ಗದಗ: 2024-25ನೇ ಸಾಲಿನ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಹುಟ್ಟುವಳಿ ಖರೀದಿಸಲಾಗುತ್ತಿದ್ದು, ನೋಂದಣಿ ಪ್ರಕ್ರಿಯೆಯಲ್ಲಿ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಕ್ರಮ ಕೈ ಗೊಳ್ಳಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ತಿಳಿಸಿದರು.
ಬೆಂಬಲ ಬೆಲೆ ಯೋಜನೆಯ ಸದುಪಯೋಗ ರೈತರು ಪಡೆದುಕೊಳ್ಳಲು ಖರೀದಿ ಕೇಂದ್ರದ ಮುಂದೆ ಬ್ಯಾನರ್ ಅಳವಡಿಸಬೇಕು. ರೈತರಿಗೆ ಕರ ಪತ್ರ ವಿತರಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಇದರ ಲಾಭ ಪಡೆಯುವಂತೆ ಕ್ರಮ ವಹಿಸಬೇಕು ಎಂದರು.
ಸರ್ಕಾರದ ಮಾನದಂಡಗಳನ್ವಯ ಎಫ್.ಎ.ಕ್ಯೂ ಗುಣಮಟ್ಟ ದೃಢೀಕರಿಸಲು ಕ್ರಮ ವಹಿಸಬೇಕು. ಖರೀದಿ ಏಜೆನ್ಸಿಯವರು ತಮ್ಮ ಸಂಸ್ಥೆಯ ಹಿರಿಯ ಅಧಿಕಾರಿಗಳು ಮೇಲುಸ್ತುವಾರಿ ತಪಾಸಣೆ ಕೈಗೊಳ್ಳಬೇಕು. ಎಫ್.ಎ.ಕ್ಯೂ ಗುಣಮಟ್ಟದ ಪರಿಶೀಲನೆಗಾಗಿ ಆಯಾ ಹೋಬಳಿ ವ್ಯಾಪ್ತಿಯ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಸಿಬ್ಬಂದಿಗಳನ್ನು ಗ್ರೇಡರ್ ಆಗಿ ನೇಮಕ ಮಾಡಬೇಕು. ಬೆಂಬಲ ಬೆಲೆ ಯೋಜನೆಯಡಿಯಲ್ಲಿ ರೈತರಿಂದ ಖರೀದಿಸಿದ ಹೆಸರು ಹುಟ್ಟುವಳಿ ದಾಸ್ತಾನೀಕರಿಸಲು ಜಿಲ್ಲೆಯಲ್ಲಿರುವ ರಾಜ್ಯ ಹಾಗೂ ಕೇಂದ್ರ ಉಗ್ರಾಣಗಳಲ್ಲಿ ಸ್ಥಳ ಕಾಯ್ದಿರಿಸಬೇಕೆಂದು ಸೂಚಿಸಿದರು.ಸರ್ಕಾರದ ಆದೇಶದನ್ವಯ ಜಿಲ್ಲೆಯ ಪ್ರತಿ ರೈತರಿಂದ ಎಕರೆಗೆ 2 ಕ್ವಿಂಟಲ್ ಗರಿಷ್ಟ ಪ್ರಮಾಣ ಹಾಗೂ ಪ್ರತಿ ರೈತರಿಂದ 10 ಕ್ವಿಂಟಲ್ ಮಾತ್ರ ಖರೀದಿಸಲು ಶಾಖಾ ವ್ಯವಸ್ಥಾಪಕರು, ರಾಜ್ಯ ಸಹಕಾರ ಮಾರಾಟ ಮಹಾ ಮಂಡಳ ಇವರಿಗೆ ಸೂಚಿಸಲಾಗಿದ್ದು, ಖರೀದಿ ಸಂಸ್ಥೆಗಳು ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮ ವಹಿಸಬೇಕೆಂದು ತಿಳಿಸಿದರು.
ರಾಜ್ಯದಲ್ಲಿ ಮಾರ್ಕಫೆಡ್ ಸಂಸ್ಥೆಯನ್ನು ಕೇಂದ್ರ ಸರ್ಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿಯಮಿತ ಬೆಂಗಳೂರು ಮತ್ತು ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ ಕಲಬುರಗಿ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಯನ್ನಾಗಿ ಗುರುತಿಸಲಾಗಿದೆ ಎಂದು ತಿಳಿಸಿದರು.
ಕೇಂದ್ರಗಳು:
ಶಿರಹಟ್ಟಿ ತಾಲೂಕು: ಪಿಎಸಿಎಸ್ ಶಿರಹಟ್ಟಿ, ಟಿಎಪಿಸಿಎಂಎಸ್ ಶಿರಹಟ್ಟಿ, ಎಫ್.ಪಿ.ಓ ಬೆಳ್ಳಟ್ಟಿ
ಮುಂಡರಗಿ ತಾಲೂಕು: ಪಿಎಸಿಎಸ್ ಆಲೂರ, ಪೇಠಾಲೂರ, ಬರದೂರ, ಶಿರೂರ.
ರೋಣ ತಾಲೂಕು: ಪಿಎಸಿಎಸ್ ಹೊಸಳ್ಳಿ, ಮಲ್ಲಾಪುರ, ರೋಣ 1, ರೋಣ2, ಅಬ್ಬಿಗೇರಿ, ಯಾವಗಲ್, ಕೌಜಗೇರಿ, ಬೆಳವಣಿಕಿ, ಸವಡಿ, ನಿಡಗುಂದಿ, ಜಕ್ಕಲಿ, ಹೊಳೆಆಲೂರ, ಯಾ.ಸ.ಹಡಗಲಿ, ಟಿಎಪಿಸಿಎಂಎಸ್ ರೋಣ, ಎಫ್‌ಪಿಓ ಸವಡಿ.