ಕನ್ನಡಪ್ರಭ ವಾರ್ತೆ ಗದಗ
ಶುಕ್ರವಾರ ಗದಗ ತಾಲೂಕಿನ ನಾಗಾವಿಯಲ್ಲಿರುವ ಮಹಾತ್ಮಾ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿದ್ದ ಅವರು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಮಾತನಾಡಿದರು. ಗ್ರಾಮೀಣ ಭಾಗ ಎದುರಿಸುತ್ತಿರುವ ವಾಸ್ತವ ಸಮಸ್ಯೆಗಳನ್ನು ಗುರುತಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ಕೈಗೊಳ್ಳುತ್ತಿರುವ ಗುಣಮಟ್ಟದ ಸಂಶೋಧನಾ ಕಾರ್ಯಗಳನ್ನು ಅವರು ಶ್ಲಾಘಿಸಿದರು.ಆಯಾ ಪ್ರದೇಶದ ನೈಜ ಅಗತ್ಯತೆಗಳನ್ನು ಅರಿತು ಸ್ಥಳೀಯ ಮಟ್ಟದ ಅಧ್ಯಯನಗಳಿಗೆ ಒತ್ತು ನೀಡಬೇಕು. ಇಂದಿನ ಜಾಗತಿಕ ಮಾರುಕಟ್ಟೆಯ ಸ್ಪರ್ಧೆಯನ್ನು ಸಮರ್ಥವಾಗಿ ಎದುರಿಸಲು ರೈತರು ಆಧುನಿಕ ತಂತ್ರಜ್ಞಾನ ಹಾಗೂ ಯಂತ್ರಾಧಾರಿತ ಕೃಷಿ ಪದ್ಧತಿಯನ್ನು ಅಳವಡಿಸಿಕೊಳ್ಳುವುದು ಅನಿವಾರ್ಯವಾಗಿದೆ. ಕೃಷಿ ಉತ್ಪಾದಕತೆ ಹೆಚ್ಚಿಸಲು ತಾಂತ್ರಿಕ ಬೆಂಬಲ ನೀಡುವಲ್ಲಿ ಮತ್ತು ರೈತರಿಗೆ ನಿರಂತರ ಮಾರ್ಗದರ್ಶನ ಒದಗಿಸುವಲ್ಲಿ ಗ್ರಾಮೀಣಾಭಿವೃದ್ಧಿ ವಿಶ್ವವಿದ್ಯಾಲಯದ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದರು.
ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಡಾ. ಸುರೇಶ್ ವಿ. ನಾಡಗೌಡರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ನಿವೃತ್ತ ಜಿಲ್ಲಾ ನ್ಯಾಯಾಧೀಶ ಎಸ್.ಜಿ. ಪಲ್ಲೇದ್, ವಿಶ್ವವಿದ್ಯಾಲಯದ ಹಿರಿಯ ಅಧಿಕಾರಿಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.ಗ್ರಾಮಗಳು ದೇಶದ ಜೀವನಾಡಿ. ರೈತರು ಕೇವಲ ಬೆಳೆ ಬೆಳೆಯುವ ಉತ್ಪಾದಕರಾಗಷ್ಟೇ ಉಳಿಯದೆ, ಆಧುನಿಕ ಮಾರುಕಟ್ಟೆ ಹಾಗೂ ತಂತ್ರಜ್ಞಾನವನ್ನು ಮೈಗೂಡಿಸಿಕೊಂಡು ಆರ್ಥಿಕವಾಗಿ ಸಬಲರಾಗಬೇಕು. ಗ್ರಾಮೀಣ ಕೃಷಿ ಉತ್ಪನ್ನಗಳಿಗೆ ಜಾಗತಿಕ ಮನ್ನಣೆ ದೊರೆತಾಗ ಮಾತ್ರ ಸಮಗ್ರ ಆರ್ಥಿಕ ಪ್ರಗತಿ ಸಾಧ್ಯ.ಸುಭಾಷ್ ಬಿ. ಆದಿ, ನಿವೃತ್ತ ನ್ಯಾಯಮೂರ್ತಿ ಹಾಗೂ ಮಾಜಿ ಉಪ ಲೋಕಾಯುಕ್ತ