ರೈತರು ತಂತ್ರಜ್ಞಾನ ಅಳವಡಿಸಿಕೊಳ್ಳಲಿ: ಸಚಿವ ಎಚ್.ಕೆ. ಪಾಟೀಲ

KannadaprabhaNewsNetwork |  
Published : Jan 17, 2026, 03:15 AM IST
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ಮಾತನಾಡಿದರು. | Kannada Prabha

ಸಾರಾಂಶ

ಇತ್ತೀಚೆಗೆ ಕೇಂದ್ರ ಸರ್ಕಾರ ಈ ಕಾನೂನನ್ನು ರದ್ದುಪಡಿಸಿರುವುದು ಗ್ರಾಮೀಣ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಈ ಕಾನೂನು ಪುನಃ ಜಾರಿಯಾಗಬೇಕೆಂದು ಸಚಿವ ಎಚ್.ಕೆ. ಪಾಟೀಲ ಆಗ್ರಹಿಸಿದರು.

ಗದಗ: ರೈತರು ಸಹ ಡಿಜಿಟಲ್ ಗ್ರಂಥಾಲಯಗಳನ್ನು ಬಳಸಿಕೊಂಡು ಹೊಸ ತಂತ್ರಜ್ಞಾನ, ಮಾಹಿತಿ ಮತ್ತು ಜ್ಞಾನವನ್ನು ಪಡೆದುಕೊಳ್ಳಬೇಕು. ಇದರಿಂದ ಕೃಷಿ ಕ್ಷೇತ್ರದಲ್ಲೂ ಹೊಸ ಬದಲಾವಣೆ ಸಾಧ್ಯವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ತಿಳಿಸಿದರು.

ಶುಕ್ರವಾರ ಅಂತೂರ- ಬೆಂತೂರ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾತನಾಡಿ, ಇಲ್ಲಿಯವರೆಗೂ ಗ್ರಾಮೀಣ ಪ್ರದೇಶಗಳಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ(ನರೇಗಾ)ಯನ್ನು ಸದ್ಬಳಕೆ ಮಾಡಲಾಗುತ್ತಿತ್ತು. ಇತ್ತೀಚೆಗೆ ಕೇಂದ್ರ ಸರ್ಕಾರ ಈ ಕಾನೂನನ್ನು ರದ್ದುಪಡಿಸಿರುವುದು ಗ್ರಾಮೀಣ ಅಭಿವೃದ್ಧಿಗೆ ಹಿನ್ನಡೆಯಾಗಿದೆ. ಈ ಕಾನೂನು ಪುನಃ ಜಾರಿಯಾಗಬೇಕೆಂದು ನಾನು ಕೇಂದ್ರ ಸರ್ಕಾರದ ಮೇಲೆ ಒತ್ತಾಯ ಮಾಡುತ್ತೇನೆ ಎಂದರು.

ಡಿಜಿಟಲ್ ತಂತ್ರಜ್ಞಾನ ಬಳಕೆಯನ್ನು ಒತ್ತಿ ಹೇಳಿದ ಸಚಿವರು, ಪಕ್ಕದ ಒಂದು ಗ್ರಾಮದಲ್ಲಿ 15 ವರ್ಷಗಳ ಹಿಂದೆಯೇ ಡಿಜಿಟಲ್ ಗ್ರಂಥಾಲಯ ಆರಂಭವಾಗಿದ್ದು, ಇಂದು ಅದು ಎಲ್ಲ ಗ್ರಾಮಗಳಿಗೂ ವಿಸ್ತರಿಸಿರುವುದು ಸಂತಸದ ಸಂಗತಿ ಎಂದರು.

ಗ್ರಾಮದಲ್ಲಿ ಐಆರ್‌ಡಿಎಫ್ ಯೋಜನೆಯಡಿ ನಿರ್ಮಾಣವಾಗ ಅಂಗನವಾಡಿ ಕೇಂದ್ರ, ಡಿಜಿಟಲ್ ಗ್ರಂಥಾಲಯ, ಬಸ್ ತಂಗುದಾಣ, ಎಸ್‌ಡಿಪಿ ಯೋಜನೆಯಡಿ‌ ನಿರ್ಮಾಣವಾದ ಅಂಗನವಾಡಿ ಹಾಗೂ ಜಿಮ್‌ಗಳನ್ನು ಶುಕ್ರವಾರ ಲೋಕಾರ್ಪಣೆ ಮಾಡಲಾಗಿದೆ. ಇವುಗಳ ಸದ್ಬಳಕೆಯನ್ನು ಗ್ರಾಮದ ಸಾರ್ವಜನಿಕರು ಮಾಡಿಕೊಳ್ಳಲು ತಿಳಿಸಿದರು.

ಗ್ರಾಮೀಣ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದ್ದು, ಮೂಲ ಸೌಕರ್ಯ ಸೌಲಭ್ಯಗಳನ್ನು ಹಂತ- ಹಂತವಾಗಿ ಕಲ್ಪಿಸಲಾಗುತ್ತಿದೆ ಎಂದರು.

ರಸ್ತೆ, ಕುಡಿಯುವ ನೀರು, ಒಳಚರಂಡಿ, ಸಾರ್ವಜನಿಕ ಕಟ್ಟಡಗಳು ಸೇರಿದಂತೆ ಜನೋಪಯೋಗಿ ಯೋಜನೆಗಳ ಮೂಲಕ ಗ್ರಾಮಗಳ ಜೀವನಮಟ್ಟವನ್ನು ಸುಧಾರಿಸುವುದು ಸರ್ಕಾರದ ಉದ್ದೇಶವಾಗಿದೆ ಎಂದರು.

ಅಂತೂರ- ಬೆಂತೂರ ಗ್ರಾಮದಲ್ಲಿ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾಮಗಾರಿಗಳು ಗ್ರಾಮಸ್ಥರ ಬಹುದಿನಗಳ ಬೇಡಿಕೆಯಾಗಿದ್ದು, ಅವುಗಳು ಪೂರ್ಣಗೊಂಡ ನಂತರ ಜನರಿಗೆ ಅಗತ್ಯ ಮೂಲ ಸೌಕರ್ಯಗಳು ಲಭ್ಯವಾಗಲಿವೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಪಂ ಅಧ್ಯಕ್ಷ ಪ್ರಕಾಶಗೌಡ ಪಾಟೀಲ ವಹಿಸಿದ್ದರು. ಉಪಾಧ್ಯಕ್ಷೆ ನೀಲವ್ವ ಬಡ್ನಿ, ಗದಗ- ಬೆಟಗೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ್ ಬಬರ್ಚಿ, ಕುರ್ತಕೋಟಿ ಗ್ರಾಪಂ ಅಧ್ಯಕ್ಷ ಅಪ್ಪಣ್ಣ‌ ಇನಾಮತಿ, ರವಿ ಮೂಲಿಮನಿ, ಎನ್.ಜೆ. ಕುರಹಟ್ಟಿ, ಶಿವಪ್ರಕಾಶ ಮಣಕವಾಡ, ನಾರಾಯಣರಾವ್ ವಶೇಕರ್, ಕನಕಪ್ಪ ಹಾದಿಮನಿ, ಎಚ್.ಬಿ. ಹದಲಿ, ಕೆ.ಎಲ್. ಪೂಜಾರ, ವಿನೋದ ಹೂಗಾರ, ಹೈದರ ಅಲಿ ನದಾಫ, ಶರಣಪ್ಪ, ಯಲ್ಲಪ್ಪ ಕುರಹಟ್ಟಿ, ಅಂದಾನಪ್ಪ ಚಿಂಚಲಿ, ರಾಘವೇಂದ್ರ ಓಶೇಕರ, ಪ್ರವೀಣ ಚಾಕಲಬ್ಬಿ, ನಿಂಗಪ್ಪ ಅಮ್ಮಾಗಿ, ಮುದುಕಪ್ಪ ಮನಕವಾಡ, ಪೀರಸಾಬ ನದಾಫ, ವೈ.ಡಿ. ತಳವಾರ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೆ. ಸೇರಿದಂತೆ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ವಿಶೇಷ ಅಧಿವೇಶನದಲ್ಲಿ ಬಲ್ಡೋಟಾ ವಿರೋಧಿ ಹೋರಾಟ ಪ್ರಸ್ತಾಪ
ಕೇಂದ್ರ ಸರ್ಕಾರದಿಂದ ಅನುದಾನ ನೀಡಿಕೆಯಲ್ಲಿ ತಾರತಮ್ಯ-ಶಾಸಕ ಮಾನೆ