ಬೊಮ್ಮಾಯಿ ಜನ್ಮದಿನದಂದು ರೈತರು, ಸೈನಿಕರಿಗೆ ಸನ್ಮಾನ

KannadaprabhaNewsNetwork |  
Published : Jan 26, 2026, 02:30 AM IST
ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ 66ನೇ ಜನ್ಮದಿನದ ಅಂಗವಾಗಿ ಬಸವರಾಜ ಬೊಮ್ಮಾಯಿ ಅಭಿಮಾನಿಗಳ ಬಳಗದ ಮುಖಂಡರು ಹಾವೇರಿ ಪ್ರವಾಸಿ ಮಂದಿರದಲ್ಲಿ ಆಹ್ವಾನ ಪತ್ರಿಕೆ ಬಿಡುಗಡೆಗೊಳಿಸಿದರು. | Kannada Prabha

ಸಾರಾಂಶ

ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ 66ನೇ ಜನ್ಮದಿನದ ನಿಮಿತ್ತವಾಗಿ ಜ. 28ರಂದು ಬಸವರಾಜ ಬೊಮ್ಮಾಯಿ ಅಭಿಮಾನಿಗಳ ಬಳಗ ಜಿಲ್ಲಾ ಘಟಕದಿಂದ ಹಲವು ವಿಧಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷ ನಾಗೇಂದ್ರ ಕಟಕೋಳ ತಿಳಿಸಿದರು.

ಹಾವೇರಿ:ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಅವರ 66ನೇ ಜನ್ಮದಿನದ ನಿಮಿತ್ತವಾಗಿ ಜ. 28ರಂದು ಬಸವರಾಜ ಬೊಮ್ಮಾಯಿ ಅಭಿಮಾನಿಗಳ ಬಳಗ ಜಿಲ್ಲಾ ಘಟಕದಿಂದ ಹಲವು ವಿಧಾಯಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಬಳಗದ ಅಧ್ಯಕ್ಷ ನಾಗೇಂದ್ರ ಕಟಕೋಳ ತಿಳಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬಸವರಾಜ ಬೊಮ್ಮಾಯಿ ಅವರು ಶಾಸಕರಾಗಿ, ಸಚಿವರಾಗಿ, ಮುಖ್ಯಮಂತ್ರಿಗಳಾಗಿ, ಪ್ರಸ್ತುತ ಸಂಸದರಾಗಿ ದೀನದಲಿತರ, ಬಡವರು, ಹಿಂದುಳಿದವರ ಕಣ್ಮಣಿಯಾಗಿ ಜನಸೇವೆ ಮಾಡುತ್ತಿದ್ದಾರೆ. ಅತ್ಯಂತ ಸಮರ್ಥ ನಾಯಕತ್ವ ಗುಣಗಳನ್ನು ಹೊಂದಿರುವ ಬಸವರಾಜ ಬೊಮ್ಮಾಯಿ ಅವರು 65 ವಸಂತಗಳನ್ನು ಪೂರೈಸಿ 66ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿರುವುದನ್ನು ಸಂಭ್ರಮಿಸಲು ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ ಎಂದರು.

ಅಂದು ಬೆಳಗ್ಗೆ 8ಕ್ಕೆ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ ನಡೆಯಲಿದೆ. ನಂತರ ಜಿಲ್ಲಾಸ್ಪತ್ರೆಯ ಒಳರೋಗಿಗಳಿಗೆ ಬ್ರೆಡ್ ಮತ್ತು ಹಣ್ಣುಹಂಪಲು ವಿತರಣೆ ಮಾಡಲಾಗುತ್ತದೆ. ಬೆಳಗ್ಗೆ 10ಕ್ಕೆ ಇಜಾರಿಲಕಮಾಪುರದ ಬುದ್ಧಿಮಾಂದ್ಯ ವಸತಿ ಶಾಲೆಗೆ ಭೇಟಿ ನೀಡಿ ಸಿಹಿ ವಿತರಣೆ ಮಾಡಲಿದ್ದಾರೆ. ನಂತರ ಎಂ.ಜಿ. ರಸ್ತೆಯಲ್ಲಿರುವ ಗಾಂಧಿ ಪುತ್ಥಳಿಗೆ ಮಾಲಾರ್ಪಣೆ ಮಾಡಲಿದ್ದು, 11ಕ್ಕೆ ವೀರಭದ್ರೇಶ್ವರ ಕಲ್ಯಾಣ ಮಂಟಪದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ 66 ಜನ ನಿವೃತ್ತ ಸೈನಿಕರು, 66 ಜನ ಪ್ರಗತಿಪರ ರೈತರು, 66 ಪೌರಸೇವಾ ನೌಕರರು ಹಾಗೂ ಮೂರು ಜನ ನವೋದ್ಯಮಿಗಳಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ವೇದಿಕೆ ಕಾರ್ಯಕ್ರಮದಲ್ಲಿ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಗೌರಿಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ, ಬಣ್ಣದಮಠದ ಅಭಿನವರುದ್ರ ಚನ್ನಮಲ್ಲಿಕಾರ್ಜುಣ ಸ್ವಾಮೀಜಿ, ಹೊಸಮಠದ ಬಸವಶಾಂತಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ, ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ಬಿ.ಸಿ. ಪಾಟೀಲ, ಬಿಜೆಪಿ ಜಿಲ್ಲಾಧ್ಯಕ್ಷ ವಿರೂಪಾಕ್ಷಪ್ಪ ಬಳ್ಳಾರಿ, ಮಾಜಿ ಶಾಸಕರಾದ ಶಿವರಾಜ ಸಜ್ಜನರ, ಸುರೇಶಗೌಡ್ರ ಪಾಟೀಲ, ಅರುಣಕುಮಾರ ಪೂಜಾರ, ಪರಿಷತ್ ಸದಸ್ಯ ಮಾಜಿ ಡಿ.ಎಂ ಸಾಲಿ, ಯುವ ಮುಖಂಡ ಭರತ ಬೊಮ್ಮಾಯಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಮುಖರಾದ ನುಂಜುಂಡೇಶ ಕಳ್ಳೇರ, ಸುರೇಶ ಹೊಸಮನಿ, ರಾಜಶೇಖರಗೌಡ ಕಟ್ಟೇಗೌಡ್ರ, ವೆಂಕಟೇಶ ನಾರಾಯಣಿ, ಎಂ.ಎಸ್. ಪಾಟೀಲ ಉಪಸ್ಥಿತರಿದ್ದರು.

ಹಾವೇರಿ ಅಭಿವೃದ್ಧಿಗೆ ಚಿಂತನೆ: ಜಿಲ್ಲೆಯಲ್ಲಿ ಇಂಡಸ್ಟ್ರಿಯಲ್ ಕಾರಿಡಾರ್ ಅನುಷ್ಠಾನ, ಸುಗಮ ಸಂಚಾರಕ್ಕೆ ರಿಂಗ್‌ ರೋಡ್ ಅಭಿವೃದ್ಧಿ, ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಫ್ಲಾನಿಟೇರಿಯಮ್ ವ್ಯವಸ್ಥೆ, ಕೃಷಿ ವ್ಯವಸ್ಥೆಯ ಬಲವರ್ಧನೆ, ಕೃಷಿ ಕಾರ್ಮಿಕರಿಗೆ, ಪೌರ ಸೇವಾ ನೌಕರರು, ನಿರುದ್ಯೋಗಿ ಯುವಕರಿಗೆ ಆರೋಗ್ಯ ಸುರಕ್ಷತೆ, ಶಾಶ್ವತ ಪರಿಹಾರ ಹಾಗೂ ಯಶಸ್ವಿನಿ ಯೋಜನೆ ಜಾರಿಗೊಳಿಸುವುದು, ರೈತರು-ಜನಸಾಮಾನ್ಯರು, ದೀನ ದುರ್ಬಲರ ಧ್ವನಿಯಾಗಿ ಕೆಲಸ, ಜಿಲ್ಲೆಗೆ ಡಿಸಿಸಿ ಬ್ಯಾಂಕಿನ ಪ್ರಾದೇಶಿಕ ಕಚೇರಿ ಪ್ರಾರಂಭಿಸುವ ಬಗ್ಗೆ ವಿಶೇಷ ಕಾಳಜಿ ವಹಿಸುವಂತೆ ಹಾವೇರಿ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುವಂತೆ ಒತ್ತಾಯಿಸಿ ವಿಷಯ ಮಂಡನೆ ಮಾಡಲಾಗುವುದು ಎಂದು ವಿವರಿಸಿದರು.ಜಿಲ್ಲೆಯಲ್ಲಿ ಕೃಷಿ ಕ್ಷೇತ್ರ ಲಾಭದಾಯಕವಾಗಿರಬೇಕು. ನೀರಾವರಿ ಕ್ಷೇತ್ರ ಬಲವರ್ಧನೆ ಆಗಬೇಕಾದರೆ ವರದಾ-ಬೇಡ್ತಿ ನದಿ ಜೋಡಣೆಯಾಗಬೇಕು. ನೀರಾವರಿ ಮಾಡುವುದರಿಂದ ನಿರುದ್ಯೋಗ ಸಮಸ್ಯೆ ನಿವಾರಣೆಯಾಗುವುದರ ಜತೆಗೆ ದುಡಿಯುವ ವರ್ಗಕ್ಕೆ ಕೆಲಸ ಸಿಕ್ಕಂತಾಗುತ್ತದೆ. ಸಮಗ್ರ ಕೃಷಿ ಕ್ಷೇತ್ರ ಹಾವೇರಿ ಜಿಲ್ಲೆಯಲ್ಲಿ ಆಗಬೇಕೆಂಬುದು ಬೊಮ್ಮಾಯಿ ಅವರ ಕನಸು ಎಂದು ಹಾವೇಮುಲ್ ಮಾಜಿ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಅರಬಗೊಂಡ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸುರೇಶ್‌ ಕುಮಾರ್‌ ವಿವಾದಾತ್ಮಕ ಹೇಳಿಕೆ : ಮಹಿಳೆಯರಿಗೆ ಅವಮಾನ ಆರೋಪ- ದೂರು
ಸರ್ಕಾರದಿಂದ ಕುಡುಕರ ಸೃಷ್ಟಿ: ಬಿವೈವಿ