ರೈತರ ಕೃಷಿ ಸಾಲ ಮನ್ನಾ ಮಾಡಿ: ಸಂಜೀವರೆಡ್ಡಿ ಒತ್ತಾಯ

KannadaprabhaNewsNetwork |  
Published : Jul 08, 2024, 12:36 AM IST
ಸಂಜೀವ್ ಎಸ್. ಐರೆಡ್ಡಿ ಬೆಂಡೆಬೆಂಬಳಿ, ಕಾಂಗ್ರೆಸ್ ಪಕ್ಷದ ಯುವ ಮುಖಂಡರು | Kannada Prabha

ಸಾರಾಂಶ

ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ತೀರಿಸಲು ಜಮೀನು ಹಾಗೂ ಜಾನುವಾರಗಳು ಮಾರಾಟಕ್ಕೆ ಮುಂದಾಗಿದ್ದಾರೆ.

ಕನ್ನಡಪ್ರಭ ವಾರ್ತೆ ಯಾದಗಿರಿ

ಕಳೆದೆರಡು ಮೂರು ವರ್ಷಗಳಿಂದ ರಾಜ್ಯದಲ್ಲಿ ಭೀಕರ ಬರಗಾಲದಿಂದ ಮುಂಗಾರು ಹಿಂಗಾರು ಮಳೆ ಸರಿಯಾಗಿ ಬಾರದ ಕಾರಣ ರೈತರು ತುಂಬಾ ಸಂಕಷ್ಟದಲ್ಲಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಮಾಡುವಂತೆ ಕಾಂಗ್ರೆಸ್ ಪಕ್ಷದ ಯುವ ಮುಖಂಡ ಸಂಜೀವ್ ಎಸ್. ಐರೆಡ್ಡಿ ಅವರು ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿದ ಅವರು, ರೈತರು ಸಾಲದ ಸುಳಿಯಲ್ಲಿ ಸಿಲುಕಿ ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸಾಲ ತೀರಿಸಲು ಜಮೀನು ಹಾಗೂ ಜಾನುವಾರಗಳು ಮಾರಾಟಕ್ಕೆ ಮುಂದಾಗಿದ್ದಾರೆ. ಇತ್ತೀಚೆಗೆ ರೈತರ ಆತ್ಮಹತ್ಯೆ ಪ್ರಕರಣಗಳು ದೇಶದಲ್ಲಿ ಹೆಚ್ಚಾಗುತ್ತಿವೆ. ಆದ್ದರಿಂದ ಮುಂಬರುವ ಕೇಂದ್ರದ ಬಜೆಟಿನಲ್ಲಿ ಸಹಕಾರಿ ಬ್ಯಾಂಕ್, ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಖಾಸಗಿ ಬ್ಯಾಂಕುಗಳಲ್ಲಿನ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು. ಜೊತೆಗೆ ಕೃಷಿ ಚಟುವಟಿಕೆಗಳಿಗೆ ರೈತರಿಗೆ 10 ಲಕ್ಷ ರು. ಗಳವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡಬೇಕು ಎಂದು ಒತ್ತಾಯಿಸಿದರು.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿಯಲ್ಲಿ ಪ್ರತಿವರ್ಷ ರೈತರಿಗೆ ನೀಡುತ್ತಿರುವ 6 ಸಾವಿರ ರು.ಗಳ ಮೊತ್ತವನ್ನು 20 ಸಾವಿರ ರು.ಗಳಿಗೆ ಹೆಚ್ಚಿಸಬೇಕು. ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗುವಂತೆ ಕ್ರಮ ಕೈಗೊಂಡು ರೈತರ ಆದಾಯವನ್ನು ಹೆಚ್ಚುಗೊಳಿಸಬೇಕು. ಮುಂದಿನ ಕೇಂದ್ರ ಬಜೆಟ್ ನಲ್ಲಿ ರೈತರಿಗಾಗಿ ವಿಶೇಷ ಅನುದಾನವನ್ನು ಘೋಷಣೆ ಮಾಡುವಂತೆ ಆಗ್ರಹಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

15ರ ಬಾಲೆಯಿಂದ ಮಕ್ಕಳಿಗೆ ಒತ್ತಡ ನಿರ್ವಹಣೆ ತರಬೇತಿ!
ಪೊಲೀಸರ ಬಲೆಗೆ ಬಿದ್ದ ಪಾವಗಡದ ಸುಡೋ ನಕ್ಸಲ್ ಉಪ್ಪಾರ ವೆಂಕಟೇಶ್