೆಮ್ಮದಿಗಾಗಿ ಕೃಷಿ ಬಗ್ಗೆ ಉಡುಪಿ ಪೊಲೀಸ್ ಉಪಾಧೀಕ್ಷಕ ಪ್ರಭು ಡಿ.ಟಿ., ಲಾಭದಾಯಕ ಕೃಷಿಗೆ ವಿವಿಧ ತಂತ್ರಜ್ಞಾನದ ಬಗ್ಗೆ ಬ್ರಹ್ಮಾವರ ಕೃಷಿ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ. ಲಕ್ಷ್ಮಣ್, ಹೈನುಗಾರಿಕೆಯಲ್ಲಿ ಕೃತಕ ಗರ್ಭಧಾರಣೆಯ ಸವಾಲುಗಳ ಬಗ್ಗೆ ಮಣಿಪಾಲದ ಮುಖ್ಯ ಪಶು ವೈದ್ಯಾಧಿಕಾರಿ ಡಾ.ಪ್ರಶಾಂತ ಶೆಟ್ಟಿ, ಭತ್ತದ ಇಳುವರಿ ಹೆಚ್ಚಿಸುವ ವಿಧಾನಗಳ ಬಗ್ಗೆ ಕೃಷಿ ಸಂಶೋಧನಾ ಕೇಂದ್ರ ಬ್ರಹ್ಮಾವರದ ಡಾ.ಸುಧೀರ್ ಕಾಮತ್, ಆಹಾರ ಪದ್ಧತಿ ಮತ್ತು ಮಧುಮೇಹ ಬಗ್ಗೆ ಡಾ.ಶ್ರುತಿ ಬಲ್ಲಾಳ್ ಅಂಬಲಪಾಡಿ ಉಪನ್ಯಾಸ ನೀಡುವರು.ಕೃಷಿ ಇಲಾಖೆಯಿಂದ ಸಿಗುವ ಸರ್ಕಾರಿ ಸೌಲಭ್ಯಗಳ ಬಗ್ಗೆ ಉಡುಪಿಯ ಜಂಟಿ ಕೃಷಿ ನಿರ್ದೇಶಕಿ ಪೂರ್ಣಿಮಾ, ತೋಟಗಾರಿಕೆ ಇಲಾಖೆಯಿಂದ ಸಿಗುವ ಸೌಲಭ್ಯಗಳ ಬಗ್ಗೆ ಉಡುಪಿ ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಭುವನೇಶ್ವರಿ ಮತ್ತು ವಿದ್ಯುತ್ ಗ್ರಾಹಕರಿಗೆ ಅಗತ್ಯ ಮಾಹಿತಿಗಳನ್ನು ಉಡುಪಿ ಮೆಸ್ಕಾಂ ಅಧೀಕ್ಷಕ ಇಂಜಿನಿಯರ್ ದಿನೇಶ್ ಉಪಾಧ್ಯ ನೀಡಲಿದ್ದಾರೆ.ಕೃಷಿ ಮಾಹಿತಿ-ಮಾರ್ಗದರ್ಶನಗಳ ಜೊತೆಗೆ ಮಾರುಕಟ್ಟೆಯಲ್ಲಿ ಲಭ್ಯವಿರುವ ಆಧುನಿಕ ಕೃಷಿ ಪರಿಕರಗಳು, ಹೊಸ ಆವಿಷ್ಕೃತ ಯಂತ್ರೋಪಕರಣಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳು, ವಿವಿಧ ಬೆಳೆಗಳ ಸುಧಾರಿತ ತಂತ್ರಜ್ಞಾನದಿಂದ ಬೆಳೆಸಿದ ಗಿಡಗಳು, ಬೀಜ, ಕೃಷಿ ಸಂಬಂಧಿ ಪುಸ್ತಕ ಮಳಿಗೆಗಳು ಇರುತ್ತವೆ ಎಂದರು. ಸುದ್ದಿಗೋಷ್ಠಿಯಲ್ಲಿ ಪ್ರ.ಕಾರ್ಯದರ್ಶಿ ಶ್ರೀನಿವಾಸ್ ಭಟ್ ಕುದಿ, ಕಾರ್ಯದರ್ಶಿ ರವೀಂದ್ರ ಗುಜ್ಜರಬೆಟ್ಟು, ಉಪಾಧ್ಯಕ್ಷ ದಿನೇಶ್ ಶೆಟ್ಟಿ ಹೆರ್ಗ, ಶ್ರೀನಿವಾಸ್ ಆಚಾರ್ಯ ಬೈಲೂರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15 ದಿನದ ಹಿಂದೆ ಮದುವೆ ಆಗಿದ್ದ ಜೋಡಿ ಭೀಕರ ಅಪಘಾತಕ್ಕೆ ಬಲಿ
ಶ್ರೀಮಂತರು ಗ್ಯಾರಂಟಿಯಿಂದ ದೂರ ಇರಲಿ: ಎಂ.ಬಿ.ಪಾಟೀಲ್‌