ಸಚಿವರ ಮನೆ ಎದುರು ಕಬ್ಬು ಸುರಿದು ರೈತರಿಂದ ಪ್ರತಿಭಟನೆ

KannadaprabhaNewsNetwork |  
Published : Oct 31, 2026, 02:00 AM IST
ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸದೆ ಸಕ್ಕರೆ ಕಾರ್ಖಾನೆಗಳನ್ನು ರಾತ್ರೋರಾತ್ರಿ ಆರಂಭಿಸಿರುವ ಕ್ರಮ ಖಂಡಿಸಿ ಹಾವೇರಿಯಲ್ಲಿ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಮನೆ ಎದುರು ರೈತರು ಟ್ರ್ಯಾಕ್ಟರ್ ಸಮೇತ ಕಬ್ಬು ಸುರಿದು ಪ್ರತಿಭಟನೆ ನಡೆಸಿದರು. | Kannada Prabha

ಸಾರಾಂಶ

ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸದೆ ಸಕ್ಕರೆ ಕಾರ್ಖಾನೆಗಳನ್ನು ರಾತ್ರೋರಾತ್ರಿ ಆರಂಭಿಸಿರುವ ಕ್ರಮ ಖಂಡಿಸಿ ರೈತರು ಶುಕ್ರವಾರ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ಮನೆ ಎದುರು ಟ್ರ್ಯಾಕ್ಟರ್ ಸಮೇತ ಕಬ್ಬು ಸುರಿದು ಪ್ರತಿಭಟನೆ ನಡೆಸಿದರು. ಕಬ್ಬಿಗೆ ಟನ್‌ಗೆ ₹5,500 ದರ ನಿಗದಿಪಡಿಸುವವರೆಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಕಾರ್ಯಾಚರಣೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

ಹಾವೇರಿ:ಕಬ್ಬು ಬೆಳೆಗಾರರ ಬೇಡಿಕೆಗಳಿಗೆ ಸ್ಪಂದಿಸದೆ ಸಕ್ಕರೆ ಕಾರ್ಖಾನೆಗಳನ್ನು ರಾತ್ರೋರಾತ್ರಿ ಆರಂಭಿಸಿರುವ ಕ್ರಮ ಖಂಡಿಸಿ ರೈತರು ಶುಕ್ರವಾರ ಸಕ್ಕರೆ ಸಚಿವ ರುದ್ರಪ್ಪ ಲಮಾಣಿ ಅವರ ಮನೆ ಎದುರು ಟ್ರ್ಯಾಕ್ಟರ್ ಸಮೇತ ಕಬ್ಬು ಸುರಿದು ಪ್ರತಿಭಟನೆ ನಡೆಸಿದರು. ಕಬ್ಬಿಗೆ ಟನ್‌ಗೆ ₹5,500 ದರ ನಿಗದಿಪಡಿಸುವವರೆಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆಗಳ ಕಾರ್ಯಾಚರಣೆ ಸ್ಥಗಿತಗೊಳಿಸಬೇಕು ಎಂದು ಆಗ್ರಹಿಸಿದರು.

ಕಬ್ಬಿಗೆ ಸೂಕ್ತ ದರ ನಿಗದಿಪಡಿಸಿದ ಬಳಿಕವೇ ಸಕ್ಕರೆ ಕಾರ್ಖಾನೆಗಳನ್ನು ಆರಂಭಿಸಬೇಕು ಎಂದು ರೈತರು ಹಲವು ಬಾರಿ ಮನವಿ ಮಾಡಿದರೂ ಜಿಲ್ಲಾಡಳಿತ ಹಾಗೂ ಕಾರ್ಖಾನೆಗಳ ಆಡಳಿತ ಮಂಡಳಿಗಳು ಸ್ಪಂದಿಸಿಲ್ಲ. ರೈತರೊಂದಿಗೆ ಯಾವುದೇ ಚರ್ಚೆ ನಡೆಸದೆ ರಾತ್ರೋರಾತ್ರಿ ಕಾರ್ಖಾನೆಗಳನ್ನು ಆರಂಭಿಸಿರುವುದು ಖಂಡನೀಯ. ಇದನ್ನು ಪ್ರಶ್ನಿಸಿದ ರೈತರ ಮೇಲೆ ಹಲ್ಲೆ ನಡೆಸಲು ಮುಂದಾಗಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಜಿಲ್ಲೆಯ ಸಂಗೂರು ಜಿ.ಎಂ. ಶುಗರ್ಸ್, ಭೈರನಪಾದ ಹಾಗೂ ಮುಂಡರಗಿ ಸಕ್ಕರೆ ಕಾರ್ಖಾನೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಮೊದಲು ಕಬ್ಬಿಗೆ ಸೂಕ್ತ ದರ ನಿಗದಿಪಡಿಸಬೇಕು. ಅಲ್ಲಿಯವರೆಗೆ ಆರಂಭಿಸಿರುವ ಕಾರ್ಖಾನೆಗಳನ್ನು ಬಂದ್ ಮಾಡಬೇಕು. ರೈತರ ಬೇಡಿಕೆ ಈಡೇರಿದ ಬಳಿಕವಷ್ಟೇ ಕಬ್ಬು ಅರೆಯುವ ಪ್ರಕ್ರಿಯೆ ಆರಂಭಿಸಬೇಕು ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ರೈತ ಮುಖಂಡರು, ಕಬ್ಬು ಬೆಳೆಗಾರರು ವರ್ಷವಿಡೀ ಶ್ರಮಪಟ್ಟು ಬೆಳೆ ಬೆಳೆದಿದ್ದು, ಸೂಕ್ತ ಬೆಲೆ ಸಿಗದಿದ್ದರೆ ರೈತರು ಆರ್ಥಿಕ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಕಾರ್ಖಾನೆಗಳು ತಮ್ಮ ನಿರ್ಧಾರದಂತೆ ಕಾರ್ಯನಿರ್ವಹಿಸುವ ಬದಲು ರೈತರ ಹಿತಾಸಕ್ತಿಗೂ ಆದ್ಯತೆ ನೀಡಬೇಕು. ಟನ್‌ಗೆ 5,500 ದರ ನಿಗದಿಪಡಿಸುವವರೆಗೆ ಯಾವುದೇ ಕಾರ್ಖಾನೆಯಲ್ಲಿ ಕಬ್ಬು ನುರಿಸುವ ಪ್ರಕ್ರಿಯೆ ನಡೆಯಬಾರದು. ಜಿಲ್ಲಾಡಳಿತ ರೈತರ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿ ತಕ್ಷಣ ಮಧ್ಯಪ್ರವೇಶಿಸಬೇಕು ಎಂದು ಆಗ್ರಹಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ
ಪ್ರೀತಿಗೆ ಪೋಷಕರು ವಿರೋಧ: ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ