ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ನಗರದ ಜಿಲ್ಲಾ ಪಂಚಾಯಿತಿ ಆವರಣದಲ್ಲಿ ಗುರುವಾರ ಕೃಷಿ ಇಲಾಖೆಯಿಂದ ಬೆಳೆವಿಮೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿ ಮಾತನಾಡಿ ರಾಜ್ಯ ಸರ್ಕಾರದ ಅಧಿಸೂಚನೆಯಂತೆ ರಾಜ್ಯಾದ್ಯಂತ ಏಕ ಕಾಲದಲ್ಲಿ ಜಿಲ್ಲೆಯಿಂದ ಹೋಬಳಿ ಮಟ್ಟಕ್ಕೆ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆ ಬಗ್ಗೆ ಪ್ರಚಾರದ ಈ ಕಾರ್ಯಕ್ರಮ ಉತ್ತಮವಾಗಿದೆ ಎಂದು ಹೇಳಿದರು.
ಸರ್ಕಾರದ ಸೌಲಭ್ಯಗಳಿಗೆ ಸಂಬಂಧಿಸಿದ ಫಲಾನುಭವಿಗಳಿಗೆ ತಲುಪಬೇಕೆಂಬುದೆ ಇದರ ಉದ್ದೇಶ. ಕೃಷಿ ಇಲಾಖೆ ಯಡಿ ಯೋಜನೆ ಬಗ್ಗೆ ಮಾಹಿತಿ ಇದೆ. ಆದರೆ ತೋಟಗಾರಿಕೆ ಬೆಳೆಗಳಿಗೆ ವಿಮೆ ಹಣ ಸರಿಯಾಗಿ ದೊರೆಯುತ್ತಿಲ್ಲ ಎಂಬ ದೂರು ಗಳಿದ್ದು, ಅಧಿಕಾರಿಗಳು ರೈತರ ಮನವೊಲಿಸಿ ಮಾರ್ಗದರ್ಶನ ನೀಡಬೇಕೆಂದು ತಿಳಿಸಿದರು.ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸುತ್ತಿರುವ ರೈತರಿಗೆ ಬೆಳೆ ವಿಮೆ ಬಗ್ಗೆ ಅಧಿಕಾರಿಗಳು ಸಮಗ್ರ ಮಾಹಿತಿ ನೀಡಿದಾಗ ರೈತರು ವಿಮೆ ಮಾಡಿಸುತ್ತಾರೆ. ಜೊತೆಗೆ ಬೆಳೆ ಸಮೀಕ್ಷೆ ಮಾಡುವಾಗ ಇಲಾಖೆ ಮಾನದಂಡ ಗೊಂದಲಗಳಿಗೆ ಕಾರಣ ವಾಗುತ್ತಿದೆ ಎಂದು ವಿಷಾಧಿಸಿದರು.
ದೇಶದ ಬೆನ್ನೆಲುಬಾದ ರೈತನ ಬದುಕು ಹಸನಾಗಿಸಲು ಕೇಂದ್ರ- ರಾಜ್ಯ ಸರ್ಕಾರ ಕೃಷಿ ಇಲಾಖೆ ಮೂಲಕ ಹಲ ವಾರು ಯೋಜನೆ ಜಾರಿಗೆ ತಂದಿದೆ. ಬೆಳೆವಿಮೆ, ಬಿತ್ತನೆ ಬೀಜಗಳ ಕೊರತೆಯಾಗದಂತೆ ಹಾಗೂ ರಸಗೊಬ್ಬರ ಅಭಾವ ತಲೆದೋರ ದಂತೆ ಗಮನ ಹರಿಸಿ ಆದ್ಯತೆ ನೀಡಬೇಕು ಎಂದು ಹೇಳಿದರು.
ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ನಿರ್ದೇಶಕರು ಸೇರಿದಂತೆ ವಿವಿಧ ರಾಷ್ಟ್ರೀಕೃತಬ್ಯಾಂಕುಗಳ ಅಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಬೇಕಿತ್ತು. ಅಧಿಕಾರಿಗಳಿ ಆಹ್ವಾನ ನೀಡಿಲ್ಲ. ತೋಟಗಾಕೆ ಬೆಳೆಗಳು ಜಿಲ್ಲೆಯಲ್ಲಿ ಹೆಚ್ಚಿದ್ದು, ರಾಗಿ, ಜೋಳ ಬೆಳೆದವರು ವಿಮೆ ಮಾಡಿಸಲು ಮುಂದಾಗುವುದಿಲ್ಲ ಎಂದು ಹೇಳಿದರು.
ಜಿಲ್ಲೆಯ ರೈತರು ತಮ್ಮ ಬೆಳೆಗಳ ಬಗ್ಗೆ ಸಮಗ್ರ ಮಾಹಿತಿತೋಟಗಾರಿಕೆ ಮತ್ತು ಕೃಷಿ ಇಲಾಖೆ ಅಧಿಕಾರಿಗಳಿಗೆ ನೀಡಿ ಹೆಚ್ಚಿನ ವಿವರ ಎಫ್ ಐ ಡಿ ಮೂಲಕ ಪಡೆದು ರೈತರು ವಿಮಾ ಕಂತು ಪಾವತಿಸುವಂತೆ ಮನವಿ ಮಾಡಬೇಕು ಎಂದು ಹೇಳಿದರು.
ಫೋಟೋ: 9 ಸಿಕೆಎಂ 1