ಕನ್ನಡಪ್ರಭ ವಾರ್ತೆ ಮಳವಳ್ಳಿ
ತಾಲೂಕಿನ ಕಿರುಗಾವಲು ಗ್ರಾಮದಲ್ಲಿ ಜಾಗೃತ ಕರ್ನಾಟಕ ವತಿಯಿಂದ ನಡೆದ ಕೃಷಿ ಮತ್ತು ಗ್ರಾಮೀಣ ಭಾಗಗಳು ಎಲ್ಲಾ ರೀತಿಯಲ್ಲಿಯೂ ನಗಣ್ಯವಾಗುತ್ತಿರುವಾಗ ಗ್ರಾಮ ಮತ್ತು ಕೃಷಿ ಪ್ರಧಾನವಾದ ಮಂಡ್ಯದ ಅಭಿವೃದ್ಧಿ ಹೇಗೆ ಸಾಧ್ಯ ಎಂಬ ವಿಚಾರಗೋಷ್ಠಿಯಲ್ಲಿ ಗ್ರಾಮ ಮತ್ತು ಕೃಷಿ ಪ್ರಧಾನವಾದ ಮಂಡ್ಯದ ಅಭಿವೃದ್ಧಿಗೆ ಹೊಸ ದಾರಿಗಳು ಎಂಬ ವಿಚಾರವಾಗಿ ಮಾತನಾಡಿದರು.
ರೈತರಿಗೆ ಬೆಳೆಗಳಿಗೆ ಮಾರುಕಟ್ಟೆ ಕಲ್ಪಿಸುವುದು ಹಾಗೂ ಬೆಂಬಲ ಬೆಲೆ ಇಲ್ಲದಿರುವುದು ದೊಡ್ಡ ಸಮಸ್ಯೆಯಾಗಿದೆ. ನಾವು ಬೆಳೆದ ಬೆಳೆಗಳಿಗೆ ನಾವೇ ಮಾರುಕಟ್ಟೆ ಸೃಷ್ಟಿ ಮಾಡಿಕೊಳ್ಳುವ ಕೆಲಸವನ್ನು ಮಾಡಬೇಕಿದೆ ತಿಳಿವಳಿಕೆ ನೀಡಿದರು.ಕೃಷಿ ಪ್ರಧಾನ ಜಿಲ್ಲೆ ಮಂಡ್ಯದ ಮಕ್ಕಳೆಲ್ಲ ತಮ್ಮ ಊರುಗಳಿಗೆ ಬಂದು ಕೃಷಿಯನ್ನು ಆರಂಭಿಸಬೇಕು. ಕೃಷಿಯನ್ನು ಉಳಿಸಿ ಬೆಳೆಸಬೇಕು ಎಂದರೆ ಮೊದಲು ನಮ್ಮ ಭೂಮಿ ಫಲವತ್ತತೆಯನ್ನು ಅರ್ಥ ಮಾಡಿಕೊಳ್ಳಬೇಕು. ಬೆಳೆ ಬೆಳೆಯುವ ಪದ್ಧತಿ ಬದಲಾಗಬೇಕು. ಸಮಸ್ಯೆಗಳಿಗೆ ನಾವೇ ಪರಿಹಾರ ಕಂಡುಕೊಳ್ಳುವುದನ್ನು ಕಲಿಯಬೇಕು ಎಂದರು.
ಜಾಗೃತ ಕರ್ನಾಟಕದ ರಾಜ್ಯ ಸಂಚಾಲಕ ಡಾ.ಎಚ್.ವಿ.ವಾಸು ಮಾತನಾಡಿ, 20ನೇ ಶತಮಾನದಲ್ಲಿದ್ದ ಸಂಘಟನೆ, ಚಳವಳಿ ಹಾಗೂ ಹೋರಾಟದ ಸ್ವರೂಪ ಇತ್ತೀಚಿನ ದಿನಗಳಲ್ಲಿ ಬದಲಾಗುತ್ತಿದೆ. ದೆಹಲಿಯಲ್ಲಿ ರೈತರು ಕೃಷಿ ಕಾಯ್ದೆಗಳ ವಿರುದ್ಧವಾಗಿ ನಡೆಸಿದ ಹೋರಾಟದ ರೀತಿಯಲ್ಲಿ ರೈತರ ಪರವಾಗಿ ಹೋರಾಟಗಳು ಸಜ್ಜುಗೊಳ್ಳಬೇಕಿದೆ ಎಂದರು.
ಜಾತಿ ವೈರುಧ್ಯ, ಕೋಮು ಸಂಬಂಧಿತ ವಿಚಾರಗಳನ್ನು ಜನರ ಮೇಲೇರಿ ಅಧಿಕಾರ ಪಡೆಯುವ ಕೆಲಸ ಮಾಡುತ್ತಿರುವ ಆರ್ ಎಸ್ ಎಸ್ ಮತ್ತು ಬಿಜೆಪಿಯನ್ನು ಸಮಾಜದ ಮುಖ್ಯವಾಹಿನಿಯಿಂದ ದೂರವಿಡುವ ಕೆಲಸವನ್ನು ಪ್ರಸ್ತುತ ನಾವೆಲ್ಲರೂ ಜಾಗೃತರಾಗಿ ಮಾಡಬೇಕಿದೆ ಎಂದರು.
ಕಾರ್ಯಕ್ರಮದಲ್ಲಿ ಪ್ರಗತಿಪರ ರೈತ ಘನಿಖಾನ್, ಜಾಗೃತ ಕರ್ನಾಟಕದ ನಾಗೇಶ್, ಜಗದೀಶ್, ಸಂತೋಷ್ ಸೇರಿದಂತೆ ಇತರರು ಇದ್ದರು.