ಚಿಕ್ಕಮಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ವಹಿಸುವ ನಿರ್ಧಾರ ವಿರೋಧಿಸಿ ಸಮಾವೇಶ ನಡೆಸಿದ ಹೋರಾಟಗಾರರನ್ನು ಬಂಧಿಸಿರುವ ಕ್ರಮ ಖಂಡಿಸಿ ಹಾಗೂ ಅನ್ಯ ಉದ್ದೇಶಕ್ಕೆ ಕೃಷಿ ಭೂಮಿ ಬಳಕೆ ಕೈಬಿಡಬೇಕು ಎಂದು ಒತ್ತಾಯಿಸಿ ಸಂಯುಕ್ತ ಹೋರಾಟ ಸಮಿತಿಯಿಂದ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.
ಈಗಾಗಲೇ ರಸ್ತೆ ನಗರೀಕರಣ ಕೈಗಾರಿಕೆ ನೀರಾವರಿ ವಸತಿ ಹೀಗೆ ಹಲವು ಯೋಜನೆಗಳಿಗೆ ಶೇ. 30ರಷ್ಟು ರೈತರ ಫಲವತ್ತಾದ ಭೂಮಿ ಬಳಕೆಯಾಗುತ್ತಿದೆ. ಇದು ಹೀಗೆ ಮುಂದುವರಿದಲ್ಲಿ ಕೃಷಿ ಭೂಮಿ ಕಿರಿದಾಗಿ ದೇಶಕ್ಕೆ ಆಹಾರದ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಕೃಷಿ ಯೋಗ್ಯ ಭೂಮಿಯನ್ನು ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಕೆ ಮಾಡಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್, ತಾಲೂಕು ಅಧ್ಯಕ್ಷ ಸುನೀಲ್ ಕುಮಾರ್ ಹಾಗೂ ರೈತರು ಪಾಲ್ಗೊಂಡಿದ್ದರು.26 ಕೆಸಿಕೆಎಂ 3ಚನ್ನರಾಯಪಟ್ಟಣ ಹೋಬಳಿಯ ಫಲವತ್ತಾದ ಕೃಷಿ ಭೂಮಿಯನ್ನು ಕೆಐಎಡಿಬಿಗೆ ವಹಿಸುವ ನಿರ್ಧಾರ ವಿರೋಧಿಸಿ ಸಮಾವೇಶ ನಡೆಸಿದ ಹೋರಾಟಗಾರರನ್ನು ಬಂಧಿಸಿರುವುದನ್ನು ಖಂಡಿಸಿ ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ರೈತರು ಗುರುವಾರ ಪ್ರತಿಭಟನೆ ನಡೆಸಿದರು.