ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಗೆ ಚಾಲನೆ
ಬೆಂಬಲ ಬೆಲೆ ಯೋಜನೆಯಡಿ ಆರಂಬಿಸಿರುವ ರಾಗಿ ಖರೀದಿ ಕೇಂದ್ರಗಳಲ್ಲಿ ರೈತರಿಗೆ ನೂಲಿನಷ್ಟು ತೊಂದರೆ ಆಗಬಾರದು ಎಂದು ಶಾಸಕ ಜಿ.ಎಚ್.ಶ್ರೀನಿವಾಸ್ ಹೇಳಿದ್ದಾರೆ.
ಶುಕ್ರವಾರ ಜಿಲ್ಲಾಡಳಿತ, ಆಹಾರ ಮತ್ತು ನಾಗರಿಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ನಿಯಮಿತ ಚಿಕ್ಕಮಗಳೂರು ಜಿಲ್ಲೆಯಿಂದ ಪಟ್ಟಣದ ಎಪಿಎಂಸಿ ಆವರಣದಲ್ಲಿ 2025-26ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ನೇರವಾಗಿ ರಾಗಿ ಖರೀದಿಸುವ ಕಾರ್ಯಕ್ಕೆ ಚಾಲನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿಅರ್ಜಿ ನೋಂದಣಿ ಆಗಿರುವವರಿಂದ ರಾಗಿ ಕೊಂಡುಕೊಳ್ಳಲಾಗುವುದು, ನನಗೆ ದೂರು ಬರಬಾರದು, ಉತ್ತಮ ತೂಕ ಮತ್ತು ಗುಣಮಟ್ಟದ ರಾಗಿಯನ್ನು ತೆಗೆದುಕೊಳ್ಳಬೇಕು. ಇಂತಹ ವಿಚಾರಗಳಲ್ಲಿ ತಪ್ಪಾದರೆ ಅಧಿಕಾರಿಗಳ ಹೆಸರನ್ನು ಸದನದಲ್ಲಿ ಪ್ರಸ್ತಾಪಿಸುತ್ತೇನೆ ಎಂದ ಅವರು ಶಿವನಿ ಆರ್.ಎಸ್.ನಲ್ಲಿ ರಾಗಿ ಖರೀದಿ ಕೇಂದ್ರ ಪ್ರಾರಂಭಿಸ ಲಾಗುವುದು ಎಂದ ಹೇಳಿದರು.ಆಹಾರ ಮತ್ತು ನಾಗರೀಕ ಸರಬರಾಜು ಗ್ರಾಹಕರ ವ್ಯವಹಾರಗಳ ಇಲಾಖೆ ಉಪ ನಿರ್ದೇಶಕ ಯೋಗಾನಂದ್ ಮಾತ ನಾಡಿ ಕನಿಷ್ಠ ಬೆಂಬಲ ಬೆಲೆಯಡಿ ರೈತರಿಂದ ಗುಣಮಟ್ಟದ ರಾಗಿ ಖರೀದಿಸಲಾಗುವುದು, ತರೀಕೆರೆಯಲ್ಲಿ 1266 ಮತ್ತು ಅಜ್ಜಂಪುರ ದಲ್ಲಿ 4558 ರೈತರು ನೊಂದಾಯಿಸಿದ್ದಾರೆ, ಪ್ರೂಟ್ ತತ್ರಾಂಶದಿಂದ ರೈತ ಸಂಪರ್ಕ ಕೇಂದ್ರಗಳಲ್ಲಿ ಮಾಹಿತಿ ಕೊಡಬೇಕು ಎಂದು ಹೇಳಿದರು. ಮುಖಂಡ ನಿರಂಜನ ಮಾತನಾಡಿ ಶಿವನಿಯಲ್ಲಿ ರಾಗಿ ಖರೀದಿ ಕೇಂದ್ರ ಸ್ಥಾಪಿಸಿದರೆ ರೈತರಿಗೆ ತುಂಬಾ ಅನುಕೂಲ. ರೈತರನ್ನು ಕಾಯಿಸದೆ ಬೇಗ ಹಣ ಪಾವತಿಸುವ ಮೂಲಕ ಅನುಕೂಲ ಮಾಡಿ ಎಂದು ಹೇಳಿದರು. ಜಿಲ್ಲಾ ವ್ಯವಸ್ಥಾಪಕ ಮಹೇಂದ್ರ , ಎಪಿಎಂಸಿ ಮಾಜಿ ನಿರ್ದೇಶಕ ಟಿ.ಆರ್.ಶ್ರೀಧರ್, ಕಾರ್ಯದರ್ಶಿ ಮೋಹನ್ ಮತ್ತಿತರರು ಭಾಗವಹಿಸಿದ್ದರು.
-20ಕೆಟಿಆರ್.ಕೆ.4ಃ
ತರೀಕೆರೆಯಲ್ಲಿ ಶಾಸಕ ಜಿ.ಎಚ್.ಶ್ರೀನಿವಾಸ್ ಬೆಂಬಲ ಬೆಲೆ ಯೋಜನೆಯಡಿ ರೈತರಿಂದ ರಾಗಿ ಖರೀದಿಸುವ ಕಾರ್ಯ ಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಮುಖಂಡರಾದ ನಿರಂಜನ, ಎಪಿಎಂಸಿ ಮಾಜಿ ನಿರ್ದೇಶಕ ಟಿ.ಆರ್.ಶ್ರೀಧರ್, ಮತ್ತಿತರರು ಇದ್ದಾರೆ.