ವಿದ್ಯುತ್‌ ಖಾಸಗೀಕರಣ ವಿರೋಧಿಸಿ ರೈತಸಂಘ ಪ್ರತಿಭಟನೆ

KannadaprabhaNewsNetwork |  
Published : Jun 23, 2026, 01:30 AM IST
ವಿದ್ಯುತ್‌ ಖಾಸಗೀಕರಣಕ್ಕೆ ರೈತಸಂಘ ಪ್ರತಿಭಟನೆ  | Kannada Prabha

ಸಾರಾಂಶ

ವಿದ್ಯುತ್‌ ಖಾಸಗೀಕರಣವಾದರೆ ರೈತರಿಗೆ ಉಳಿಗಾಲವಿಲ್ಲ, ಹಾಲಿ ಈಗಿರುವ ಸ್ಥಿತಿಯಲ್ಲೇ ವಿದ್ಯುತ್‌ ಕ್ಷೇತ್ರ ಇರಲಿ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.

ಗುಂಡ್ಲುಪೇಟೆ: ವಿದ್ಯುತ್ ಖಾಸಗೀಕರಣ ವಿರೋಧಿಸಿ ರೈತಸಂಘದ ಮುಖಂಡ ನಾಗಪ್ಪ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿದ ಕಾರ್ಯಕರ್ತರು ಎಂಸಿಡಿಸಿಸಿ ಬ್ಯಾಂಕ್‌ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು. ವಿದ್ಯುತ್‌ ಖಾಸಗೀಕರಣವಾದರೆ ರೈತರಿಗೆ ಉಳಿಗಾಲವಿಲ್ಲ, ಹಾಲಿ ಈಗಿರುವ ಸ್ಥಿತಿಯಲ್ಲೇ ವಿದ್ಯುತ್‌ ಕ್ಷೇತ್ರ ಇರಲಿ ಎಂದು ಪ್ರತಿಭಟನಾಕಾರರು ರಾಜ್ಯ ಸರ್ಕಾರವನ್ನು ಆಗ್ರಹಿಸಿದರು. ಪ್ರತಿಭಟನಾ ಸ್ಥಳಕ್ಕಾಗಮಿಸಿದ ಸೆಸ್ಕಾಂ ಎಇಇ ಸಿದ್ದಲಿಂಗಪ್ಪ ಪ್ರತಿಭಟನಾ ನಿರತ ರೈತರು ನೀಡಿದ ಮನವಿ ಪತ್ರವನ್ನು ಸ್ವೀಕರಿಸಿ, ಜಿಲ್ಲಾಧಿಕಾರಿಗಳಿಗೆ ಕಳುಹಿಸುವುದಾಗಿ ಹೇಳಿದರು. ಪ್ರತಿಭಟನೆಯಲ್ಲಿ ನೂರಾರು ಮಂದಿ ರೈತಸಂಘದ ಕಾರ್ಯಕರ್ತರು ಭಾಗವಹಿಸಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪಾರದರ್ಶಕವಾಗಿರಲಿ
ಮೌಲ್ಯಾಧಾರಿತ ಶಿಕ್ಷಣ ಶಾಲಾ ಕಾಲೇಜುಗಳ ಧ್ಯೇಯವಾಗಬೇಕು