ರೈತರು ನೀರನ್ನು ಸದ್ಬಳಕೆ ಮಾಡಿಕೊಳ್ಳಿ: ಶಾಸಕ

KannadaprabhaNewsNetwork |  
Published : Oct 14, 2025, 01:00 AM IST
ಹನೂರು ತಾಲೂಕಿನ ರಾಮನಗುಡ್ಡ ಪೈಪ್ ಲೈನ್ ಕಾಮಗಾರಿಗೆ ಶಾಸಕ   ಎಂ.ಆರ್.ಮಂಜುನಾಥ್‌ | Kannada Prabha

ಸಾರಾಂಶ

ತಾಲೂಕಿನ ರಾಮನಗುಡ್ಡ ಜಲಾಶಯ ನಿರ್ಮಾಣವಾಗಿ 40 ವರ್ಷ ಪೂರ್ಣಗೊಂಡಿದ್ದು, ಶಾಶ್ವತ ಪರಿಹಾರ ನೀಡಲು ಕಳೆದ ಹಲವಾರು ವರ್ಷಗಳಿಂದ ಸಾಧ್ಯವಾಗಿರಲಿಲ್ಲ, ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ

ಕನ್ನಡಪ್ರಭ ವಾರ್ತೆ, ಹನೂರು

ತಾಲೂಕಿನ ರಾಮನಗುಡ್ಡ ಜಲಾಶಯ ನಿರ್ಮಾಣವಾಗಿ 40 ವರ್ಷ ಪೂರ್ಣಗೊಂಡಿದ್ದು, ಶಾಶ್ವತ ಪರಿಹಾರ ನೀಡಲು ಕಳೆದ ಹಲವಾರು ವರ್ಷಗಳಿಂದ ಸಾಧ್ಯವಾಗಿರಲಿಲ್ಲ, ಶಾಶ್ವತ ನೀರಾವರಿ ವ್ಯವಸ್ಥೆ ಕಲ್ಪಿಸಲು ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ. ರೈತರು ನೀರನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಎಂ.ಆರ್‌. ಮಂಜುನಾಥ್ ತಿಳಿಸಿದರು.

ತಾಲೂಕಿನ ಬೂದು ಬಾಳು ಗ್ರಾಮದ ಸಮೀಪ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸುವ ಪೈಪ್ ಲೈನ್ ಕಾಮಗಾರಿಗೆ ಪೂಜೆ ಸಲ್ಲಿಸಿ ಮಾತನಾಡಿದರು. ತಾಲೂಕಿನ ರೈತರಿಗೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಪ್ರಮುಖ ಮೂರು ಪ್ರಮುಖ ಜಲಾಶಯಗಳಿಗೆ ನೀರು ತುಂಬಿಸುವ ಯೋಜನೆ ಕೈಗೊಂಡು ಗುಂಡಾಲ್ ಜಲಾಶಯಕ್ಕೆ ನೀರು ತುಂಬಿಸಲಾಗಿದೆ. ಆದರೆ ಅನುದಾನದ ಕೊರತೆಯಿಂದ ರಾಮನಗುಡ್ಡ ಹಾಗೂ ಹುಬ್ಬೆ ಹುಣಸೆ ಜಲಾಶಯಗಳಿಗೆ ನೀರು ತುಂಬಿಸಲು ಸಾಧ್ಯವಾಗಿರಲಿಲ್ಲ ನಾನು ಶಾಸಕರಾದ ನಂತರ ಈ ಭಾಗದ ಜನರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸಿ ಆರ್ಥಿಕ ಸದೃಢರನ್ನಾಗಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ರಾಮನಗುಡ್ಡ ಜಲಾಶಯದ ಸುತ್ತಮುತ್ತಲಿನ ರೈತರು ಒತ್ತುವರಿ ಮಾಡಿಕೊಂಡಿದ್ದ ಜಲಾಶಯದ ನಿವೇಶನವನ್ನು ತೆರವು ಮಾಡಲಾಗಿದೆ. ಎರಡುವರೆ ಕೋಟಿ ರು. ವೆಚ್ಚದಲ್ಲಿ 1,45 ಕಿಲೋಮೀಟರ್ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದ್ದು ಈ ತಿಂಗಳ ಅಂತ್ಯದಲ್ಲಿ ರಾಮನ ಗುಡ್ಡ ಜಲಾಶಯಕ್ಕೆ ನೀರು ಬಿಡಲು ಕ್ರಮವಹಿಸಲಾಗುವುದು. ಇದರಿಂದ ಸುಮಾರು 20ಕ್ಕೂ ಹೆಚ್ಚು ಹಳ್ಳಿಗಳಿಗೆ ಅಂತರ್ಜಲ ಮಟ್ಟ ಹೆಚ್ಚಾಗಿ ಕುಡಿಯುವ ನೀರು ಹಾಗೂ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುಕೂಲವಾಗಲಿದೆ ಎಂದರು.

ಹುಬ್ಬೆ ಹುಣಸೆ ಜಲಾಶಯಕ್ಕೆ ನೀರಾವರಿ ವ್ಯವಸ್ಥೆ ಕಲ್ಪಿಸಲು ₹18 ಕೋಟಿ ಅನುದಾನ ಬೇಕಿದೆ. ಆದರೆ ಸರ್ಕಾರ ಒಂದೇ ಬಾರಿ ಹೆಚ್ಚಿನ ಅನುದಾನ ನೀಡುವುದಿಲ್ಲ. ಇದರಿಂದ ಕಾಮಗಾರಿ ವಿಳಂಬವಾಗಲಿದೆ. ಈಗಾಗಲೇ ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಲಾಗಿದೆ. ಇದರ ಬದಲಾಗಿ ಜಿಆರ್ ಬಿ ಸಿ ಮುಖಾಂತರ ನೀರು ತುಂಬಿಸಲು ಯೋಜನೆ ರೂಪಿಸುತ್ತಿದ್ದೇವೆ. ಇದು ಯಶಸ್ವಿಯಾದರೆ ಅತಿ ಶೀಘ್ರದಲ್ಲಿಯೇ ಹುಬ್ಬೆ ಹುಣಸೆ ಜಲಾಶಯಕ್ಕೂ ನೀರು ತುಂಬಿಸಲಾಗುವುದು ಎಂದರು.

ಹನೂರು ತಾಲೂಕು ವ್ಯಾಪ್ತಿಯಲ್ಲಿ ಸಮರ್ಪಕ ಮಳೆಯಾಗದೆ ಕುಡಿಯುವ ನೀರಿಗೆ ತೊಂದರೆವಾಗುತ್ತಿದೆ. ಆದರೆ ಆಗಾಗ ಮಳೆಯಾಗುತ್ತಿರುವುದರಿಂದ ಬರಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಸಾಧ್ಯವಾಗುತ್ತಿಲ್ಲ.

ಹನೂರು ತಾಲೂಕನ್ನು ಬರ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಿ ಪರಿಹಾರ ನೀಡಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮನವಿ ಮಾಡಿದ್ದೇನೆ ಎಂದರು.

ಹನೂರು ಕ್ಷೇತ್ರ ವ್ಯಾಪ್ತಿಯಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಪ್ರತಿ ಮನೆಮನೆಗೆ ಕುಡಿಯುವ ನೀರು ಪೂರೈಕೆ ಮಾಡುವ ಯೋಜನೆ ಇನ್ನೂ ಪೂರ್ಣಗೊಳ್ಳದೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆಯಾಗುತ್ತಿದೆ. ಅರಣ್ಯ ಪ್ರದೇಶದ ವ್ಯಾಪ್ತಿಯಲ್ಲಿ ಪೈಪ್‌ಪ್ಲೈನ್ ಕಾಮಗಾರಿ ಮಾಡಲು ಈ ಹಿಂದೆ ಕೇಂದ್ರ ಸರ್ಕಾರದ ಅನುಮತಿ ಬೇಕಿತ್ತು. ಆದರೆ 5 ಹೆಕ್ಟರ್ ಪ್ರದೇಶದ ಒಳಗೆ ರಾಜ್ಯ ಸರ್ಕಾರವೇ ಅನುಮತಿ ನೀಡಲು ಅವಕಾಶವಿರುವುದರಿಂದ ಮುಂದಿನ ಏಪ್ರಿಲ್ ತಿಂಗಳ ಒಳಗೆ ಜಲ ಜೀವನ್ ಮಿಷನ್ ಯೋಜನೆಯನ್ನು ಪೂರ್ಣಗೊಳಿಸಿ, ಪ್ರತಿ ಮನೆ ಮನೆಗೂ ಕುಡಿಯುವ ನೀರು ತಲುಪಿಸಲು ಸೂಕ್ತ ಕ್ರಮ ವಹಿಸುತ್ತೇನೆ ಎಂದರು.

ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಗೌಡೇ ಗೌಡ, ಕಾವೇರಿ ನೀರಾವರಿ ನಿಗಮದ ಅಧೀಕ್ಷಕ ಅಭಿಯಂತರ ಮಹೇಶ್, ಕಾರ್ಯಪಾಲಕ ಅಭಿಯಂತರ ಉಮೇಶ್ ಕೆ ಎಂ, ಎಇಇ ಕರುಣಾಮಯಿ ಬಸವೇಶ್, ರೈತ ಸಂಘದ ಜಿಲ್ಲಾಧ್ಯಕ್ಷ ಹೊನ್ನೂರು ಪ್ರಕಾಶ್ ತಾಲೂಕು ಅಧ್ಯಕ್ಷರಾದ ಚಂಗಡಿ ಕರಿಯಪ್ಪ ಅಮ್ಜದ್ ಖಾನ್, ಚಾಮುಲ್ ನಿರ್ದೇಶಕ ಮಹದೇವ ಪ್ರಸಾದ್ , ಮಾಜಿ ಅಧ್ಯಕ್ಷ ಗುರುಮಲ್ಲಪ್ಪ, ಮುಖಂಡರಾದ ಮಂಜೇಶ್, ಜಸ್ಸಿಂ ಪಾಷಾ ಸೇರಿದಂತೆ ಇನ್ನಿತರರು ಹಾಜರಿದ್ದರು.

PREV

Recommended Stories

ದೀಪಾವಳಿ ಹಬ್ಬ : ಕೆಎಸ್ಸಾರ್ಟಿಸಿಯಿಂದ 2500 ಹೆಚ್ಚುವರಿ ಬಸ್‌
ಆರೆಸ್ಸೆಸ್‌ ಚಟುವಟಿಕೆ ನಿಷೇಧ ಬಗ್ಗೆ ತಮಿಳುನಾಡು ಮಾದರಿ ಪರಿಶೀಲನೆ : ಸಿದ್ದರಾಮಯ್ಯ