ಕನ್ನಡಪ್ರಭ ವಾರ್ತೆ ಬೆಂಗಳೂರು
ಈ ವೇಳೆಮಾತನಾಡಿದ ಒಕ್ಕೂಟದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್, ಕೇಂದ್ರ ಸರ್ಕಾರವು ರೈತರ ಕೃಷಿ ಸಾಲ ಸಂಪೂರ್ಣ ಮನ್ನಾ ಮಾಡಬೇಕು. ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ ನೀಡಲು ಕಾನೂನು ಜಾರಿ ಮಾಡಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೊಳಿಸಬೇಕು. ಈ ಬಗ್ಗೆ ಸಂಸದರು ಕೇಂದ್ರ ಸರ್ಕಾರದ ಗಮನ ಸೆಳೆಯಬೇಕು ಎಂದು ಒತ್ತಾಯಿಸಿದರು.
ದೇಶದ ರೈತರ ಒಳಿತಿಗಾಗಿ ದೆಹಲಿಯಲ್ಲಿ ರೈತ ಮುಖಂಡ ಜಗಜಿತ್ ಸಿಂಗ್ ದಲೈವಾಲ ಅವರು ನಡೆಸುತ್ತಿರುವ ಉಪವಾಸ ಸತ್ಯಾಗ್ರಹ 14ನೇ ದಿನಕ್ಕೆ ಮುಂದುವರೆದಿದ್ದು ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಪೊಲೀಸರು ಪ್ರತಿಭಟನಾನಿರತ ರೈತರ ಮೇಲೆ ಬಲಪ್ರಯೋಗ ಮಾಡಿ ದಬ್ಬಾಳಿಕೆ ನಡೆಸುತ್ತಿದ್ದಾರೆ. ಹೀಗಿದ್ದರೂ ಸಂಸದರು ಇದನ್ನು ಅಧಿವೇಶನದಲ್ಲಿ ಪ್ರಸ್ತಾಪಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಹೋರಾಟದ ಸ್ವರೂಪ ಬದಲು: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟವನ್ನು ಬೆಂಬಲಿಸಿ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆಸುತ್ತಿದ್ದ ಉಪವಾಸ ಸತ್ಯಾಗ್ರಹವನ್ನು ನಾಲ್ಕನೇ ದಿನವಾದ ಸೋಮವಾರ ರೈತ ಮುಖಂಡರು ಅಂತ್ಯಗೊಳಿಸಿದ್ದು ಮಂಗಳವಾರದಿಂದ ಸಂಸದರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ.