ಚನ್ನಪಟ್ಟಣ: ಸಹಕಾರ ಸಂಘಗಳು ಗ್ರಾಮೀಣ ರೈತರ ಜೀವನಾಡಿ. ರೈತರು ಸಹಕಾರ ಸಂಘಗಳ ಸಾಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಸಬಲರಾಗಬೇಕು ಎಂದು ಬಮೂಲ್ ಮತ್ತು ಬಿಡಿಸಿಸಿ ನಿರ್ದೇಶಕ ಎಸ್.ಲಿಂಗೇಶ್‌ಕುಮಾರ್ ತಿಳಿಸಿದರು
ಚನ್ನಪಟ್ಟಣ: ಸಹಕಾರ ಸಂಘಗಳು ಗ್ರಾಮೀಣ ರೈತರ ಜೀವನಾಡಿ. ರೈತರು ಸಹಕಾರ ಸಂಘಗಳ ಸಾಲ ಸೌಲಭ್ಯಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಸಬಲರಾಗಬೇಕು ಎಂದು ಬಮೂಲ್ ಮತ್ತು ಬಿಡಿಸಿಸಿ ನಿರ್ದೇಶಕ ಎಸ್.ಲಿಂಗೇಶ್‌ಕುಮಾರ್ ತಿಳಿಸಿದರು.
ತಾಲೂಕಿನ ಸಿಂಗರಾಜಿಪುರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ ಸಂಘದ ೨೦೨೫-೨೬ನೇ ಸಾಲಿನ ಸರ್ವ ಸದಸ್ಯರ ಮಹಾಸಭೆ ಉದ್ಘಾಟಿಸಿ ಮಾತನಾಡಿದ ಅವರು, ಆಡಳಿತ ಮಂಡಳಿ ಮತ್ತು ಸಿಬ್ಬಂದಿ ವರ್ಗದ ಸಹಕಾರದಲ್ಲಿ ಉತ್ತಮ ಆಡಳಿತ ಹಾಗೂ ಆರ್ಥಿಕ ಪ್ರಗತಿ ಹೊಂದುತ್ತಿದೆ. ರೈತರ ಬದುಕನ್ನು ಉತ್ತಮ ಪಡಿಸಲು ಬಿಡಿಸಿಸಿ ಬ್ಯಾಂಕ್ ಸಹಕಾರದಿಂದ ಸಂಘ ರೈತರಿಗೆ ಬೆಳೆ ಸಾಲ, ಹಸು ಸಾಲ, ಸ್ತ್ರೀಶಕ್ತಿ ಗುಂಪುಗಳಿಗೆ ಸಾಲ ನೀಡುವ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಸಂಘದ ಅಧ್ಯಕ್ಷ ಎಚ್.ಎಂ.ಶಿವರಾಮೇಗೌಡ ಮಾತನಾಡಿ, ಸಂಘದಿಂದ ರೈತರಿಗೆ ಉಪಯುಕ್ತವಾಗುವಂತೆ ಸಕಾಲಕ್ಕೆ ರಸಗೊಬ್ಬರ ಮಾರಾಟ ಮಾಡಲಾಗುತ್ತಿದೆ. ರೈತರಿಗೆ ಸಕಾಲದಲ್ಲಿ ಬೆಳೆಸಾಲ, ಹಸುಸಾಲ ಮತ್ತು ಅಲ್ಪಾವಧಿ ಮತ್ತು ದೀರ್ಘಾವಧಿ ಸಾಲ ಸೌಲಭ್ಯ ಕಲ್ಪಿಸುವ ಮೂಲಕ ರೈತರ ವಿಶ್ವಾಸ ಗಳಿಸಿ ಉತ್ತಮ ಕಾರ್ಯನಿರ್ವಹಿಸುತ್ತಿದೆ. ಸಕಾಲದಲ್ಲಿ ಸಾಲ ಮರುಪಾವತಿಸಿ ಸಹಕರಿಸಬೇಕು ಎಂದು ಮನವಿ ಮಾಡಿದರು.
ಇದೇ ವೇಳೆ ಗ್ರಾಮದ ಭಾರತ ಮಾತಾ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.
ಕಾರ್ಯಕ್ರಮದಲ್ಲಿ ಸಂಘದ ಉಪಾಧ್ಯಕ್ಷ ಶಿವಕುಮಾರ್ ಎಸ್., ಸಂಪತ್,ವಿಜಯ್ ಕುಮಾರ್, ಪಿ.ಡಿ., ಕೃಷ್ಣೇಗೌಡ, ವರದರಾಜು, ಪ್ರಕಾಶ್ ಎಂ., ಲೋಕೇಶ್ ಟಿ., ಗೌರಮ್ಮ, ಕೆಂಪಮ್ಮ, ಬಿಡಿಸಿಸಿ ಬ್ಯಾಂಕ್ ಮೇಲ್ವಿಚಾರಕ ಪಾರ್ಥ ಪಿ.ಎಸ್. ಉಪಸ್ಥಿತರಿದ್ದರು.
ಪೊಟೋ೨೦ಸಿಪಿಟಿ೨: ಚನ್ನಪಟ್ಟಣ ತಾಲೂಕಿನ ಸಿಂಗರಾಜಿಪುರ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಆವರಣದಲ್ಲಿ ಆಯೋಜಿಸಿದ್ದ ಸರ್ವ ಸದಸ್ಯರ ಮಹಾಸಭೆಯನ್ನು ಬಮೂಲ್ ಮತ್ತು ಬಿಡಿಸಿಸಿ ನಿರ್ದೇಶಕ ಎಸ್.ಲಿಂಗೇಶ್‌ಕುಮಾರ್ ಉದ್ಘಾಟಿಸಿದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.