ಪ್ರಾಧಿಕಾರದ ಆದೇಶ ವಿರುದ್ಧ ರೈತ ಸಂಘಟನೆಗಳಿಂದ ರಸ್ತೆತಡೆ

KannadaprabhaNewsNetwork |  
Published : Jul 31, 2026, 01:30 AM IST
30ಕೆಎಂಎನ್‌ಡಿ-12ತಮಿಳುನಾಡಿಗೆ ನೀರು ಹರಿಸಬೇಕೆಂಬ ಪ್ರಾಧಿಕಾರದ ಆದೇಶವನ್ನು ವಿರೋಧಿಸಿ ಶ್ರೀರಂಗಪಟ್ಟಣ ರೈತ ಸಂಘಟನೆ ಕಾರ್ಯಕರ್ತರು ಹೆದ್ದಾರಿ ತಡೆ ನಡೆಸಿದರು. | Kannada Prabha

ಸಾರಾಂಶ

ಮಳೆ ಈ ವರ್ಷ ಕೈಕೊಟ್ಟಿದೆ. ಕೊಡಗಿನಲ್ಲೂ ಈ ಬಾರಿ ಮಳೆ ಇಲ್ಲದೇ ಕೆಆರ್‌ಎಸ್ ಜಲಾಶಯಕ್ಕೆ ನೀರು ಹರಿದುಬರುತ್ತಿಲ್ಲ. ಜಲಾಶಯ ಕೂಡ ಭರ್ತಿಯಾಗಿಲ್ಲ. ಇಂತಹ ಸ್ಥಿತಿಯಲ್ಲಿ ಕಾವೇರಿ ಪ್ರಾಧಿಕಾರದಿಂದ ತಮಿಳುನಾಡಿಗೆ 3,500 ಕ್ಯೂಸೆಕ್ ನೀರನ್ನು 15 ದಿನದವರೆಗೆ ಹರಿಸುವಂತೆ ಆದೇಶಿಸಿ ತಮಿಳುನಾಡಿನ ಪರ ಕೆಲಸ ಮಾಡಿದೆ.

ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ

ತಮಿಳುನಾಡಿಗೆ ನೀರು ಹರಿಸಬೇಕೆಂಬ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶದ ವಿರುದ್ಧ ರೈತ ಸಂಘಟನೆಗಳ ಕಾರ್ಯಕರ್ತರು ಗುರುವಾರ ಹೆದ್ದಾರಿ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

ಪಟ್ಟಣದ ಕುವೆಂಪು ವೃತ್ತದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ಸೇರಿದ ರೈತ ಸಂಘಟನೆ ಹಾಗೂ ಕನ್ನಡ ಪರ ಸಂಘಟನೆಗಳ ಮುಖಂಡರು ಹೆದ್ದಾರಿ ತಡೆ ನಡೆಸಿ ಪ್ರಾಧಿಕಾರ ಹಾಗೂ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಮಳೆ ಈ ವರ್ಷ ಕೈಕೊಟ್ಟಿದೆ. ಕೊಡಗಿನಲ್ಲೂ ಈ ಬಾರಿ ಮಳೆ ಇಲ್ಲದೇ ಕೆಆರ್‌ಎಸ್ ಜಲಾಶಯಕ್ಕೆ ನೀರು ಹರಿದುಬರುತ್ತಿಲ್ಲ. ಜಲಾಶಯ ಕೂಡ ಭರ್ತಿಯಾಗಿಲ್ಲ. ಇಂತಹ ಸ್ಥಿತಿಯಲ್ಲಿ ಕಾವೇರಿ ಪ್ರಾಧಿಕಾರದಿಂದ ತಮಿಳುನಾಡಿಗೆ 3,500 ಕ್ಯೂಸೆಕ್ ನೀರನ್ನು 15 ದಿನದವರೆಗೆ ಹರಿಸುವಂತೆ ಆದೇಶಿಸಿ ತಮಿಳುನಾಡಿನ ಪರ ಕೆಲಸ ಮಾಡಿದೆ ಎಂದು ಆರೋಪಿಸಿದರು.

ಇಲ್ಲಿನ ರೈತರ ಬೆಳೆಗಳಿಗೆ ನೀರು ಹರಿಸದ ಸರ್ಕಾರ ಕೂಡ ಕುಡಿಯಲು ನೀರು ಬಳಕೆಗೆ ಇರುವ ನೀರನ್ನು ಸಂಗ್ರಹಣೆ ಮಾಡಿಟ್ಟುಕೊಂಡಿದೆ. ಪ್ರಾಧಿಕಾರದ ಆದೇಶ ಪಾಲಿಸಿದರೆ ಕುಡಿಯುವುದಕ್ಕೂ ನೀರಿಲ್ಲದಂತಾಗುತ್ತದೆ. ನೀರಿಲ್ಲದ ಸಮಯದಲ್ಲಿ ಜಲಾಶಯಗಳ ವಾಸ್ತವ ಸ್ಥಿತಿಯನ್ನು ಅವಲೋಕಿಸದೆ. ತಮಿಳುನಾಡಿಗೆ ನೀರು ಬಿಡುವ ಆದೇಶ ಮಾಡಿರುವುದು ಖಂಡನೀಯ. ಕರ್ನಾಟಕದ ಪರ ಯಾವಾಗಲೂ ನಿಲ್ಲದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡು ಪರವಾಗಿ ಕೆಲಸ ಮಾಡುವುದಕ್ಕಷ್ಟೇ ಸೀಮಿತವಾಗಿದೆ ಎಂದು ಆಕ್ರೋಶದಿಂದ ಹೇಳಿದರು.

ಸರ್ಕಾರ ಕಾವೇರಿ ಪ್ರಾಧಿಕಾರದ ಆದೇಶವನ್ನು ಧಿಕ್ಕರಿಸಿ ಕರ್ನಾಟಕ ಜನರ ಪರವಾಗಿ ನಿಲ್ಲಬೇಕು. ಯಾವುದೇ ಕಾರಣಕ್ಕೂ ಇರುವ ನೀರನ್ನು ತಮಿಳುನಾಡಿಗೆ ಬಿಡದಂತೆ ನೋಡಿಕೊಳ್ಳಬೇಕು ಇಲ್ಲದಿದ್ದರೆ ಸರ್ಕಾರದ ವಿರುದ್ದವೇ ರೈತರು ಉಗ್ರ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ರೈತಸಂಘದ ಮುಖಂಡರಾದ ಕೃಷ್ಣೇಗೌಡ, ಪಾಂಡು, ಜಯರಾಮು, ನಾಗೇಂದ್ರಸ್ವಾಮಿ, ದೊಡ್ಡಪಾಳ್ಯ ಜಯರಾಮು, ಬಾಬುರಾಯನಕೊಪ್ಪಲು ರಾಮಚಂದ್ರ ಇತರರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗ್ಯಾರಂಟಿಯಲ್ಲಿ ಲೋಪವಾದರೆ ಅಧಿಕಾರಿಗಳ ವಿರುದ್ಧ ಕ್ರಮ
ಮಾಧ್ಯಮ ಒಂದು ಪ್ರವೃತ್ತಿಯಾಗಿ ಸಮಾಜಕ್ಕೆ ಕೊಡುಗೆ ನೀಡಲಿ