ಭೂಸ್ವಾಧೀನ ಕೈಬಿಟ್ಟಿದ್ದಕ್ಕೆ ರೈತಸಂಘದಿಂದ ವಿಜಯೋತ್ಸವ

KannadaprabhaNewsNetwork |  
Published : Jul 17, 2025, 12:30 AM IST
ಭೂ ಸ್ವಾಧೀನ ಕೈ ಬಿಟ್ಟಿದ್ದಕ್ಕೆ ರೈತಸಂಘ ವಿಜಯೋತ್ಸವ | Kannada Prabha

ಸಾರಾಂಶ

ಎಂಸಿಡಿಸಿಸಿ ಬ್ಯಾಂಕ್‌ ವೃತ್ತದಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ಜಮಾಯಿಸಿ ಪಟಾಕಿ ಸಿಡಿಸಿ, ರೈತಸಂಘಕ್ಕೆ ಜೈಕಾರ ಹಾಕಿ ಸಂಭ್ರಮಿಸಿದರು.

ಕನ್ನಡಪ್ರಭ ವಾರ್ತೆ, ಗುಂಡ್ಲುಪೇಟೆ

ರೈತ ಸಂಘಟನೆಗಳ ಹೋರಾಟಕ್ಕೆ ಮಣಿದು ರಾಜ್ಯ ಕಾಂಗ್ರೆಸ್‌ ಸರ್ಕಾರ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ರೈತರ ಜಮೀನು ಸ್ವಾಧೀನ ಪ್ರಕ್ರಿಯೆ ಕೈಬಿಟ್ಟಿರುವುದಕ್ಕೆ ಕೆ.ಎಸ್. ಪುಟ್ಟಣ್ಣಯ್ಯ ಬಣದ ರೈತಸಂಘದ ಕಾರ್ಯಕರ್ತರು ಪಟ್ಟಣದಲ್ಲಿ ವಿಜಯೋತ್ಸವ ಆಚರಿಸಿದರು.

ಪಟ್ಟಣದ ಎಂಸಿಡಿಸಿಸಿ ಬ್ಯಾಂಕ್‌ ವೃತ್ತದಲ್ಲಿ ಜಿಲ್ಲಾ ರೈತಸಂಘದ ಅಧ್ಯಕ್ಷ ಶಿವಪುರ ಮಹದೇವಪ್ಪ ನೇತೃತ್ವದಲ್ಲಿ ಕಾರ್ಯಕರ್ತರು ಜಮಾಯಿಸಿ ಪಟಾಕಿ ಸಿಡಿಸಿ, ರೈತಸಂಘಕ್ಕೆ ಜೈಕಾರ ಹಾಕಿ ಸಂಭ್ರಮಿಸಿದರು.

ಶಿವಪುರ ಮಹದೇವಪ್ಪ ಮಾತನಾಡಿ, ದೇವನಹಳ್ಳಿ ಬಳಿ ೧೭೭೭ ಎಕರೆ ಕೃಷಿ ಭೂಮಿಯನ್ನು ಸ್ವಾಧೀನ ಮಾಡಲು ರಾಜ್ಯ ಸರ್ಕಾರ ಮುಂದಾಗಿತ್ತು. ರಾಜ್ಯ ಸರ್ಕಾರದ ನಿರ್ಧಾರ ಖಂಡಿಸಿ ರೈತ ಸಂಘಟನೆಗಳು ಹೋರಾಟ ನಡೆಸಿದ್ದರ ಫಲವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ರೈತರ ಹೋರಾಟಕ್ಕೆ ಮಣಿದು ಭೂ ಸ್ವಾಧೀನ ಕೈಬಿಟ್ಟಿದ್ದಾರೆ. ಇದು ಸ್ವಾಗತಾರ್ಹ ಎಂದರು.

ತಾಲೂಕು ರೈತಸಂಘದ ಅಧ್ಯಕ್ಷ ದಿಲೀಪ್‌ ಹಂಗಳ, ಯುವ ಘಟಕದ ಅಧ್ಯಕ್ಷ ಭರತ್‌, ರೈತ ಸಂಘದ ಮುಖಂಡರಾದ ನಾಗರಾಜಪ್ಪ, ಮಹೇಶ್‌, ಶಿವಮಲ್ಲು, ಶಿವಣ್ಣ ಸೇರಿ ಹಲವರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ