ಕನ್ನಡಪ್ರಭ ವಾರ್ತೆ ಕೋಲಾರ
ಹೈಕೋರ್ಟ್ ವಕೀಲ ಶಿವಪ್ರಕಾಶ್ ಮಾತನಾಡಿ, ರೈತರಿಗೆ ಸರಕಾರವೇ ಕಾನೂನು ಪ್ರಕಾರ ಹಕ್ಕು ಪತ್ರಗಳನ್ನು ನೀಡಿದ್ದರೂ ಸಹ ಅವರ ಜಮೀನುಗಳನ್ನು ಅಕ್ರಮವಾಗಿ ದೌರ್ಜನ್ಯದಿಂದ ರೈತರಿಂದ ಸ್ವಾಧೀನಕ್ಕೆ ಪಡೆದು, ಕೋಟ್ಯತರ ರೂ.ಗಳ ಮೌಲ್ಯದ ಮಾವಿನ ಮರಗಳು ತರಕಾರಿ ಬೆಳೆಗಳನ್ನು ನಾಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದರು.
ಸರ್ವಾಧಿಕಾರಿ ಧೋರಣೆಲಕ್ಷಾಂತರ ಮಾವಿನ ಮರಗಳನ್ನು ಕಡಿದು ಹಾಕಿದ ಅರಣ್ಯ ಅಧಿಕಾರಿಗಳ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಇದು ಒಂದು ರೀತಿಯಲ್ಲಿ ಜಿಲ್ಲೆಯಲ್ಲಿ ಸರ್ವಾಧಿಕಾರಿ ದೋರಣೆಯ ರೀತಿಯಲ್ಲಿ ನಡೆದುಕೊಂಡಿದ್ದಾರೆ. ಜಿಲ್ಲೆಯ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಜನರ ರೈತರ ಬಗ್ಗೆ ಇಚ್ಛಾಶಕ್ತಿ ಇಲ್ಲವಾಗಿದೆ, ಜಿಲ್ಲೆಯ ಚರಿತ್ರೆ ತಿಳಿದು ಗೌರವ ಕೊಡುವುದನ್ನು ಅಧಿಕಾರಿಗಳು ಕಲಿಯಬೇಕು. ಮೊದಲೇ ಕೋಲಾರ ಚಿಕ್ಕಬಳ್ಳಾಪುರ ಜಿಲ್ಲೆಗಳು ಬರಪೀಡಿತ ಪ್ರದೇಶವಾಗಿದ್ದು ಅತಿ ಕಡಿಮೆ ನೀರು ಬಳಕೆ ಮಾಡಿ ಹಣ್ಣು ತರಕಾರಿಗಳನ್ನು ಬೆಳೆದು ಜೀವನ ನಡೆಸುತ್ತಿದ್ದಾರೆ, ಇಂತಹ ಸಂದರ್ಭದಲ್ಲಿ ರೈತರ ಜಮೀನುಗಳಿಗೆ ನುಗ್ಗಿ ಏಕಾಏಕಿ ದೌರ್ಜನ್ಯದಿಂದ ಜಮೀನನ್ನು ವಶಪಡಿಸಿಕೊಂಡಿದ್ದಾರೆ, ಇದು ರೈತರಿಗೆ ಹಾಗೂ ಪ್ರಕೃತಿಗೆ ಮಾಡಿದ ದ್ರೋಹ ಎಂದರು.ಡಿಎಫ್‌ಒ ವಿರುದ್ಧ ಕ್ರಮಕ್ಕೆ ಆಗ್ರಹ
ಮನವಿ ಪತ್ರ ಸ್ವೀಕರಿಸಲು ಜಿಲ್ಲಾಧಿಕಾರಿ ಪರವಾಗಿ ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ ಆಗಮಿಸಿದ್ದರು ಆದರೆ ಸ್ಥಳಕ್ಕೆ ಜಿಲ್ಲಾಧಿಕಾರಿಯೇ ಬರಬೇಕು ಎಂದು ಪಟ್ಟು ಹಿಡಿದು ಒತ್ತಾಯಿಸಿದಾಗ ಎಸಿ ಅಲ್ಲಿಂದ ನಿರ್ಗಮಿಸಿದರು ನಂತರ ಪ್ರತಿಭಟನಾಕಾರರು ಜಿಲ್ಲಾಧಿಕಾರಿ ಕಛೇರಿಗೆ ತೆರಳಿ ಮನವಿ ಸಲ್ಲಿಸಿದರುಜಂಟಿ ಸರ್ವೇ ನಡೆಸುವ ಭರವಸೆ
ಮನವಿ ಸ್ವೀಕರಿಸಿ ಮಾತನಾಡಿದ ಡಿಸಿ ಅಕ್ರಂಪಾಷ, ಅರಣ್ಯ ಮತ್ತು ಕಂದಾಯ ಇಲಾಖೆಯ ನೇತೃತ್ವದಲ್ಲಿ ಜಂಟಿ ಸರ್ವೆ ನಡೆಸಲಾಗುತ್ತದೆ ಅಲ್ಲಿ ತನಕ ಒತ್ತುವರಿ ತೆರವು ಮಾಡುವುದಿಲ್ಲ ಎಂದು ತಿಳಿಸಿದರುಪ್ರತಿಭಟನೆಯಲ್ಲಿ ಸಾಹಿತಿ ಹರಿಹರ ಪ್ರಿಯಾ, ರೈತ ಮುಖಂಡರಾದ ಅಬ್ಬಣಿ ಶಿವಪ್ಪ, ಟಿ.ಎಂ.ವೆಂಕಟೇಶ್, ಕೋಟಿಗಾನಹಳ್ಳಿ ಗಣೇಶ್ ಗೌಡ, ಕೂಟೇರಿ ನಾಗರಾಜ್, ಪಿ.ಆರ್.ನವೀನ್ ಕುಮಾರ್, ಗೋಪಾಲ್, ವಿಜಯಕೃಷ್ಣ, ನಾರಾಯಣರೆಡ್ಡಿ, ಅಲಹಳ್ಳಿ ವೆಂಕಟೇಶ್, ಆನಂದ್ ಕುಮಾರ್ ಇದ್ದರು