ಕನ್ನಡಪ್ರಭ ವಾರ್ತೆ ಬೇತಮಂಗಲ
ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಿಗೆ ಪ್ರತಿಭಟನಾ ಸ್ಥಳದಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸ್ ಅಧಿಕಾರಿಗಳ ಮೂಲಕ ರೈತರು ಶನಿವಾರ ಮನವಿ ಪತ್ರ ಸಲ್ಲಿಸಿದರು.
ಎಕ್ಸ್‌ಪ್ರೆಸ್‌ವೇ ನಿರ್ಮಾಣದಿಂದಾಗಿ ಕೃಷಿ ಭೂಮಿ ಕಳೆದುಕೊಂಡು ಸಂಕಷ್ಟಕ್ಕೀಡಾಗಿರುವ ರೈತರು ತಮ್ಮ ಜೀವನೋಪಾಯಕ್ಕಾಗಿ ನ್ಯಾಯಯುತ ಹೋರಾಟ ನಡೆಸುತ್ತಿದ್ದು, ತಕ್ಷಣವೇ ಬೇಡಿಕೆಗಳನ್ನು ಈಡೇರಿಸಬೇಕೆಂದು ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ.ಸರ್ವೀಸ್ ರಸ್ತೆ ನಿರ್ಮಾಣ:
ವೈಜ್ಞಾನಿಕ ಒಳಚರಂಡಿ ಮತ್ತು ನೀರು ಹರಿಯುವ ಮಾರ್ಗಗಳನ್ನು ವ್ಯವಸ್ಥಿತವಾಗಿ ನಿರ್ಮಿಸಬೇಕು. ಇಲ್ಲದಿದ್ದರೆ ಮಳೆನೀರು ಕೃಷಿ ಜಮೀನುಗಳಿಗೆ ನುಗ್ಗಿ ಬೆಳೆ ನಾಶವಾಗುವ ಭೀತಿ ಎದುರಾಗಿದೆ ಎಂದು ನ್ಯಾಯಾಧೀಶರಾದ ಸುಬ್ರಮಣಿ ಆತಂಕ ವ್ಯಕ್ತಪಡಿಸಿದರು.
ರೈತರ ಈ ನ್ಯಾಯಸಮ್ಮತ ಬೇಡಿಕೆಗಳು ಈಡೇರುವವರೆಗೂ, ಸುಂದರಪಾಳ್ಯ ಟೋಲ್ ಪ್ಲಾಜಾ ಬಳಿ ಪ್ರತಿ ತಿಂಗಳ ಎರಡನೇ ಶನಿವಾರ ನಿರಂತರವಾಗಿ ಶಾಂತಿಯುತ ಪ್ರತಿಭಟನೆಯನ್ನು ನಡೆಸಲು ನಿರ್ಧರಿಸಿರುವುದಾಗಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಪ್ಪೋಜಿ ಗೌಡ ಎಚ್ಚರಿಸಿದ್ದಾರೆ.
ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ ಬಾಧಿತ ರೈತರ ಪರವಾಗಿ ಚಂದ್ರಶೇಖರ್.ಎಸ್, ವೆಂಕಟಾಚಲಪತಿ ಸಿ., ನಾಗೇಂದ್ರ ಕುಮಾರ್ (ಬುಜ್ಜಿ), ಮುರಳಿ, ವೆಂಕಟರಾಮ್ ಮತ್ತು ಈ ಭಾಗದ ರೈತ ಬಾಂಧವರು ಜಂಟಿಯಾಗಿ ವಿನಂತಿಸಿದ್ದಾರೆ.
ಬೇತಮಂಗಲ ಸಮೀಪದ ಸುಂದರಪಾಳ್ಯ ಬಳಿಯ ಚೆನೈ ಎಕ್ಸ್‌ಪ್ರೆಸ್ ವೇ ಟೋಲ್ ಬಳಿ ರೈತರು ಶಾಂತಿಯುತವಾಗಿ ಪ್ರತಿಭಟನೆ ನಡೆಸಿದರು.