ಕೃಷಿಕರು ಮಕ್ಕಳಿಗೆ ಶಿಕ್ಷಣ ನೀಡಿ ಬದುಕನ್ನು ಹಸನಾಗಿಸಿ: ಶಾಸಕ ಎಚ್.ಡಿ. ತಮ್ಮಯ್ಯ

KannadaprabhaNewsNetwork |  
Published : May 16, 2026, 12:45 AM IST
ಪೋಟೋ | Kannada Prabha

ಸಾರಾಂಶ

ಚಿಕ್ಕಮಗಳೂರುಕೃಷಿಕರು ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.ತಾಲೂಕು ಪಂಚಾಯಿತಿಯಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿ ಶಿಕ್ಷಣ, ಕೇವಲ ಬದುಕಲು ಅಲ್ಲ. ಜೀವನ ನಡೆಸುವುದಕ್ಕೆ ಅಗತ್ಯವಿದೆ. ಸಮ ಸಮಾಜ ನಿರ್ಮಾಣ ಆಗಬೇಕಾದರೆ ಶಿಕ್ಷಣ ಪಡೆಯಬೇಕೆಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದರು ಎಂದ ಅವರು, ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಬೇಕು ಎಂದರು.

ತಾಲೂಕು ಪಂಚಾಯಿತಿಯಲ್ಲಿ ವಿವಿಧ ಕಲ್ಯಾಣ ಯೋಜನೆಯಡಿ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಣೆ

ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಕೃಷಿಕರು ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಬೇಕು ಎಂದು ಶಾಸಕ ಎಚ್.ಡಿ. ತಮ್ಮಯ್ಯ ಹೇಳಿದರು.

ತಾಲೂಕು ಪಂಚಾಯಿತಿಯಲ್ಲಿ ಗುರುವಾರ ಆಯೋಜಿಸಿದ್ದ ಸಮಾರಂಭದಲ್ಲಿ ವಿವಿಧ ಕಲ್ಯಾಣ ಯೋಜನೆ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ವಿತರಿಸಿ ಮಾತನಾಡಿ ಶಿಕ್ಷಣ, ಕೇವಲ ಬದುಕಲು ಅಲ್ಲ. ಜೀವನ ನಡೆಸುವುದಕ್ಕೆ ಅಗತ್ಯವಿದೆ. ಸಮ ಸಮಾಜ ನಿರ್ಮಾಣ ಆಗಬೇಕಾದರೆ ಶಿಕ್ಷಣ ಪಡೆಯಬೇಕೆಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಹೇಳಿದ್ದರು ಎಂದ ಅವರು, ಮಕ್ಕಳಿಗೆ ಶಿಕ್ಷಣ ನೀಡಿ ಅವರ ಬದುಕನ್ನು ಹಸನಾಗಿಸಬೇಕು ಎಂದರು.

ದೇವರಾಜ ಅರಸ್ ಅವರು ಈ ದೇಶ ಕಂಡಂತಹ ಧೀಮಂತ ನಾಯಕ. ಅವರ ಹೆಸರಿನಲ್ಲಿ ಸರ್ಕಾರ ಹಿಂದುಳಿದ ವರ್ಗಗಳ ರೈತರ ಬದುಕನ್ನ ಹಸನಗೊಳಿಸಲು, ಸಮಸಮಾಜ ನಿರ್ಮಾಣ ಮಾಡಬೇಕು. ಆರ್ಥಿಕ, ಸಾಮಾಜಿಕವಾಗಿ ಮುನ್ನಲೆಗೆ ಬರಬೇಕು ಎನ್ನುವ ದೃಷ್ಟಿಯಿಂದ ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಪ್ರಾರಂಭಿಸಿ ಪ್ರತಿ ವರ್ಷ ಗಂಗಾ ಕಲ್ಯಾಣ ಯೋಜನೆ ಅಡಿ ಬೋರ್ ವೆಲ್ ಕೊರೆಸಲಾಗುತ್ತಿದೆ. ಸ್ವಾವಲಂಬಿ ಸಾರಥಿ ಯೋಜನೆಯಡಿ ವಾಹನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.

ನಮ್ಮ ದೇಶದಲ್ಲಿ ಕೃಷಿಯನ್ನೇ ನಂಬಿರುವ ಶೇ. 70ರಷ್ಟು ಜನರಿದ್ದಾರೆ. ದೇಶದ ರೈತ ಕೃಷಿಕ, ಅವರ ಬದುಕನ್ನು ಹಸನ ಗೊಳಿಸಲು ಸರ್ಕಾರಗಳು ಅವರ ಉದ್ಧಾರಕ್ಕಾಗಿ ಹಲವು ಕಾರ್ಯಕ್ರಮ ಹಮ್ಮಿಕೊಂಡಿವೆ. ನಮ್ಮ ನೆಚ್ಚಿನ ಸಿಎಂ ಸಿದ್ದರಾಮಯ್ಯ ಅವರು ದೇವರಾಜ ಅರಸು ನಂತರ ಮತ್ತೊಮ್ಮೆ ಹಿಂದುಳಿದ ವರ್ಗಗಳ ಬಡವರ ಪ್ರೀತಿಯ ನಾಯಕ ಎಂದು ಹೇಳಿದರು.

ಗಂಗಾ ಕಲ್ಯಾಣ ಯೋಜನೆಯಡಿ ಬೋರ್ ವೆಲ್ ಕೊರೆಸಲು ಕಳೆದ ವರ್ಷ 20 ಪಲಾನುಭವಿಗಳಿಗೆ ಸವಲತ್ತು ನೀಡಲಾಗಿತ್ತು. ಆದರೆ, ಮುಖ್ಯಮಂತ್ರಿಗಳ ಬಳಿ ಹಾಗೂ ವಿಧಾನಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಹೊಲದಲ್ಲಿ ಕೊಳವೆ ಬಾವಿ ಕೊರೆಸಲು ನಿಗದಿ ಪಡಿಸಿದ ಗುರಿ ಹೆಚ್ಚಿಸಲಾಗಿದೆ. ಬೋರ್ ವೆಲ್‌ನಲ್ಲಿ ಉತ್ತಮ ನೀರು ಬಂದು ನಿಮ್ಮ ಬೆಳೆಗಳಿಗೆ ಉತ್ತಮ ನೀರಾದರೆ ಅದರಿಂದ ಆರ್ಥಿಕವಾಗಿ ಮುಂದೆ ಬರಬಹುದು. ಆರ್ಥಿಕವಾಗಿ ಸದೃಢರಾದರೆ ಮಕ್ಕಳಿಗೆ ಶಿಕ್ಷಣ ನೀಡಬಹುದು ಎಂದರು.

ಡಾ.ಬಿ.ಆರ್. ಅಂಬೇಡ್ಕರ್ ಹಾಗೂ ಸಮಸಮಾಜ ನಿರ್ಮಾಣಕ್ಕಾಗಿ ಬಸವಣ್ಣ, ಇವರಿಬ್ಬರ ವಿಚಾರಧಾರೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಡಳಿತದಲ್ಲಿ ಅಳವಡಿಸಿಕೊಂಡಿದ್ದಾರೆ. ಸಮಾಜವಾದದ ಹಿನ್ನೆಲೆಯಿಂದ ಬಂದ ಅವರು ಒಂದು ಜಾತಿ, ಒಂದು ಧರ್ಮಕ್ಕೆ ಅಲ್ಲ, ಬಡವರ ಪರ ಇರುವ ಏಕೈಕ ಮುಖ್ಯಮಂತ್ರಿ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಂಜೇಗೌಡ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ವಿಜಯಕುಮಾರ್, ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಟಿ. ರಾಕೇಶ್ ಉಪಸ್ಥಿತರಿದ್ದರು.ಫಲಾನುಭವಿಗಳ ವಿವರ: ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಗಂಗಾ ಕಲ್ಯಾಣ ಯೋಜನೆಯಡಿ 49 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿದ್ದು ಪ್ರತಿ ಘಟಕದ ವೆಚ್ಚ ₹ 3.24 ಲಕ್ಷ ಗಳಂತೆ ಒಟ್ಟು ₹159.25 ಲಕ್ಷ ಸ್ವಾವಲಂಬಿ ಸಾರಥಿ ಯೋಜನೆಯಡಿ ಆಯ್ಕೆಗೊಂಡ 29 ಜನರಿಗೆ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಮಾಜದಲ್ಲಿನ ಅಂಕು-ಡೊಂಕು ತಿದ್ದುವ ಮಠಗಳು
ಟ್ರ್ಯಾಕ್ಟರ್ ಪಲ್ಟಿ: ಒಂದೇ ಕುಟುಂಬದ 7 ಸಾವು