ಕನ್ನಡಪ್ರಭ ವಾರ್ತೆ ಹಿರಿಯೂರು
ಕಾರ್ಯಕ್ರಮದಲ್ಲಿ ಕೃಷಿಕ ಸಮಾಜದ ಜಿಲ್ಲಾ ನಿರ್ದೇಶಕ ಕಂದಿಕೆರೆ ಜಗದೀಶ್ ಮಾತನಾಡಿ, ರೈತರು ಉತ್ತಮ ತಳಿ ಬೀಜಗಳನ್ನು ಆಯ್ಕೆ ಮಾಡಿಕೊಂಡು ಬಿತ್ತನೆ ಮಾಡಬೇಕು. ಬೆಳೆಸ್ಥಿತಿ, ರೋಗ ಲಕ್ಷಣ ಹಾಗೂ ಹವಾಮಾನಕ್ಕೆ ತಕ್ಕಂತೆ ಔಷಧ, ಪೋಷಕಾಂಶಗಳನ್ನು ಅಧಿಕಾರಿಗಳ ಸಲಹೆ ಪಡೆದು ಬೆಳೆಗಳಿಗೆ ಕೊಡಬೇಕು. ರೈತರು ಅಧುನಿಕ ಕೃಷಿ ಪದ್ಧತಿಯನ್ನು ಅಳವಡಿಸಿಕೊಂಡು ಉತ್ತಮ ಇಳುವರಿ ಪಡೆಯಬೇಕು. ಬೆಳೆದ ಬೆಳೆಗಳ ಮೌಲ್ಯವರ್ಧನೆ, ಮಾರುಕಟ್ಟೆ ಕಲ್ಪಿಸುವ ಉದ್ದೇಶದಿಂದ ರೈತ ಉತ್ಪಾದಕ ಸಂಸ್ಥೆಯಲ್ಲಿ ಸದಸ್ಯತ್ವ ಪಡೆದು ಸದುಪಯೋಗ ಪಡಿಸಿಕೊಳ್ಳಬೇಕು. ಸರ್ಕಾರ ನೀಡಿರುವ ಬೆಂಬಲ ಬೆಲೆ ಖರೀದಿ ಕೇಂದ್ರದಲ್ಲಿ ರೈತರು ನೋಂದಣಿ ಮಾಡಿಸಿಕೊಂಡು ತಮ್ಮ ಬೆಳೆಗಳಿಗೆ ಉತ್ತಮ ಬೆಲೆ ಪಡೆಯಬೇಕು ಎಂದರು.
ಸಹಾಯಕ ಕೃಷಿ ನಿರ್ದೇಶಕ ಜೆ.ಅಶೋಕ್ ಪ್ರಾಸ್ಥಾವಿಕವಾಗಿ ಮಾತನಾಡಿ, ಸರ್ಕಾರಿ ಯೋಜನೆಗಳನ್ನು ರೈತರು ಸದುಪಯೋಗ ಮಾಡಿಕೊಂಡು ಕೃಷಿಯನ್ನು ಲಾಭದಾಯಕವಾಗಿಸಿಕೊಳ್ಳಬೇಕು. ರೈತರಿಗೆಂದೇ ಹಲವು ಸೌಲಭ್ಯಗಳಿದ್ದು ಅವುಗಳ ಮಾಹಿತಿ ಪಡೆದು ಸದ್ಭಳಕೆ ಮಾಡಿಕೊಳ್ಳಿ ಎಂದರು.ನಿವೃತ್ತ ಕೃಷಿ ಅಧಿಕಾರಿ ಶಾಂತವೀರಪ್ಪ ಮಾತನಾಡಿ, ಜೇನುಕೃಷಿಯ ಬಗ್ಗೆ ಮಾಹಿತಿ ನೀಡಿದರು.
ರೈತಸಂಘದ ಜಿಲ್ಲಾಧ್ಯಕ್ಷ ಕೆ.ಟಿ.ತಿಪ್ಪೇಸ್ವಾಮಿ ಮಾತನಾಡಿ, ಕೃಷಿ ಮತ್ತು ತೋಟಗಾರಿಕೆ ಅಧಿಕಾರಿಗಳು ಹೊಸದಾಗಿ ತಾಲೂಕಿಗೆ ಬಂದಿದ್ದು ರೈತಸ್ನೇಹಿ ಯಾಗಿ ಕಾರ್ಯ ನಿರ್ವಹಿಸಿ ತಾಲೂಕಿನ ರೈತರ ಪ್ರಗತಿಗೆ ಸಹಕಾರ ನೀಡಬೇಕು ಎಂದರು.ಇದೇ ಸಂದರ್ಭದಲ್ಲಿ ವಿವಿಧ ಕೃಷಿಯ ಕ್ಷೇತ್ರದಲ್ಲಿ ಸಾದನೆ ಮಾಡಿದ ರೈತರನ್ನು ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಕೃಷಿ ವಿಜ್ಞಾನಿ ಮನೋಹರ್, ಕೃಷಿಕ ಸಮಾಜದ ಅಧ್ಯಕ್ಷ ಸಿ.ಕಾಂತರಾಜು, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಶ್ರೀನಿವಾಸ್, ಪಿ.ಎಸ್.ಪಾತಣ್ಣ, ಪಕೃದ್ದೀನ್, ರೈತ ಸಂಘದ ತಾಲೂಕು ಅಧ್ಯಕ್ಷ ಸಿದ್ದರಾಮಣ್ಣ, ಗಡಾರಿ ಕೃಷ್ಣಪ್ಪ, ಚಂದ್ರಶೇಖರ್ ಸೇರಿದಂತೆ ಹಲವ ರೈತ ಮುಖಂಡರು, ಕೃಷಿ ಇಲಾಖೆ ಅಧಿಕಾರಿಗಳು,ಸಿಬ್ಬಂದಿ ವರ್ಗದವರು, ರೈತರು ಹಾಜರಿದ್ದರು.