ಬರಪೀಡಿತ ಪ್ರದೇಶವೆಂದು ಘೋಷಿಸಲು ರೈತರ ಆಗ್ರಹ

KannadaprabhaNewsNetwork |  
Published : Jul 16, 2026, 03:00 AM IST
15ಎಚ್.ಎಲ್.ವೈ-3: ಹಳಿಯಾಳ ತಾಲೂಕವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕೆಂದು ಆಗ್ರಹಿಸಿ ಹಳಿಯಾಳದಲ್ಲಿ ಬುಧವಾರ ಕಬ್ಬಿ ಬೆಳೆಗಾರರು ಹಾಗೂ ರೈತ ಸಂಘಟನೆಯ ಪ್ರಮುಖರು ಸುದ್ದಿಗೋಷ್ಠಿಯನ್ನು ನಡೆಸಿದರು.  | Kannada Prabha

ಸಾರಾಂಶ

ಮುಂಗಾರು ವೈಫಲ್ಯದಿಂದ ತಾಲೂಕಿನ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಹಳಿಯಾಳ ಬರಪೀಡಿತ ತಾಲೂಕೆಂದು ಘೋಷಿಸಿ ರೈತರಿಗೆ ಮಧ್ಯಂತರ ಪರಿಹಾರ ಘೋಷಿಸಬೇಕು.

ಕನ್ನಡಪ್ರಭ ವಾರ್ತೆ ಹಳಿಯಾಳ

ಮುಂಗಾರು ವೈಫಲ್ಯದಿಂದ ತಾಲೂಕಿನ ರೈತರು ಸಂಕಷ್ಟಕ್ಕೆ ಒಳಗಾಗಿದ್ದು, ರಾಜ್ಯ ಸರ್ಕಾರ ಕೂಡಲೇ ಹಳಿಯಾಳ ಬರಪೀಡಿತ ತಾಲೂಕೆಂದು ಘೋಷಿಸಿ ರೈತರಿಗೆ ಮಧ್ಯಂತರ ಪರಿಹಾರ ಘೋಷಿಸಬೇಕು ಎಂದು ಕಬ್ಬು ಬೆಳೆಗಾರರ ಹಿತರಕ್ಷಣಾ ಸಮಿತಿಯ ಅಧ್ಯಕ್ಷ ನಾಗೇಂದ್ರ ಜಿವೋಜಿ ಆಗ್ರಹಿಸಿದ್ದಾರೆ.

ಬುಧವಾರ ಮರಾಠ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜು. 20ರಂದು ತಾಲೂಕು ಆಡಳಿತದ ವಿರುದ್ಧ ಪ್ರತಿಭಟನೆ ನಡೆಸಿ ನಮ್ಮ ಕೂಗನ್ನು ರಾಜ್ಯ ಸರ್ಕಾರಕ್ಕೆ ತಲುಪಿಸಲಾಗುವುದೆಂದರು.

ತಾಲೂಕಿನಲ್ಲಿ ಜೂನ್ 1ರಿಂದ ಇಲ್ಲಿಯವರೆಗೆ ವಾಡಿಕೆಯಂತೆ 448 ಮಿ.ಮಿ ಮಳೆಯಾಗಬೇಕಾಗಿತ್ತು, ಆದರೆ ಕೇವಲ 284 ಮಿಮಿ ಮಳೆಯಾಗಿದೆ. ಕಳೆದೊಂದು ವಾರದಿಂದ ತಾಲೂಕಿನೆಲ್ಲೆಡೆ ಮಳೆಯು ಸಂಪೂರ್ಣವಾಗಿ ಸ್ಥಗಿತಗೊಂಡಿದ್ದು, ಬಿರುಬಿಸಿಲಿನ ವಾತಾವರಣದಿಂದ ಭತ್ತ ಸೇರಿದಂತೆ ಗೋವಿನಜೋಳ ಹಾಗೂ ವಿವಿಧ ಬೆಳೆಗಳು ಒಣಗುವ ಹಂತ ತಲುಪಿವೆ. ರೈತರು ಇದ್ದ ಬೆಳೆಯನ್ನು ಸಂರಕ್ಷಿಸಲು ಹರಸಾಹಸ ಪಡುತ್ತಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ತಾಲೂಕಿನ ಸದ್ಯದ ಪರಿಸ್ಥಿತಿ ಮನಗಂಡು ರಾಜ್ಯ ಸರ್ಕಾರವು ತಕ್ಷಣ ಹಳಿಯಾಳ ವಿಧಾನಸಭಾ ಕ್ಷೇತ್ರವನ್ನು ಬರಪೀಡಿತ ಪ್ರದೇಶವೆಂದು ಘೋಷಿಸಬೇಕು, ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿ (ಎನ್.ಡಿ.ಆರ್.ಎಫ್) ಹಾಗೂ ರಾಜ್ಯ ವಿಪತ್ತು ಪರಿಹಾರ ನಿಧಿ(ಎಸ್.ಡಿ.ಆರ್.ಎಫ್) ಮಾರ್ಗಸೂಚಿಯಂತೆ ಬರಪರಿಹಾರ ಕಾಮಗಾರಿ ಆರಂಭಿಸಿ ರೈತರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.

ತಾಲೂಕಿನ ಕೆರೆಗಳನ್ನು ತುಂಬಿಸುವ ಕಾಳಿನದಿ ನೀರಾವರಿ ಯೋಜನೆಯು ಕಳೆದ 8-9 ವರ್ಷಗಳಿಂದ ವಿಳಂಬವಾಗುತ್ತಿರುವುದು ರೈತರ ನೋವಿನ ಮೇಲೆ ಬರೆ ಎಳೆದಂತಾಗಿದೆ ಎಂದು ಖೇದ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ತಾಲೂಕು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಶಂಕರ ಕಾಜಗಾರ, ಪ್ರಮುಖರಾದ ಸುರೇಶ ಶಿವಣ್ಣನವರ, ರಾಮದಾಸ ಬೆಳಗಾಂವಕರ, ಬಳಿರಾಮ ಮೋರಿ, ಮಂಜುಳಾ ಗೌಡಾ, ನಕುಲ ಕೆಂಚಣ್ಣನವರ, ಸಾತೇರಿ ಗೋಡೆಮನಿ, ಮಹೇಶ ಪಾಳೇಕರ, ಚಂದ್ರು ಲಕ್ಕನಗೌಡ ಹಾಗೂ ಇತರ ರೈತ ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ರಾಮೀಣ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳು ವರದಾನ: ಬಿಇಒ ಬಿ.ವಿ. ಪಾಟೀಲ
ಕೆರೆ, ಡ್ಯಾಂ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಿ: ಗೌರವ ಗುಪ್ತಾ