ಕನಕಪುರ: ತಾಲೂಕು ಕಚೇರಿಯಲ್ಲಿ ಲಂಚ ಕೊಡದೆ ರೈತರ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಕೂಡಲೆ ಅಧಿಕಾರಿಗಳ ಸಭೆ ಕರೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ಜಿಡ್ಡು ಹಿಡಿದಿರುವ ಆಡಳಿತ ವ್ಯವಸ್ಥೆಗೆ ಚುರುಕುಗೊಳಿಸಬೇಕು ಎಂದು ರಾಜ್ಯ ರೈತ ಸಂಘದ ಸಂಚಾಲಕ ಚೀಲೂರು ಮುನಿರಾಜು ಆಗ್ರಹಿಸಿದರು.
ಅಧಿಕಾರಿಗಳ ಲಂಚದ ಆಸೆ ಮತ್ತು ಬೇಜವಾಬ್ದಾರಿ ತನದಿಂದ ರೈತರು ಕೊಟ್ಟ ದಾಖಲೆಗಳನ್ನು ತಿಂಗಳುಗಟ್ಟಲೆ ಕೊಡದೆ ಸತಾಯಿಸುತ್ತಾರೆ. ಅಧಿಕಾರಿಗಳು ರೈತರ ಕೆಲಸಗಳಿಗೆ ಜಮೀನುಗಳಿಗೆ ಬಂದರೆ ಸಾವಿರಾರು ರು. ಲಂಚ ಕೊಡಬೇಕು. ಇದರಿಂದ ರೈತರು ಸರ್ಕಾರಿ ಕಚೇರಿಗೆ ಅಲೆದಾಡುತ್ತಿದ್ದಾರೆ. ಇದರಿಂದ ರೈತರ ಕೃಷಿ ಚಟುವಟಿಕೆಗಳು ಕುಂಠಿತಗೊಂಡು ರೈತರು ಸಾಲಗಾರರಾಗುತ್ತಿದ್ದಾರೆ. ಅದಕ್ಕೆ ಅಧಿಕಾರಿಗಳೆ ಹೊಣೆ. ಈ ವಿಷಯ ಅಧಿಕಾರಿಗಳ ಗಮನಕ್ಕೆ ತಂದರೂ ಇದುವರೆಗೂ ಯಾವುದೇ ಕ್ರಮ ಕೈಗೊಡಿಲ್ಲ. ತಾಲೂಕು ದಂಡಾಧಿಕಾರಿಗಳು ಅಧಿಕಾರಿಗಳ ಸಭೆ ಕರೆದು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ತಾಲೂಕು ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.
ಈ ವೇಳೆ ರೈತ ಸಂಘದ ಜಿಲ್ಲಾ ಕಾರ್ಯದರ್ಶಿ ಪಡುವಣಗೆರೆ ಕುಮಾರ್, ರೈತ ಮುಖಂಡ ಸಿದ್ದರಾಜು, ರವಿಚಂದ್ರ ಇತರರು ಉಪಸ್ಥಿತರಿದ್ದರು.ಕೆ ಕೆ ಪಿ ಸುದ್ದಿ 01: