ಕಬ್ಬು ದರ ನಿಗದಿ, ಕಳೆದ ವರ್ಷದ ಬಾಕಿ ಹಣ ₹300 ಸಕ್ಕರೆ ಕಾರ್ಖಾನೆಗಳು ತಕ್ಷಣವೇ ಪಾವತಿಸಬೇಕೆಂದು ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಶನಿವಾರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.
ಕನ್ನಡಪ್ರಭ ವಾರ್ತೆ ಮುಧೋಳ
ಕಬ್ಬು ದರ ನಿಗದಿ, ಕಳೆದ ವರ್ಷದ ಬಾಕಿ ಹಣ ₹300 ಸಕ್ಕರೆ ಕಾರ್ಖಾನೆಗಳು ತಕ್ಷಣವೇ ಪಾವತಿಸಬೇಕೆಂದು ಆಗ್ರಹಿಸಿ ರೈತ ಸಂಘದ ನೇತೃತ್ವದಲ್ಲಿ ನೂರಾರು ರೈತರು ಶನಿವಾರ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆದು ಆಕ್ರೋಶ ವ್ಯಕ್ತಪಡಿಸಿದರು.ರೈತ ಮುಖಂಡರಾದ ಬಸವಂತಪ್ಪ ಕಾಂಬಳೆ ಮಾತನಾಡಿದರು. ರಾಜ್ಯೋತ್ಸವ ಆಚರಣೆಯ ಬೆನ್ನಲ್ಲೇ ರೈತರು ವಿಭಿನ್ನ ರೀತಿಯಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದು, ವಿವಿಧ ಸಕ್ಕರೆ ಕಾರ್ಖಾನೆಗಳತ್ತ ಯಾತ್ರೆ ನಡೆಸಲು ನಿರ್ಧರಿಸಿದ್ದಾರೆ. ಇದರ ಭಾಗವಾಗಿ ಸೋಮವಾರ ಮಧ್ಯಾಹ್ನ 12 ಗಂಟೆಗೆ ಬೆಳಗಾವಿಯ ಸಂಗೊಳ್ಳಿ ರಾಯಣ್ಣ ವೃತ್ತದಿಂದ ಪ್ರಭುಲಿಂಗೇಶ್ವರ ಮತ್ತು ನಿರಾಣಿ ಸಕ್ಕರೆ ಕಾರ್ಖಾನೆಗಳಿಗೆ ತೆರಳಿ ಕಳೆದ ವರ್ಷದ ಬಾಕಿ ಹಣ ₹300 ಮತ್ತು 2ನೇ ಕಂತಿನ ಹಣ ತಕ್ಷಣ ಬಿಡುಗಡೆ ಮಾಡುವಂತೆ ಒತ್ತಾಯಿಸಲು ನಿರ್ಧರಿಸಿದ್ದಾರೆ.
ರೈತ ಮುಖಂಡರಾದ ಪ್ರಕಾಶ್ ರಾಮತೀರ್ಥ, ಬಸವಂತ ಕಾಂಬಳೆ, ದುಂಡಪ್ಪ ಯರಗಟ್ಟಿ, ನಾಗೇಶ ಸೊರಗಾಂವಿ, ಮಹೇಶ ಪಾಟೀಲ, ಹಣಮಂತ ಗೌಡ ಪಾಟೀಲ, ಬಂಡು ಘಾಟಗೆ ಮತ್ತು ಗಂಗಾಧರ ಮೇಟಿ ಅವರು ಮಾತನಾಡಿ ಕಬ್ಬು ಬೆಳೆಗಾರರ ಬೇಡಿಕೆಗೆ ನಿರ್ಲಕ್ಷ್ಯ ತೋರಿಸುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು.
ಸ್ಥಳಕ್ಕೆ ಭೇಟಿ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ್ ಗೋಯಲ್ ಅವರು, ಸೈದಾಪುರ ಗೋದಾವರಿ ಸಕ್ಕರೆ ಕಾರ್ಖಾನೆ ನಿರ್ದೇಶಕ ಬಾಲು ಭಕ್ಷಿ ಮತ್ತು ಕೆ.ಎಂ.ಮ್ಯಾನೇಜರ್ ಈರಣ್ಣ ಕನಬೂರ ಅವರೊಂದಿಗೆ ಸುದೀರ್ಘ ಮಾತುಕತೆ ನಡೆಸಿದರು. ಮಾತುಕತೆಯ ಬಳಿಕ 2ನೇ ಕಂತಿನ ಹಣ ಪಾವತಿಸಲು ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಗೆ ಎರಡು ದಿನಗಳ ಕಾಲಾವಕಾಶ ನೀಡಲು ರೈತರು ಸಮ್ಮತಿಸಿದ್ದಾರೆ ಎಂದು ಸಭೆಯಲ್ಲಿ ತಿಳಿಸಲಾಯಿತು.
ಬಸ್ ಸಂಚಾರ ಬಂದ್, ಪ್ರಯಾಣಿಕರ ಪರದಾಟ:
ರೈತರು ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಜಮಾಯಿಸಿ ರಸ್ತೆ ತಡೆದು ಧರಣಿ ಕುಳಿತರು. ಬೆಳಗ್ಗೆಯಿಂದಲೇ ಬಸ್ ಸಂಚಾರ ಸಂಪೂರ್ಣವಾಗಿ ಬಂದ್ ಆದ ಪರಿಣಾಮ, ಸಾರ್ವಜನಿಕರು, ಶಾಲಾ-ಕಾಲೇಜು ವಿದ್ಯಾರ್ಥಿಗಳು ಮತ್ತು ದೂರದ ಊರುಗಳಿಗೆ ಪ್ರಯಾಣಿಸಬೇಕಾದ ಪ್ರಯಾಣಿಕರು ಪರದಾಡಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.