ಕನ್ನಡಪ್ರಭ ವಾರ್ತೆ ಕೆ.ಆರ್.ಪೇಟೆ
ಪಟ್ಟಣದ ಹೋಟೆಲ್ ರಾಮದಾಸ್ ಸಭಾಂಗಣದಲ್ಲಿ ಮಾಜಿ ಸ್ಪೀಕರ್ ಕೃಷ್ಣ ಪ್ರತಿಷ್ಠಾನದಿಂದ ಕೃಷ್ಣರ 84ನೇ ಹುಟ್ಟುಹಬ್ಬದ ಅಂಗವಾಗಿ ಆಯೋಜಿಸಿದ್ದ ವಿಚಾರ ಸಂಕಿರಣದಲ್ಲಿ ಕೃಷಿ ಉದ್ಯಮಗಳನ್ನು ಕಟ್ಟುವುದು ಹೇಗೆ ವಿಷಯ ಕುರಿತು ವಿಚಾರ ಮಂಡಿಸಿದರು.
ಮಾರುಕಟ್ಟೆಯಲ್ಲಿ ರೈತರಿಗಿಂತ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ರೈತರ ಉತ್ಪನ್ನಗಳನ್ನು ಕಡಿಮೆ ಬೆಲೆಗೆ ಕೊಂಡು ಅದರಿಂದ ದಲ್ಲಾಳಿಗಳು ಹೆಚ್ಚು ಲಾಭ ಮಾಡುವ ಮಾರುಕಟ್ಟೆ ವ್ಯವಸ್ಥೆ ರೂಪುಗೊಂಡಿದೆ. ಇದಕ್ಕೆ ರೈತರು ಕೇವಲ ಕೃಷಿಕರಾಗಿರುವುದು ಕಾರಣ ಎಂದರು.ರೈತರು ತಮ್ಮ ಮಕ್ಕಳನ್ನು ಕೇವಲ ರೈತನ್ನಾಗಿಸದೇ ಅವರಲ್ಲಿ ಕನಸುಗಳನ್ನು ತುಂಬಿ ತಮ್ಮ ಉತ್ಪನ್ನಗಳ ಮಾರಾಟಕ್ಕಾಗಿ ಮಾರುಕಟ್ಟೆ ಹುಡುಕುವ ಬದಲು ಮಾರುಕಟ್ಟೆಗಳನ್ನು ಸ್ಥಾಪಿಸಲು ಪ್ರೇರೆಪಿಸಬೇಕು. ಈ ಮೂಲಕ ರೈತರ ಮಕ್ಕಳು ಕೃಷಿ ಉದ್ಯಮಿಗಳಾಗಿ ರೂಪುಗೊಳ್ಳಲು ನೆರವಾಗಬೇಕು ಎಂದರು.
ಅಧ್ಯಕ್ಷತೆ ವಹಿಸಿದ್ದ ಶಾಸಕ ಎಚ್.ಟಿ.ಮಂಜು ಮಾತನಾಡಿ, ನಾನು ರೈತ ಚಳವಳಿಯ ಮೂಲಕ ಬೆಳೆದವನು. ಮಂಡ್ಯ ಜಿಲ್ಲೆ ಆದರ್ಶ ರಾಜಕಾರಣಿಗಳಿಗೆ ಹೆಸರಾಗಿದೆ. ಹಿರಿಯರ ದಾರಿಯಲ್ಲಿ ನಾನು ನಡೆದು ಕೃಷ್ಣ ಪ್ರತಿಷ್ಠಾನದ ಕಾರ್ಯ ಚಟುವಟಿಕೆಗಳಿಗೆ ಅಗತ್ಯ ಸಹಕಾರ ನೀಡುತ್ತೇನೆ ಎಂದರು.
ಸಮಾರಂಭದಲ್ಲಿ ಟಿಎಪಿಸಿಎಂಎಸ್ ಅಧ್ಯಕ್ಷ ಬಿ.ಎಲ್.ದೇವರಾಜು, ಮನ್ಮುಲ್ ನಿರ್ದೇಶಕ ಡಾಲು ರವಿ, ರೈತ ಮುಖಂಡ ಕೆ.ಆರ್.ಜಯರಾಂ, ಆರ್.ಟಿ.ಓ ಅಧಿಕಾರಿ ಮಲ್ಲಿಕಾರ್ಜುನ್, ಕೃಷ್ಣ ಪ್ರತಿಷ್ಟಾನದ ಅಧ್ಯಕ್ಷ ಜವರಾಯಿಗೌಡ, ಇಂದಿರಾ ಕೃಷ್ಣ, ಮಂಡ್ಯ ಕರ್ನಾಟಕ ಸಂಘದ ಅಧ್ಯಕ್ಷ ಪ್ರೊ. ಜಯಪ್ರಕಾಶ್‌ಗೌಡ, ಅಂ.ಚಿ.ಸಣ್ಣಸ್ವಾಮೀಗೌಡ ಸೇರಿದಂತೆ ನೂರಾರು ಸಂಖ್ಯೆಯಲ್ಲಿ ಕೃಷ್ಣ ಅಭಿಮಾನಿಗಳು ಭಾಗವಹಿಸಿದ್ದರು.