ಕನ್ನಡಪ್ರಭ ವಾರ್ತೆ ಶ್ರೀರಂಗಪಟ್ಟಣ
ಬೆಳಗೊಳ ರೈತ ಮುಖಂಡ ಸುನೀಲ್ ನೇತೃತ್ವದಲ್ಲಿ ವಿವಿಧ ಗ್ರಾಮಗಳ ಮುಖಂಡರು ಕಚೇರಿ ಬಳಿ ಆಗಮಿಸಿ, ಧರಣಿ ಕುಳಿತು ಸರ್ಕಾರ ಹಾಗೂ ನೀರಾವರಿ ನಿಗಮದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕೆಆರ್‌ಎಸ್ ಜಲಾಶಯ ಭರ್ತಿಯಾಗಿದ್ದರೂ ನಾಲೆಗಳಿಗೆ ನೀರು ಹರಿಸದ ಪರಿಣಾಮ ಕಟಾವಿನ ಹಂತಕ್ಕೆ ಬಂದಿರುವ ಕಬ್ಬು, ಇತರೆ ವಾಣಿಜ್ಯ ಬೆಳೆಗಳಾದ ತೆಂಗು, ಅಡಿಕೆ, ಬಾಳೆ ಬೆಳೆಗಳು ನೀರಿಲ್ಲದೆ ಒಣಗುತ್ತಿವೆ ಎಂದು ಕಿಡಿಕಾರಿದರು.ಈ ವ್ಯಾಪ್ತಿಯಲ್ಲಿ ತಿಂಗಳಿನಿಂದ ಸರಿಯಾಗಿ ಮಳೆ ಬಿದ್ದಿಲ್ಲ. ಅಲ್ಲಲ್ಲಿ ಸೋನೆ ಸುರಿದಿದ್ದು ಬಿಟ್ಟರೆ ಹಳ್ಳ, ಕೊಳ್ಳಗಳಲ್ಲಿ ನೀರು ಹರಿಯುವಂತಹ ಮಳೆ ಬಂದಿಲ್ಲ. ವಿಶ್ವೇಶ್ವರಯ್ಯ ನಾಲೆ, ಸಿಡಿಎಸ್ ಹಾಗೂ ವಿರಿಜಾ ನಾಲೆಯ ವ್ಯಾಪ್ತಿಯ ಸಂಪರ್ಕ ನಾಲೆಯಲ್ಲಿ ನೂರಾರು ಎಕರೆ ಕೃಷಿ ಜಮೀನುಗಳಿಗೆ ಕಬ್ಬು ಇತರ ಬೆಳೆಗಳಿಗೆ ನೀರಿನ ಅವಶ್ಯವಿದೆ ಎಂದು ಆಗ್ರಹಿಸಿದರು.
ನಾಲೆಗಳ ಕಾಮಗಾರಿಗಳು ನಡೆಯುತ್ತಿವೆ. ನಾಲೆಗಳಲ್ಲಿ ಗಿಡಗಂಟಿ ಬೆಳೆದುಕೊಂಡಿದೆ. ಅವುಗಳ ತೆರವು ಮಾಡಿ ನಂತರ ನೀರು ಹರಿಸುವ ಭರವಸೆ ನೀಡಿದರು. ಪ್ರತಿಭಟನೆಯಲ್ಲಿ ಹರೀಶ್, ವಿಷಕಂಠು, ವಿನಯ್, ಸಿದ್ದಪ್ಪ, ದಾಸೇಗೌಡ, ರವಿ, ಪಾಪಯ್ಯ, ಶಿವಕುಮಾರ್ ಸೇರಿ ಇತರೆ ರೈತ ಮುಖಂಡರು ಹಾಜರಿದ್ದರು.