ಹಿರೇಕೆರೂರಲ್ಲಿ ಬಿತ್ತನೆಗೆ ಅಣಿಯಾದ ರೈತರು, ಕೃಷಿ ಚಟುವಟಿಕೆ ಚುರುಕು

KannadaprabhaNewsNetwork |  
Published : May 28, 2025, 12:34 AM IST
ಪೊಟೊ ಶಿರ್ಷಿಕೆ 26ಎಚ್‌ಕೆಆರ್‌01, 1ಎಹಿರೇಕೆರೂರ ಪಟ್ಟಣದಲ್ಲಿ ಸತತವಾಗಿ ಬಿಟ್ಟು ಬಿಡದೆ  ಕೆಲವು ದಿನಗಳಿಂದ ಸುರಿಯುತ್ತಿರುವಜಿಟಿಜಿಟಿ ಮ¼,ೆ | Kannada Prabha

ಸಾರಾಂಶ

ಹಿರೇಕೆರೂರು ತಾಲೂಕು ಅರೆಮಲೆನಾಡು ಪ್ರದೇಶ ಎಂದು ಗುರುತಿಸಲಾಗಿದ್ದು, ಕೃಷಿ ಅವಲಂಬಿತ ಕುಟುಂಬಗಳು ಹೆಚ್ಚಿವೆ. ವಾಡಿಕೆಯಂತೆ ಇಲ್ಲಿಯವರೆಗೆ 103 ಮಿಮೀ ಮಳೆಯಾಗಬೇಕಿತ್ತು. ಈಗ 151 ಮಿಮೀನಷ್ಟಾಗಿದೆ. ವಾಡಿಕೆಗಿಂತ ಶೇ. 47ರಷ್ಟು ಹೆಚ್ಚು ಮಳೆಯಾಗಿದೆ.

ರವಿ ಮೇಗಳಮನಿ

ಹಿರೇಕೆರೂರು: ತಾಲೂಕಿನಲ್ಲಿ ಮೇ ತಿಂಗಳಲ್ಲಿ ಉತ್ತಮವಾಗಿ ಮಳೆಯಾಗುತ್ತಿದ್ದು, ಕೃಷಿ ಚಟುವಟಿಕೆ ಚುರುಕಾಗಿದೆ. ರೈತರು ಬಿತ್ತನೆ ಬೀಜ, ರಸಗೊಬ್ಬರ ಸಂಗ್ರಹಿಸುತ್ತಿದ್ದಾರೆ. ವರುಣ ಬಿಡುವು ಕೊಟ್ಟ ಬಳಿಕ ಬಿತ್ತನೆ ಕಾರ್ಯ ಆರಂಭವಾಗಲಿದೆ.

ಹಿರೇಕೆರೂರು ತಾಲೂಕು ಅರೆಮಲೆನಾಡು ಪ್ರದೇಶ ಎಂದು ಗುರುತಿಸಲಾಗಿದ್ದು, ಕೃಷಿ ಅವಲಂಬಿತ ಕುಟುಂಬಗಳು ಹೆಚ್ಚಿವೆ. ವಾಡಿಕೆಯಂತೆ ಇಲ್ಲಿಯವರೆಗೆ 103 ಮಿಮೀ ಮಳೆಯಾಗಬೇಕಿತ್ತು. ಈಗ 151 ಮಿಮೀನಷ್ಟಾಗಿದೆ. ವಾಡಿಕೆಗಿಂತ ಶೇ. 47ರಷ್ಟು ಹೆಚ್ಚು ಮಳೆಯಾಗಿದೆ.

ಕೃಷಿ ಇಲಾಖೆ ಮೂಲಗಳ ಪ್ರಕಾರ ಒಟ್ಟು 28,500 ಹೆಕ್ಟೇರ್‌ ಪ್ರದೇಶ ಬಿತ್ತನೆ ಕ್ಷೇತ್ರವಿದೆ. ಅದರಲ್ಲಿ 24.5 ಸಾವಿರ ಹೆಕ್ಟೇರ್ ಮೆಕ್ಕೆಜೋಳ, 300 ಹೆಕ್ಟೇರ್ ಸೋಯಾಬಿನ್. 1300 ಹೆಕ್ಟೇರ್ ಪ್ರದೇಶ ಹತ್ತಿ, 1200 ಹೆಕ್ಟೇರ್ ಪ್ರದೇಶ ಶೇಂಗಾ ಹಾಗೂ 1 ಸಾವಿರ ಹೆಕ್ಟೇರ್ ಪ್ರದೇಶ ಇತರ ಬೆಳೆಗಳನ್ನು ಬೆಳೆಯಲಾಗುತ್ತಿದೆ.

ಇಲ್ಲಿ ಬಾಳೆ, ಅಡಕೆ, ತೆಂಗು, ಮಾವು, ಸಪೋಟಾ (ಚಿಕ್ಕು) ಕಲ್ಲಂಗಡಿ, ಪಪ್ಪಾಯಿ, ಕ್ಯಾಬೀಜ್ ಸೇರಿದಂತೆ ವಿವಿಧ ಬೀಜೋತ್ಪಾದನೆ, ರೇಷ್ಮೆ ಬೆಳೆಗಳನ್ನು ಬೆಳೆಯುತ್ತಾ ಬರಲಾಗುತ್ತಿದೆ. ಈ ಕ್ಷೇತ್ರದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಮೀನುಗಳು ಹದಭರಿತವಾಗಿವೆ.

ಈಗ ಮಳೆಯಿಂದ ರೈತರ ಮೊಗದಲ್ಲಿ ಹರ್ಷ ತುಂಬಿದ್ದು, ಕೃಷಿ ಚಟುವಟಿಕೆಗೆ ಅಣಿಯಾಗುತ್ತಿದ್ದಾರೆ. ಈಗಾಗಲೇ ಕೆಲವು ರೈತರು ಉಳುಮೆ ಮಾಡಿಕೊಂಡಿದ್ದು, ಇನ್ನು ಕೆಲವರು ಉಳುಮೆ ಮಾಡಲು ಸಜ್ಜಾಗುತ್ತಿದ್ದಾರೆ. ರಸಗೊಬ್ಬರ, ಬಿತ್ತನೆ ಬೀಜ ಖರೀದಿ ಸೇರಿದಂತೆ ಕೃಷಿ ಪರಿಕರಗಳ ಖರೀದಿಸಲು ಪ್ರಾರಂಭಿಸಿದ್ದಾರೆ.ಬಿತ್ತನೆ ಬೀಜ ಸಂಗ್ರಹ: ಹಿತೇಂದ್ರ

ಪ್ರಸಕ್ತ ಸಾಲಿನ ಕೃಷಿ ಚಟುವಟಿಕೆಗೆ ರೈತರಿಗೆ ಯಾವುದೆ ತೊಂದರೆಯಾಗದಂತೆ ಬಿತ್ತನೆ ಬೀಜಗಳನ್ನು ವಿತರಿಸಲಾಗುತ್ತಿದೆ ಎಂದು ಸಹಾಯಕ ಕೃಷಿ ನಿರ್ದೇಶಕ ಹಿತೇಂದ್ರ ಗೌಡಪ್ಪಳವರ ಹೇಳಿದ್ದಾರೆ. ರೈತರ ಬೇಡಿಕೆಯಂತೆ ಬಿತ್ತನೆ ಬೀಜಗಳು ಸಂಪೂರ್ಣ ಸಂಗ್ರಹವಾಗುತ್ತವೆ. ಸದ್ಯದ ಪರಿಸ್ಥಿತಿಯಲ್ಲಿ ಯೂರಿಯಾ ರಸಗೊಬ್ಬರ ಸಾಕಷ್ಟು ಸಂಗ್ರಹದಲ್ಲಿದ್ದು, ಸ್ವಲ್ಪಮಟ್ಟಿಗೆ ಡಿಎಪಿ ಗೊಬ್ಬರದ ಕೊರತೆಯಾಗಲಿದೆ. ಇದಕ್ಕೆ ಪರ್ಯಾಯವಾಗಿ ರೈತರು ಪೌಷ್ಟಿಕಾಂಶವುಳ್ಳ ಇತರ ಗೊಬ್ಬರಗಳನ್ನು ಬಳಸಬೇಕು. ಖಾಸಗಿ ಅಂಗಡಿಯವರು ಸರ್ಕಾರ ನಿಗದಿಪಡಿಸಿದ ದರದಲ್ಲಿ ಬಿತ್ತನೆ ಬೀಜ, ಔಷಧ, ರಸಗೊಬ್ಬರಗಳನ್ನು ಮಾರಾಟ ಮಾಡಬೇಕು. ದರಗಳ ನಾಮಫಲಕವನ್ನು ಕಡ್ಡಾಯವಾಗಿ ಅಳವಡಿಸಬೇಕು. ರೈತರು ತಮ್ಮ ಆಧಾರ್‌ ಕಾರ್ಡ್‌ ನಂಬರ್‌ ನಮೂದಿಸಿ ತಾವು ಖರೀದಿಸಿದ ರಸೀದಿ ಕಾಯ್ದಿಟ್ಟುಕೊಳ್ಳಬೇಕು. ಚಿಲ್ಲರೆ ಬೀಜಗಳನ್ನು ಖರೀದಿಸಬಾರದು. ಮುಂಗಾರು ಹಂಗಾಮಿಗೆ ರೈತರಿಗೆ ಕೃಷಿ ಚಟುವಟಿಕೆಗೆ ಯಾವುದೆ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮ ವಹಿಸಲಾಗಿದೆ ಎಂದರು.

PREV

Recommended Stories

ಯೂರಿಯಾ: ರೈತ ಬಾಂಧವರಲ್ಲಿ ಅತಂಕ ಬೇಡ
ಪಂಚಪೀಠ ನಿರ್ಣಯ ಒಪ್ಪಲ್ಲ, ರಂಭಾಪುರಿ ಶ್ರೀಗಳ ಮನಸ್ಥಿತಿ ಕಲುಷಿತ: ವಚನಾನಂದ ಶ್ರೀ