ರೈತರೇ ಡಿಕೆ ಶಿಚಕುಮಾರ್‌ ತೊಡೆ ಮುರಿಯುತ್ತಾರೆ: ನಿಖಿಲ್

KannadaprabhaNewsNetwork |  
Published : Sep 29, 2025, 01:02 AM IST
28ಕೆಆರ್ ಎಂಎನ್ 2.ಜೆಪಿಜಿಬಿಡದಿ ಹೋಬಳಿ ಬೈರಮಂಗಲ ವೃತ್ತದಲ್ಲಿ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ರೈತರ ಭೂ ಹಿತರಕ್ಷಣಾ ಸಂಘದ ನೇತೃತ್ವದಲ್ಲಿ ಭೂ ಸ್ವಾಧೀನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಲು ಆಗಮಿಸಿದ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಕರೆ ತರಲಾಯಿತು. | Kannada Prabha

ಸಾರಾಂಶ

ರಾಜ್ಯ ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ಟೌನ್ ಶಿಪ್ ಯೋಜನೆಗಾಗಿ ರೈತರಿಂದ ಒಂದಿಂಚೂ ಭೂಮಿಯನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ.

ಕನ್ನಡಪ್ರಭ ವಾರ್ತೆ ರಾಮನಗರಬಿಡದಿ ಟೌನ್ ಶಿಪ್ ಯೋಜನೆ ವಿಚಾರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿದು ಮನೆಗೆ ಕಳುಹಿಸುವುದು ಗೊತ್ತು ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗುಡುಗಿದರು.ಬಿಡದಿ ಹೋಬಳಿ ಬೈರಮಂಗಲ ವೃತ್ತದಲ್ಲಿ ಬೈರಮಂಗಲ ಮತ್ತು ಕಂಚುಗಾರನಹಳ್ಳಿ ಗ್ರಾಮ ಪಂಚಾಯಿತಿಗಳ ರೈತರ ಭೂ ಹಿತರಕ್ಷಣಾ ಸಂಘದ ನೇತೃತ್ವದಲ್ಲಿ ಭೂ ಸ್ವಾಧೀನ ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ನಾವು ಹೋರಾಟ ಮಾಡುತ್ತಿರುವುದು ಮನುಷ್ಯರ ಮೇಲಲ್ಲ, ರಾಕ್ಷಸರ ಮೇಲೆ ಎಂದು ಕಿಡಿಕಾರಿದರು.ರಾಜ್ಯ ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರು ಟೌನ್ ಶಿಪ್ ಯೋಜನೆಗಾಗಿ ರೈತರಿಂದ ಒಂದಿಂಚೂ ಭೂಮಿಯನ್ನು ಕಸಿದುಕೊಳ್ಳಲು ನಾವು ಬಿಡುವುದಿಲ್ಲ. ಸರ್ಕಾರ ಯೋಜನೆಯನ್ನು ಹಿಂಪಡೆಯದಿದ್ದರೇ ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು.ಈ ಯೋಜನೆಗೆ ಶೇ. 80ರಷ್ಟು ರೈತರು ಭೂಮಿಯನ್ನು ನೀಡುವುದಿಲ್ಲ ಎಂದು ಹೇಳಿದ್ದಾರೆ. ಆದರೂ ರೈತರ ಮೇಲೆ ದಿನನಿತ್ಯ ಅಧಿಕಾರಿಗಳ ಮೂಲಕ ದಬ್ಬಾಳಿಕೆ, ದೌರ್ಜನ್ಯ ಮಾಡುತ್ತಿರುವುದು ಯಾವ ಉದ್ದೇಶಕ್ಕೆ. ಉಪ ಮುಖ್ಯಮಂತ್ರಿಗಳು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದು ಗೊತ್ತು ತೊಡೆ ಮುರಿಯುವುದು ಗೊತ್ತು ಎಂದರು.ನಮ್ಮ ಹೋರಾಟ ನಿಲ್ಲುವುದಿಲ್ಲ:ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನು ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊನೆಯ ಹಂತದವರೆಗೂ ರೈತರ ಧ್ವನಿಯಾಗಿ ನಿಲ್ಲುತ್ತೇವೆ ಎಂದು ನಿಖಿಲ್ ಕುಮಾರಸ್ವಾಮಿ ರೈತರಿಗೆ ಧೈರ್ಯ ತುಂಬಿದರು.ಜೆಡಿಎಸ್ ರೈತರ ಪಕ್ಷ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಈ ಯೋಜನೆಯ ಸಾಧಕ- ಬಾಧಕಗಳ ಬಗ್ಗೆ ವಿಚಾರ ಮಾಡದೇ ರೈತರ ಮೇಲೆ ದಬ್ಬಾಳಿಕೆ ಮಾಡಿ ಯಾವ ಉದ್ದೇಶಕ್ಕಾಗಿ ಭೂಮಿ ಕಸಿದುಕೊಳ್ಳುತ್ತಿದ್ದೀರಿ. ರಿಯಲ್ ಎಸ್ಟೇಟ್ ಮಾಫಿಯಾ ನಡೆಸುವುದಕ್ಕಾ ಎಂದು ಕಿಡಿಕಾರಿದರು.ರೈತರ ಜಮೀನು ಮಾರಾಟ ಮಾಡದಂತೆ ಆದೇಶ ಮಾಡಿದ್ದೀರಾ. ಅವರ ಮಕ್ಕಳ ಜೀವನಕ್ಕೆ ಏನು ಮಾಡಬೇಕು. ರೈತ ಬೀದಿಗೆ ಬರ್ತಾನೆ ಅದಕ್ಕೆ ಸಾಮಾಜಿಕ ಸಮೀಕ್ಷೆ ಮಾಡಿದ್ದೀರಾ. ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದಾರೆ. 10 ಹಳ್ಳಿಗಳ ರೈತರ ಜೊತೆ ಮಾತನಾಡಿದ್ದೀರಾ ಎಂದು ಪ್ರಶ್ನಿಸಿದರು.ನಮ್ಮ ನೀರು ಕಂಡೋರ ಪಾಲಾಗಿದೆ:ಉಪಮುಖ್ಯಮಂತ್ರಿಗಳೇ ಆವತ್ತು ಮೇಕೆದಾಟು ಯೋಜನೆಗೆ ನಮ್ಮ ನೀರು ನಮ್ಮ ಹಕ್ಕು ಎಂದು ತೂರಾಡಿಕೊಂಡು ಹೋಗಿ ಪಾದಯಾತ್ರೆ ಮಾಡಿದರು. ಇವತ್ತು ನಮ್ಮ ನೀರು ಕಂಡೋರ ಪಾಲಾಗಿದೆ ಎಂದು ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಇದೇ ವೇಳೆ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು ವರ್ಚ್ಯುವಲ್ ಸಭೆ ಮೂಲಕ ರೈತರೊಂದಿಗೆ ಮಾತನಾಡಿ, ಯಾವುದೇ ಕಾರಣಕ್ಕೂ ರೈತರು ಎದೆಗುಂದಬೇಡಿ, ನಾನು ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಖುದ್ದಾಗಿ ನಾನೇ ಬಂದು ನಿಮ್ಮ ಹೋರಾಟದಲ್ಲಿ ಭಾಗವಹಿಸುತ್ತೇನೆ ಎಂದು ಧೈರ್ಯ ತುಂಬಿದರು.ಈ ಸಂದರ್ಭದಲ್ಲಿ ಶಾಸಕಾಂಗ ಪಕ್ಷದ ನಾಯಕರಾದ ಸಿಬಿ ಸುರೇಶ್ ಬಾಬು , ಮಾಜಿ ಶಾಸಕರಾದ ಎ. ಮಂಜುನಾಥ್ , ಡಾ. ಕೆ.ಅನ್ನದಾನಿ, ವಿಧಾನ ಪರಿಷತ್ ಸದಸ್ಯರಾದ ಟಿ.ಎನ್. ಜವರಾಯಿಗೌಡ , ಟಿ.ಎಸ್. ಶರವಣ , ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಗೌಡ ಮತ್ತಿತರರು ಭಾಗವಹಿಸಿದ್ದರು.28ಕೆಆರ್ ಎಂಎನ್ 2.ಜೆಪಿಜಿಪ್ರತಿಭಟನೆಯಲ್ಲಿ ಭಾಗಿಯಾಗಲು ಆಗಮಿಸಿದ ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ಎತ್ತಿನಗಾಡಿಯಲ್ಲಿ ಮೆರವಣಿಗೆ ಮೂಲಕ ಕರೆ ತರಲಾಯಿತು.

PREV

Recommended Stories

ಭೈರಪ್ಪರ ಅಗಲಿಕೆ ಕನ್ನಡ ಸಾಹಿತ್ಯಕ್ಕೆ ತುಂಬಲಾರದ ನಷ್ಟ
ದಸರಾಗೆ ಮೆರಗು ತಂದ ಬೊಂಬೆಗಳ ಪ್ರದರ್ಶನ