ದಾಬಸ್‍ಪೇಟೆ: ಕಳೆದ ಒಂದು ವಾರದಿಂದ ತಾಲೂಕಾದ್ಯಂತ ಉತ್ತಮ ಮಳೆಯಾಗುತ್ತಿದೆ. ರೈತರ ಕೃಷಿ ಚಟುವಟಿಕೆಗಳು ಭರದಿಂದ ಸಾಗಿವೆ. ತಿಂಗಳಿನಿಂದ ಆಗಾಗ ಬರುತ್ತಿರುವ ಮಳೆಯಿಂದಾಗಿ ಜಮೀನು ಕೃಷಿ ಚಟುವಟಿಕೆಗಳಿಗೆ ಹದಗೊಂಡಿದೆ. ರೈತರ ಕೃಷಿ ಚಟುವಟಿಕೆಗಳು ಗರಿಗೆದರಿವೆ.
ಏಕದಳ ಹಾಗೂ ದ್ವಿದಳ ಧಾನ್ಯ : ರಾಗಿ ಹೊರತುಪಡಿಸಿ ಏಕದಳ ಧಾನ್ಯಗಳಾದ ಭತ್ತ 44 ಹೆಕ್ಟೇರ್, ಮುಸುಕಿನ ಜೋಳ 1180 ಹೆಕ್ಟೇರ್ ಸೇರಿ 1229 ಹೆಕ್ಟೇರ್ ಪ್ರದೇಶದಲ್ಲಿ, ದ್ವಿದಳ ಧಾನ್ಯಗಳಾದ ತೊಗರಿ 300 ಹೆಕ್ಟೇರ್, ಅಲಸಂದೆ 178 ಹೆಕ್ಟೇರ್ ಅವರೆ 415 ಹೆಕ್ಟೇರ್ ಒಟ್ಟು 895 ಹೆಕ್ಟೇರ್‌ಗಳಲ್ಲಿ ಹಾಗೂ ಎಣ್ಣೆ ಕಾಳುಗಳಾದ ಹರಳು 60 ಹೆಕ್ಟೇರ್, ಸಾಸುವೆ 26 ಹೆಕ್ಟೇರ್, ಹುಚ್ಚೆಳ್ಳು 15 ಹೆಕ್ಟೇರ್ ನೆಲಗಡಲೆ 30 ಹೆಕ್ಟೇರ್ ಒಟ್ಟು 131 ಹೆಕ್ಟೇರ್ ಗುರಿ ಹೊಂದಿದೆ.
ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಿಲ್ಲ: ಅಧಿಕ ಇಳುವರಿ ಕೊಡುವ ಹಾಗೂ ಗುಣಮಟ್ಟದ ರಾಗಿ ಬಿತ್ತನೆ ಬೀಜ ಕೃಷಿ ಇಲಾಖೆಯಲ್ಲಿ ಲಭ್ಯವಿದೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಎಂ.ಆರ್-6, ಜಿ.ಪಿ.ಯು-28 , ಎಂ.ಎಲ್.365 ರಾಗಿಯ ತಳಿಗಳು ದಾಸ್ತಾನಿದ್ದು, ರಿಯಾಯಿತಿ ದರದಲ್ಲಿ ಎಲ್ಲ ರೈತರಿಗೂ ಲಭ್ಯವಿದೆ. ರಾಷ್ಟ್ರೀಯ ಬೀಜ ನಿಗಮ ಹಾಗೂ ರಾಜ್ಯ ಬೀಜ ನಿಗಮಗಳಿಂದ ಬಿತ್ತನೆ ಬೀಜಗಳು ಪೂರೈಕೆಯಾಗುತ್ತಿದ್ದು, ಬಿತ್ತನೆ ಬೀಜ, ರಸಗೊಬ್ಬರಕ್ಕೆ ಕೊರತೆಯಿಲ್ಲ. ರೈತರು ಆಯಾ ರೈತ ಸಂಪರ್ಕ ಕೇಂದ್ರಗಳಲ್ಲಿ ಪಡೆದುಕೊಳ್ಳಬಹುದು ಎನ್ನುತ್ತಾರೆ ಕೃಷಿ ಅಧಿಕಾರಿಗಳು.ಆ.16ರೊಳಗೆ ವಿಮೆ ಮಾಡಿಸಿ:
ಕೋಟ್ ..............
-ಮಲ್ಲಿಕಾರ್ಜುನ್, ರೈತ ಹೊನ್ನೇನಹಳ್ಳಿ
ರೈತರಿಗೆ ಕೃಷಿ ಇಲಾಖೆಯಲ್ಲಿ ಲಭ್ಯವಿರುವ ಬಿತ್ತನೆ ಬೀಜ, ರಸಗೊಬ್ಬರ ರಿಯಾಯಿತಿ ದರದಲ್ಲಿ ವಿತರಿಸಲಾಗುತ್ತಿದೆ. ರೈತರು ಹೋಬಳಿ ರೈತ ಸಂಪರ್ಕ ಕೇಂದ್ರಗಳಲ್ಲಿ ಬಿತ್ತನೆ ಬೀಜ ಪಡೆಯಬಹುದು. ರೈತರಿಗೆ ಕೃಷಿ ಇಲಾಖೆಯಿಂದ ಮುಂಗಾರು ಬೆಳೆಯ ಅಗತ್ಯ ಮಾಹಿತಿ ಮನೀಡಲಾಗುವುದು.
ಪೋಟೋ 1 : ನೆಲಮಂಗಲ ತಾಲೂಕಿನಲ್ಲಿ ಟ್ರ್ಯಾಕ್ಟರ್ ನಲ್ಲಿ ರಾಗಿ ಬಿತ್ತನೆ ಮಾಡುತ್ತಿರುವುದು.