ಸಾಗರ: ದೇಶದ ರಾಜಧಾನಿ ನವದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆಗೆ ಬೆಂಬಲ ಸೂಚಿಸಿ, ಕೇಂದ್ರ ಸರ್ಕಾರ ರೈತರ ಬೇಡಿಕೆಗಳನ್ನು ತಕ್ಷಣ ಈಡೇರಿಸುವಂತೆ ಒತ್ತಾಯಿಸಿ ಶುಕ್ರವಾರ ಸಂಯುಕ್ತ ಕಿಸಾನ್ ಮೋರ್ಚಾ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ವಿವಿಧ ರೈತ ಪರ ಸಂಘಟನೆಗಳ ನೇತೃತ್ವದಲ್ಲಿ ಉಪವಿಭಾಗಾಧಿಕಾರಿಗಳ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಯಿತು.
ರೈತ ಸಂಘ (ಡಾ. ಎಚ್.ಗಣಪತಿಯಪ್ಪ ಸ್ಥಾಪಿತ) ಜಿಲ್ಲಾಧ್ಯಕ್ಷ ದಿನೇಶ್ ಶಿರವಾಳ, ಮಲೆನಾಡು ಭೂರಹಿತರ ಹೋರಾಟ ವೇದಿಕೆ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ಮಾತನಾಡಿದರು.
ಎನ್.ಡಿ.ವಸಂತಕುಮಾರ್, ಎಚ್.ಬಿ.ರಾಘವೇಂದ್ರ, ರಮೇಶ್ ಕೆಳದಿ, ಹೊಯ್ಸಳ ಗಣಪತಿಯಪ್ಪ, ಕಿರಣ ಕುಮಾರ್, ಡಾ. ರಾಮಚಂದ್ರ ಮನೆಘಟ್ಟ, ರವಿ ಕುಗ್ವೆ, ಮಂಜಪ್ಪ ಎಂ.ಬಿ., ದಿನೇಶ್, ವಿಲ್ಸನ್ ಗೋನ್ಸಾಲ್ವಿಸ್ ಇನ್ನಿತರರು ಹಾಜರಿದ್ದರು.- - - -16ಕೆ.ಎಸ್.ಎ.ಜಿ.1: