ಕನ್ನಡಪ್ರಭ ವಾರ್ತೆ ಮಂಡ್ಯ
ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ಸೇರಿದ ರೈತ ಸಂಘದ ಕಾರ್ಯಕರ್ತರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಒಕ್ಕೂಟ ಸರ್ಕಾರ ರಸಗೊಬ್ಬರದ ಬೆಲೆಯನ್ನು ವಾಪಸ್ಸು ಪಡೆದು ರಸಗೊಬ್ಬರಗಳ ಮೇಲಿನ ಸಹಾಯಧನವನ್ನು ಹೆಚ್ಚಿಸಬೇಕು. ರೈತರಿಗೆ ರಿಯಾಯಿತಿ ದರದಲ್ಲಿ ಗೊಬ್ಬರ ಒದಗಿಸಬೇಕು. ಕಡ್ಡಾಯ ಲಿಂಕ್ ಪದ್ಧತಿಯನ್ನು ಕೈಬಿಟ್ಟು ರೈತರು ಕೇಳಿದ ಗೊಬ್ಬರವನ್ನೇ ಪೂರೈಸಬೇಕು ಎಂದು ಒತ್ತಾಯಿಸಿದರು.ಒಕ್ಕೂಟ ಸರ್ಕಾರ ಮತ್ತು ರಾಜ್ಯ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆ ಏರಿಸಿರುವುದನ್ನು ಹಿಂಪಡೆಯಬೇಕು. ರಿಯಾಯಿತಿ ದರದಲ್ಲಿ ಕೃಷಿ ಚಟುವಟಿಕೆಗೆ ಡೀಸೆಲ್ ಪೂರೈಸುವಂತೆ ಆಗ್ರಹಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಎ.ಎಲ್. ಕೆಂಪೂಗೌಡ, ವಿಭಾಗೀಯ ಉಪಾಧ್ಯಕ್ಷ ಬೋರಾಪುರ ಶಂಕರೇಗೌಡ, ಮುಖಂಡರಾದ ರವಿಕುಮಾರ್, ಕೆ.ಟಿ. ಗೋವಿಂದೇಗೌಡ, ಎಂ.ಎಸ್. ವಿಜಯಕುಮಾರ್, ಪಿ.ನಾಗರಾಜು, ಲತಾಶಂಕರ್, ರೂಪಾ, ಎಂ.ಎಸ್. ಸಿದ್ದೇಗೌಡ, ವೈ.ಪಿ. ಮಂಜುನಾಥ್, ಜವರೇಗೌಡ, ನವೀನ್‌ಕುಮಾರ್, ಶಿವಕುಮಾರ್ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.