ಗದಗ: ರೈತರ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ನೀಡುವುದು ಸೇರಿದಂತೆ ಹಲವಾರು ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ವತಿಯಿಂದ ಡಿ. 10ರಂದು ಬೆಳಗಾವಿ ಚಲೋ ಹಮ್ಮಿಕೊಂಡಿದ್ದೇವೆ ಎಂದು ರೈತ ಮುಖಂಡ ಶಂಕರಗೌಡ ಜಯನಗೌಡ್ರ ತಿಳಿಸಿದರು.
ಡಾ. ಎಂ.ಎಸ್. ಸ್ವಾಮಿನಾಥ್, ಎಂಎಸ್‌ಪಿ ಈ ಸಿ+50 ಸೂತ್ರವನ್ನು ಜಾರಿಗೊಳಿಸಬೇಕೆಂದು ಸರ್ಕಾರಕ್ಕೆ ವರದಿ ಸಲ್ಲಿಸಿ 26 ವರ್ಷವಾಗಿದೆ. ಆದರೂ ಯಾವುದೇ ತೀರ್ಮಾನ ಮಾಡದೆ ಇರುವುದರಿಂದ ರೈತರು ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ತಾಲೂಕು ಅಧ್ಯಕ್ಷ ಮಂಜುನಾಥ ಧ್ರುವಕುಮಾರ ಹೂಗಾರ, ಆದೇಶ ಚೆನ್ನಪ್ಪ ಹುಲಗೂರ, ಚೆನ್ನಪ್ಪ ಸಣ್ಮುಖಿ, ಬಸವರಾಜ ಮುಂತಾದವರು ಉಪಸ್ಥಿತರಿದ್ದರು.ಸರ್ಕಾರ ರೈತರಿಗಾಗಿ ಹಲವಾರು ಯೋಜನೆ ಜಾರಿಗೆ ಮಾಡಿದೆ. ಆದರೆ ಅವುಗಳ ಅನುಷ್ಠಾನ ಮಾಡುವಲ್ಲಿ ಯಾರೂ ಗಮನ ಹರಿಸುತ್ತಿಲ್ಲ. ಅಧಿಕಾರಿಗಳು ರೈತರ ಅವಶ್ಯಕತೆಗೆ ತಕ್ಕಂತೆ ಎಂಎಸ್‌ಪಿ ತೆರೆಯುವುದಿಲ್ಲ. ಖರೀದಿ ಕೇಂದ್ರದಲ್ಲಿ ವೈಜ್ಞಾನಿಕತೆ ಬಗ್ಗೆ ಪ್ರಶ್ನಿಸುತ್ತಾರೆ. ಇದರಿಂದ ರೈತ ಸಂಕಷ್ಟದ ಸ್ಥಿತಿಯಲ್ಲಿದ್ದು, ಸರ್ಕಾರ ರೈತರ ಹಿತ ಕಾಯಲು ಆಲೋಚನೆ ಮಾಡಬೇಕು ಎಂದು ರೈತ ಮುಖಂಡ ಸುರೇಶ ಸಿಂದಗಿ ತಿಳಿಸಿದರು.