ಸಚಿವ ಬಸವಂತಪ್ಪ ತಾಕೀತು । ಶ್ರೀರಾಮ್ ಫೈನಾನ್ಸ್‌ನಿಂದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮ
ಕನ್ನಡಪ್ರಭ ವಾರ್ತೆ ದಾವಣಗೆರೆ
ಬರಗಾಲದ ಹಿನ್ನೆಲೆಯಲ್ಲಿ ರೈತರು ತೀವ್ರ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆಯು ರೈತರ ಸಾಲವನ್ನು ಸಂಪೂರ್ಣ ಮನ್ನಾ ಮಾಡದಿದ್ದರೂ, ಸಾಲ ಮರುಪಾವತಿಯಲ್ಲಿ ಅಥವಾ ಬಡ್ಡಿಯಲ್ಲಿ ಸಾಧ್ಯವಾದಷ್ಟು ವಿನಾಯಿತಿ ನೀಡುವ ಮೂಲಕ ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಬೇಕು ಎಂದು ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವ ಕೆ.ಎಸ್. ಬಸವಂತಪ್ಪ ಮನವಿ ಮಾಡಿದರು.ನಗರದ ಎಕೆಎಸ್ ಹಾಲ್ ನಲ್ಲಿ ಶನಿವಾರ ಶ್ರೀರಾಮ್ ಫೈನಾನ್ಸ್ ಸಂಸ್ಥೆಯ ಸೇವಾ ಸಂಕಲ್ಪ ವತಿಯಿಂದ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಸ್ಥೆಯ ಸಿಎಸ್‌ಆರ್ ನಿಧಿಯನ್ನು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗೆ ಬಳಸಿಕೊಂಡು ಕೆರೆಗಳ ನಿರ್ಮಾಣ, ಪುನಶ್ಚೇತನ ಹಾಗೂ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡರೆ, ಇದರಿಂದ ನೂರಾರು ರೈತ ಕುಟುಂಬಗಳಿಗೆ ಅನುಕೂಲವಾಗುವುದರ ಜೊತೆಗೆ ಅಂತರ್ಜಲ ವೃದ್ಧಿ ಹಾಗೂ ಪರಿಸರ ಸಂರಕ್ಷಣೆಗೆ ಶಾಶ್ವತ ಕೊಡುಗೆ ನೀಡಿದಂತಾಗುತ್ತದೆ ಎಂದು ಅವರು ಸಲಹೆ ನೀಡಿದರು.
ವಿದ್ಯಾರ್ಥಿಗಳು ಶ್ರದ್ಧೆ, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ವಿದ್ಯಾಭ್ಯಾಸ ಮಾಡಬೇಕು. ಭವಿಷ್ಯದಲ್ಲಿ ಶ್ರೀ ರಾಮ್ ಫೈನಾನ್ಸ್ ಸೇರಿದಂತೆ ವಿವಿಧ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸಿ, ಸಂಸ್ಥೆ, ಕುಟುಂಬ ಹಾಗೂ ಸಮಾಜಕ್ಕೆ ಕೀರ್ತಿ ತರುವಂತಾಗಬೇಕು ಎಂದು ಸಚಿವರು ಕರೆ ನೀಡಿದರು.
ಪಂಚಭೂತಗಳಿಂದ ಕೂಡಿರುವ ಮಾನವ ಶರೀರ ಹಾಗೂ ದೊರೆತಿರುವ ಜೀವನದ ಮೌಲ್ಯವನ್ನು ಅರಿತು ಸದ್ಗುಣ ಮತ್ತು ಭಕ್ತಿಯೊಂದಿಗೆ ಬದುಕಬೇಕು ಎಂದರು.
ಮಕ್ಕಳಿಗೆ ಕೇವಲ ಶೈಕ್ಷಣಿಕ ಜ್ಞಾನ ನೀಡುವುದಷ್ಟೇ ಪೋಷಕರ ಕರ್ತವ್ಯವಲ್ಲ. ಉತ್ತಮ ಸಂಸ್ಕಾರ, ಸದ್ಗುಣ, ಮಾನವೀಯತೆ ಹಾಗೂ ಸಮಾಜದ ಬಗ್ಗೆ ಕಾಳಜಿಯನ್ನು ಬೆಳೆಸುವುದು ಅತ್ಯಂತ ಅಗತ್ಯ. ಇಂತಹ ಮಕ್ಕಳೇ ಭವಿಷ್ಯದಲ್ಲಿ ಉತ್ತಮ ಸಮಾಜ ನಿರ್ಮಾಣಕ್ಕೆ ಕಾರಣರಾಗುತ್ತಾರೆ ಎಂದರು.
....ಕೋಟ್....
-ಡಾ.ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ, ಸಾಣೇಹಳ್ಳಿ
ಫೋಟೊ: 22ಕೆಡಿವಿಜಿ31
ದಾವಣಗೆರೆಯಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮವನ್ನು ಸ್ವಾಮೀಜಿ, ಸಚಿವರು ಉದ್ಘಾಟಿಸಿದರು........
ಫೋಟೊ 22ಕೆಡಿವಿಜಿ32ದಾವಣಗೆರೆಯಲ್ಲಿ ಶ್ರೀರಾಮ್ ಫೈನಾನ್ಸ್ ಸಂಸ್ಥೆ ವತಿಯಿಂದ ಆಯೋಜಿಸಿದ್ದ ವಿದ್ಯಾರ್ಥಿ ಪ್ರೋತ್ಸಾಹ ಧನ ವಿತರಣಾ ಕಾರ್ಯಕ್ರಮದಲ್ಲಿ ಸಚಿವ ಕೆ.ಎಸ್.ಬಸವಂತಪ್ಪ ಮಾತನಾಡಿದರು.