ಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ ಗೋಪಾಲಸ್ವಾಮಿ ಬೆಟ್ಟದಲ್ಲಿ ಕೇರಳ ಮೂಲದ ಚಿತ್ರೀಕರಣಕ್ಕೆ ಅನುಮತಿ ನೀಡಿದ ಬಂಡೀಪುರ ಅರಣ್ಯ ಇಲಾಖೆ ಹಾಗೂ ತಹಸೀಲ್ದಾರ್ ವಿರುದ್ಧ ವಾಸುದೇವ ಮೇಟಿ ಬಣದ ರೈತ ಸಂಘದ ಕಾರ್ಯಕರ್ತರು ಪಟ್ಟಣದ ಅರಣ್ಯ ಇಲಾಖೆಯ ಎಸಿಎಫ್ ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.
ಬೇಲದ ಕುಪ್ಪೆ ಮಹದೇಶ್ವರ ದೇವಸ್ಥಾನ ಹಾಗೂ ಗೋಪಾಲಸ್ವಾಮಿ ಬೆಟ್ಟ ಈ ಭಾಗದ ಜನರ ಮನೆ ದೇವರಾಗಿದ್ದು, ಕೇರಳ ಚಿತ್ರದ ಚಿತ್ರೀಕರಣಕ್ಕೆ ಅನುಮತಿ ನೀಡುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ. ಗೋಪಾಲಸ್ವಾಮಿ ಹಾಗೂ ಬೇಲದ ಕುಪ್ಪ ದೇವಸ್ಥಾನಗಳಿಗೆ ಸಾರ್ವಜನರಿಕೆ ತೆರಳಲು ಮುಕ್ತ ಅವಕಾಶ ನೀಡಬೇಕು ಎಂದು ಒತ್ತಾಯಿಸಿದರು.
ಅರಣ್ಯ ಇಲಾಖೆಗೆ ಸೇರಿದ ಜಾಗಕ್ಕೆ ತಂತಿ ಬೇಲಿ ಹಾಕಿಕೊಳ್ಳಲಿ, ಮುಜರಾಯಿ ಇಲಾಖೆಗೆ ಸೇರಿದ ಜಾಗದಲ್ಲಿ ದೇವಸ್ಥಾನವಿದೆ ಅಲ್ಲಿಗೆ ಹೋಗಲು ಅವಕಾಶ ನೀಡಬೇಕು ಎಂದು ಜಿಲ್ಲಾಡಳಿತವನ್ನು ಆಗ್ರಹಿಸಿದರು.ಚಿತ್ರೀಕರಣಕ್ಕೆ ಅನುಮತಿ ನೀಡಿದ ಅಧಿಕಾರಿಗಳನ್ನು ಅಮಾನತುಪಡಿಸಬೇಕು. ಸಾರ್ವಜನಿಕರು ಮುಕ್ತವಾಗಿ ದೇವಸ್ಥಾನಕ್ಕೆ ಹೋಗಲು ಅವಕಾಶ ನೀಡಬೇಕು. ಇದಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿಕೊಡದಿದ್ದಲ್ಲಿ ಅರಣ್ಯ ಇಲಾಖೆಯ ಗೇಟ್‌ಗಳನ್ನು ತೆರವುಗೊಳಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ರೈತಸಂಘದ ಜಿಲ್ಲಾಧ್ಯಕ್ಷ ಮಾಡ್ರಹಳ್ಳಿ ಮಹದೇವಪ್ಪ, ಪ್ರಧಾನ ಕಾರ್ಯದರ್ಶಿ ಕುಂದಕೆರೆ ಸಂಪತ್ತು, ತಾಲೂಕು ಅಧ್ಯಕ್ಷ ಕಂದೇಗಾಲ ಮಹೇಶ್, ಹಸಿರು ಸೇನೆ ಅಧ್ಯಕ್ಷ ಚಿಕ್ಕಣ್ಣ ಹಿರೀಕಾಟಿ, ಕಾರ್ಯದರ್ಶಿ ಬೆಟ್ಟಹಳ್ಳಿ ಗುರು ಸೇರಿದಂತೆ ಹಲವರಿದ್ದರು.
27ಜಿಪಿಟಿ3ಗುಂಡ್ಲುಪೇಟೆ ಅರಣ್ಯ ಇಲಾಖೆಯ ಎಸಿಎಫ್ ಕಚೇರಿಗೆ ವಾಸುದೇವ ಮೇಟಿ ಬಣದ ರೈತಸಂಘದ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟಿಸಿದರು.