ರೈತರೇ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಳ್ಳಿ: ಎಸ್.ಎಂ.ರಾಜೇಶ್ವರಿ

KannadaprabhaNewsNetwork |  
Published : Sep 28, 2025, 02:00 AM IST
27ಕೆಎಂಎನ್ ಡಿ22 | Kannada Prabha

ಸಾರಾಂಶ

ಕೇಂದ್ರದಿಂದ ಹಿಡಿದು ಗ್ರಾಮ ಪಂಚಾಯ್ತಿವರೆವಿಗೂ ಸರ್ಕಾರದ ಸೌಲಭ್ಯವನ್ನು ಬಳಸಿಕೊಳ್ಳುವಂತೆ ತಿಳಿವಳಿಕೆ ನೀಡಲು ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗಿದೆ. ಅವರು ಸಂಘಗಳ ಸ್ಥಾಪನೆ, ತರಬೇತಿ ಸೇರಿದಂತೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದು, ಪ್ರಯೋಜನ ಪಡೆದುಕೊಳ್ಳಬೇಕು.

ಕನ್ನಡಪ್ರಭ ವಾರ್ತೆ ಮಳವಳ್ಳಿ

ಜಿಲ್ಲೆಯ ರೈತರು ಸಂಪ್ರದಾಯಕ ಬೆಳೆಗಳನ್ನು ಕೈಬಿಟ್ಟು ಆಧುನಿಕ ಕೃಷಿ ಪದ್ಧತಿಯನ್ನು ಅವಳವಡಿಸಿಕೊಂಡು ಅರ್ಥಿಕವಾಗಿ ಸದೃಢರಾಗಬೇಕು ಎಂದು ಕೇಂದ್ರ ಸರ್ಕಾರ ಗ್ರಾಮೀಣಾಭಿವೃದ್ಧಿ ಇಲಾಖೆ ನಿರ್ದೇಶಕಿ ಎಸ್.ಎಂ.ರಾಜೇಶ್ವರಿ ಕರೆ ನೀಡಿದರು.

ಪಟ್ಟಣದ ಗಾಯಿತ್ರಿ ಮಂದಿರದಲ್ಲಿ ಸಂಪೂರ್ಣ ಸಾವಯವ ಕೃಷಿಕರ ಸಂಘದಿಂದ ನಡೆದ ಕೇಂದ್ರ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಬಗ್ಗೆ ರೈತರಿಗೆ ಮಾಹಿತಿ ನೀಡುವ ಸಭೆ ಉದ್ಘಾಟಿಸಿ ಮಾತನಾಡಿ, ಔಷಧೀಯ ಗಿಡಮೂಲಿಕೆಗಳಿಗೆ ಹೆಚ್ಚಿನ ಬೇಡಿಕೆ ಇದ್ದು, ಸಾವಯವದಲ್ಲಿಯೂ ಬೆಳೆದು ಹೆಚ್ಚು ಲಾಭ ಗಳಿಸಿಕೊಳ್ಳಬಹುದು ಎಂದರು.

ಜಿಲ್ಲೆಯಲ್ಲಿ ಬೆಳೆಯುವ ತುಳುಸಿಗೆ ಹೆಚ್ಚಿನ ಬೇಡಿಕೆ ಇದ್ದು, ರೈತರು ಸಂಪ್ರದಾಯಕ ಬೆಳೆ ಕಬ್ಬು ಭತ್ತ ರಾಗಿಗೆ ಸೀಮಿತವಾಗಿರುವುದನ್ನು ಬಿಟ್ಟು ವಾಣಿಜ್ಯ ಉದ್ದೇಶದಿಂದ ಔಷಧ ಗೀಡಮೂಳಿಕೆಗಳನ್ನು ಬೆಳೆಯಬೇಕೆಂದು ಸಲಹೆ ನೀಡಿದರು.

ಕೇಂದ್ರದಿಂದ ಹಿಡಿದು ಗ್ರಾಮ ಪಂಚಾಯ್ತಿವರೆವಿಗೂ ಸರ್ಕಾರದ ಸೌಲಭ್ಯವನ್ನು ಬಳಸಿಕೊಳ್ಳುವಂತೆ ತಿಳಿವಳಿಕೆ ನೀಡಲು ಸ್ವಯಂ ಸೇವಕರನ್ನು ಆಯ್ಕೆ ಮಾಡಲಾಗಿದೆ. ಅವರು ಸಂಘಗಳ ಸ್ಥಾಪನೆ, ತರಬೇತಿ ಸೇರಿದಂತೆ ಸರ್ಕಾರದ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದು, ಪ್ರಯೋಜನ ಪಡೆದುಕೊಳ್ಳಬೇಕೆಂದು ಹೇಳಿದರು.

ಸಂಪೂರ್ಣ ಸಾವಯವ ಕೃಷಿಕರ ಸಂಘದ ತಾಲೂಕು ಅಧ್ಯಕ್ಷ ಮಹೇಶ್ ಕುಮಾರ್ ಮಾತನಾಡಿ, ದೇಶದಲ್ಲಿ ವಿಷಮುಕ್ತ ಭೂಮಿ ಉಳಿಸಿ ಉತ್ತಮ ಆಹಾರವನ್ನು ಸೇವನೆ ಮಾಡಬೇಕಾದ ಅನಿವಾರ್ಯತೆ ಎದುರಾಗಿದೆ. ಹೀಗಾಗಿ ಸಾವಯವ ಕೃಷಿಕರಾಗಿ ಭೂಮಿ ಹಾಗೂ ಪರಿಸರವನ್ನು ಉಳಿಸಿಕೊಳ್ಳಬೇಕಿದೆ ಎಂದು ಮನವಿ ಮಾಡಿದರು.

ಕಾರ್ಯಕ್ರಮದಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ಅಶೋಕ್, ತೋಟಗಾರಿಕೆ ಇಲಾಖೆ ಸಹಾಯಲ ನಿರ್ದೇಶಕ ಶಾಂತರಾಜು, ಚಿಕ್ಕಣ್ಣ, ಮಹದೇವು, ಸತ್ಯಮೂರ್ತಿ, ಕೇಶವಮೂರ್ತಿ, ಸೇರಿದಂತೆ ಇತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಹೈಕೋರ್ಟ್‌ ಹೊಸ ಕಟ್ಟಡಕ್ಕೆ 30 ಎಕ್ರೆಕೋರಿಕೆ:ರಾಜ್ಯ ಸರ್ಕಾರಕ್ಕೆ ನೋಟಿಸ್‌
ಬಿಎಂಐಸಿ ಮರುಪರಿಶೀಲಿಸಿ: ರಾಜ್ಯಕ್ಕೆ ಕೋರ್ಟ್‌ ಸೂಚನೆ