ಎಕರೆಗೆ ಮೂರು ಚೀಲ ಯೂರಿಯಾ ಒದಗಿಸಲು ರೈತರ ಆಗ್ರಹ

KannadaprabhaNewsNetwork |  
Published : Jun 05, 2026, 02:15 AM IST
ಹಗರಿಬೊಮ್ಮನಹಳ್ಳಿಯಲ್ಲಿ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಎಕರೆಗೆ ಮೂರು ಚೀಲ ಯೂರಿಯಾ ವಿತರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.  | Kannada Prabha

ಸಾರಾಂಶ

ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ೩೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು ಸಜ್ಜೆ ಬಿತ್ತನೆ ಭರದಿಂದ ಸಾಗಿದೆ.

ಹಗರಿಬೊಮ್ಮನಹಳ್ಳಿ: ತಾಲೂಕಿನಾದ್ಯಂತ ವಾಡಿಕೆಯ ಮೊದಲೇ ಮುಂಗಾರು ಮಳೆ ಸುರಿಯುತ್ತಿದ್ದು, ಯೂರಿಯಾ ರಸಗೊಬ್ಬರದ ಅಭಾವದಿಂದಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಕೃಷಿ ಚಟುವಟಿಕೆಗಳು ಅತಂತ್ರಗೊಂಡಿವೆ ಎಂದು ತಾಲೂಕು ಕೃಷಿಕ ಸಮಾಜದ ಅಧ್ಯಕ್ಷ ಕೆ.ಪಿ.ದೇವರಾಜ ಕಳವಳ ವ್ಯಕ್ತಪಡಿಸಿದರು.

ಹೆಚ್ಚುವರಿ ಯೂರಿಯಾ ವಿತರಣೆಗೆ ಆಗ್ರಹಿಸಿ ರಾಜ್ಯ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್ ಅವರಿಗೆ ಗುರುವಾರ ಸಲ್ಲಿಸಿದ ಮನವಿಯ ನೇತೃತ್ವ ವಹಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ತಾಲೂಕಿನಾದ್ಯಂತ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ೩೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಮೆಕ್ಕೆಜೋಳ ಮತ್ತು ಸಜ್ಜೆ ಬಿತ್ತನೆ ಭರದಿಂದ ಸಾಗಿದೆ. ಈಗ ಎರಡೂ ಬೆಳೆಗಳಿಗೆ ಯೂರಿಯಾ ನೀಡುವುದು ಅಗತ್ಯವಾಗಿದೆ. ಆದರೆ, ಸರ್ಕಾರ ಎಫ್‌ಐಡಿ ಆಧರಿಸಿ ಎಕರೆಗೆ ನೀಡುವ ಒಂದು ಚೀಲ ಯೂರಿಯಾ ಸಾಕಾಗುವುದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ತಾಲೂಕಿನ ಕೃಷಿ ಚಟುವಟುಕೆಗಳಿಗೆ ಅಗತ್ಯ ಯೂರಿಯಾ ದಾಸ್ತಾನು ಕುರಿತು ಕೂಡ ಕೃಷಿ ಅಧಿಕಾರಿಗಳು ರೈತರಿಗೆ ಮಾಹಿತಿ ಒದಗಿಸುತ್ತಿಲ್ಲ. ಈಗಿರುವ ಎಕರೆಗೆ ಒಂದು ಚೀಲ ಯೂರಿಯಾ ವಿತರಣೆ ಪರಿಷ್ಕರಿಸಬೇಕು. ಎಕರೆಗೆ ಕನಿಷ್ಠ ಮೂರು ಚೀಲ ಯೂರಿಯಾ ಒದಗಿಸಲು ಕೃಷಿ ಅಧಿಕಾರಿಗಳು ಅಗತ್ಯ ಕ್ರಮ ವಹಿಸಿಬೇಕು ಎಂದು ಅವರು ಆಗ್ರಹಿಸಿದರು.

ಉಪ ತಹಸೀಲ್ದಾರ್ ಶಿವಕುಮಾರ ಗೌಡ ಮನವಿ ಸ್ವೀಕರಿಸಿದರು. ಸಂಘದ ತಾಲೂಕು ಗೌರವಾಧ್ಯಕ್ಷ ಸೀಗೇನಹಳ್ಳಿ ನಾಗೇಂದ್ರಪ್ಪ, ಯುವ ಘಟಕದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಚ್.ಸಂಜೀವ್, ಉಪಾಧ್ಯಕ್ಷ ತಂಬ್ರಹಳ್ಳಿ ವಸಂತ್, ಸಲಹಾ ಸಮಿತಿಯ ಅಧ್ಯಕ್ಷ ಬನ್ನಿಗೋಳು ಮಹೇಶ್, ಮಾಜಿ ಅಧ್ಯಕ್ಷ ಆರ್.ಟಿ.ಕಾಳಪ್ಪ, ಕೆಚ್ಚಿನಬಂಡಿ ದುರುಗಪ್ಪ, ಬಸಣ್ಣ, ಎಣ್ಣಿ ನಾಗಪ್ಪ ಹಾಗೂ ಆರ್.ಎಂ.ವೀರೇಶ್ ಮತ್ತಿತರರಿದ್ದರು.

ಹಗರಿಬೊಮ್ಮನಹಳ್ಳಿಯಲ್ಲಿ ರೈತ ಸಂಘದ ತಾಲೂಕು ಘಟಕದ ಪದಾಧಿಕಾರಿಗಳು ಎಕರೆಗೆ ಮೂರು ಚೀಲ ಯೂರಿಯಾ ವಿತರಿಸುವಂತೆ ಆಗ್ರಹಿಸಿ ತಹಸೀಲ್ದಾರ್ ಅವರಿಗೆ ಗುರುವಾರ ಮನವಿ ಸಲ್ಲಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಸ್ಐಟಿ ರಚನೆ ಆದಾಗ ಡಾ। ಹೆಗ್ಗಡೆ ಜೈಲಿಗೆ ಹೋಗ್ತಾರೆ ಅಂತ ಸಂಭ್ರಮಿಸಿತ್ತು ಬುರುಡೆ ಗ್ಯಾಂಗ್‌: ಚಿನ್ನಯ್ಯ
ಗೃಹಲಕ್ಷ್ಮಿ ಸ್ಕೀಂನಿಂದ 3.89 ಲಕ್ಷ ಮಂದಿ ಫಲಾನುಭವಿಗಳು ಔಟ್‌