ಕನ್ನಡಪ್ರಭ ವಾರ್ತೆ ಬೀದರ್
ಈ ಕುರಿತು ಜಿಲ್ಲಾ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಸ್ವಾಮಿ, ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸುವ ವಿಚಾರದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಜವಾಬ್ದಾರಿ ಹೊರಿಸುತ್ತಿವೆ. ರೈತರ ಹಿತಾಸಕ್ತಿ ಕಾಪಾಡುವ ಬದಲು ಸಕ್ಕರೆ ಕಾರ್ಖಾನೆಗಳ ಮಾಲೀಕರು ಹಾಗೂ ಮಧ್ಯವರ್ತಿಗಳ ಹಿತಾಸಕ್ತಿಗೆ ಆದ್ಯತೆ ನೀಡುತ್ತಿವೆ ಎಂದು ಆರೋಪಿಸಿದರು.
ಮಂಗಳವಾರ ಬೆಳಿಗ್ಗೆ 11 ಗಂಟೆಗೆ ನಗರದ ಡಾ.ಅಂಬೇಡ್ಕರ್ ವೃತ್ತದಿಂದ ರೈತರು ಪ್ರತಿಭಟನಾ ಮೆರವಣಿಗೆ ಆರಂಭಿಸಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲಿದ್ದಾರೆ. ಬೇಡಿಕೆಗಳಿಗೆ ಸ್ಪಂದನೆ ಸಿಗದಿದ್ದಲ್ಲಿ ಜೈಲ್ ಭರೋ ಚಳವಳಿಯನ್ನು ತೀವ್ರಗೊಳಿಸಲಾಗುವುದು ಎಂದರು. ಅನ್ನದಾತರ ನ್ಯಾಯಯುತ ಬೇಡಿಕೆಗಳ ಪರವಾಗಿ ಎಲ್ಲ ಪಕ್ಷದವರು ಭೇದಭಾವಿಲ್ಲದೆ ನಿಲ್ಲಬೇಕು. ಜಿಲ್ಲೆಯ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಬೇಕು ಎಂದು ಸ್ವಾಮಿ ಕರೆ ನೀಡಿದರುಈ ಸಂದರ್ಭದಲ್ಲಿ ರೈತ ಸಂಘದ ಪ್ರಮುಖರಾದ ಬಾಬುರಾವ ಹೊನ್ನಾ, ಕೊಂಡಿಬಾರಾವ ಪಾಂಡ್ರೆ, ಮಲ್ಲಾರಡ್ಡಿ ಮುರಾಳ, ಸುಖೇಶ ರಡ್ಡಿ ಜೈನಾಪುರ, ಶಿವರಾಜ ಪಾಟೀಲ ಅತಿವಾಳ, ಮಲ್ಲಿಕಾರ್ಜುನ ಬಿರಾದಾರ, ಅಶೋಕ ಕಾರಬಾರಿ, ಧೂಳಪ್ಪ ಅಣದೂರ, ಶಂಕ್ರೆಪ್ಪ ಪಾಟೀಲ, ನಜಿರಮಿಯಾ ಚೊಂಡಿ, ಇತರರು ಪತ್ರಿಕಾಗೋಷ್ಟಿಯಲ್ಲಿದ್ದರು.