ಕನ್ನಡಪ್ರಭ ವಾರ್ತೆ ಚಿಕ್ಕಮಗಳೂರು
ಕೆಪೆಕ್, ಚಿಕ್ಕಮಗಳೂರು ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಕೃಷಿ ಮತ್ತು ತೋಟಗಾರಿಕೆ ಇಲಾಖೆ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿರುವ ‘ಕಾಳುಮೆಣಸು ಹಾಗೂ ಸಂಬಾರು ಉತ್ಪನ್ನಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು’ ಕುರಿತು ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಈ ಕಾರ್ಯಾಗಾರದಲ್ಲಿ ಹೆಚ್ಚಿನ ಮಾಹಿತಿ ಪಡೆಯಬೇಕು ಎಂದರು.
ಜಿಲ್ಲಾಧಿಕಾರಿ ಎನ್.ಎಂ.ನಾಗರಾಜ್ ಮಾತನಾಡಿದರು. ಅಡಕೆ, ತೆಂಗು, ಕಾಫಿ ತ್ತಿತರೆ ತಾಕುಗಳಲ್ಲಿ ಅಂತರ ಬೆಳೆಯಾಗಿ ಕಾಳುಮೆಣಸಿನ ಮಹತ್ವದ ಬಗ್ಗೆ ಭಾರತೀಯ ಸಂಬಾರು ಬೆಳೆಗಳ ಅನುಸಂಧಾನ ಸಂಸ್ಥೆಯ ಪ್ರಧಾನ ವಿಜ್ಞಾನಿ (ನಿವೃತ್ತ) ಡಾ.ಎಂ.ಎನ್.ಆರ್.ವೇಣುಗೋಪಾಲ್, ಸಂಬಾರು ಬೆಳೆಗಳಾದ ಜಾಯಿಕಾಯಿ, ಏಲಕ್ಕಿ, ಲವಂಗ, ವೆನಿಲ್ಲಾ, ಕೋಕಮ್ ಬೆಳೆಗಳ ಸಂಸ್ಕರಣೆ ಹಾಗೂ ರಫ್ತು ಸಾಮರ್ಥ್ಯದ ಬಗ್ಗೆ ಸಕಲೇಶಪುರದ ಸಂಬಾರು ಮಂಡಳಿಯ ಪ್ರಾಂತೀಯ ಕಚೇರಿಯ ಹಿರಿಯ ಕ್ಷೇತ್ರಾಧಿಕಾರಿ ಎಸ್.ಕುಮಾರ್, ಪಿಎಂಎಫ್‌ಎಂಇ ಮತ್ತಿತರೆ ಯೋಜನೆಗಳಿಂದ ಸಂಬಾರು ಬೆಳೆಗಳ ಸಂಸ್ಕರಣೆ, ಮೌಲ್ಯವರ್ಧನೆ ಮತ್ತು ರಫ್ತು ಪ್ರಕ್ರಿಯೆಯಲ್ಲಿ ದೊರಕುವ ಸೌಲಭ್ಯಗಳು ಕುರಿತು ತೋಟಗಾರಿಕೆ ಉಪನಿರ್ದೇಶಕ (ಕೆಎಬಿಡಿಸಿ-ಕೆಪೆಕ್) ಟಿ.ಸಿದ್ದಲಿಂಗೇಶ್ವರ, ಸಂಬಾರು ಬೆಳೆಗಳ ರಫ್ತು ಪ್ರಕ್ರಿಯೆಯಲ್ಲಿ ಪ್ಯಾಕೇಜಿಂಗ್‌ನ ಮಹತ್ವ (ಆನ್‌ಲೈನ್) ಕುರಿತು ಎನ್‌ಐಎಫ್‌ಟಿಇಎಂ ಸಂಸ್ಥೆಯ ಪ್ರಾಧ್ಯಾಪಕ ಎಸ್.ಆನಂದ್ ಕುಮಾರ್, ಸಂಬಾರು ಬೆಳೆಗಳ ಉತ್ತೇಜನೆಗೆ ಸಂಬಾರು ಮಂಡಳಿಯಿಂದ ದೊರಕುವ ಸೌಲಭ್ಯಗಳ ಬಗ್ಗೆ ಸಕಲೇಶಪುರದ ಸಂಬಾರು ಮಂಡಳಿಯ ಪ್ರಾಂತೀಯ ಕಚೇರಿಯ ಹಿರಿಯ ಕ್ಷೇತ್ರಾಧಿಕಾರಿ ಎಸ್.ಕುಮಾರ್, ಸಂಬಾರು ಉತ್ಪನ್ನಗಳ ರಫ್ತು ಪ್ರಕ್ರಿಯೆಯಲ್ಲಿ ಇ-ಕಾಮರ್ಸ್ ಮತ್ತು ಡಿಜಿಟಲ್ ಮಾರ್ಕೇಟಿಂಗ್‌ನ ಅವಶ್ಯಕತೆ ಬಗ್ಗೆ ಝೆಪ್ಟೋ ಹಿರಿಯ ವ್ಯವಸ್ಥಾಪಕ ಎಂ.ಎಸ್.ಜಿತೇಂದ್ರ ವಿಚಾರ ಮಂಡನೆ ಮಾಡಿದರು.ಸಂಬಾರು ಉತ್ಪನ್ನಗಳ ವ್ಯವಹಾರ ಕ್ಷೇತ್ರದ ಯಶಸ್ವಿ ಉದ್ಯಮಿ ಶಿರಸಿಯ ಕದಂಬ ಮಾರುಕಟ್ಟೆ ಸೌಹಾರ್ದ ಸಹಕಾರ ಸಂಸ್ಥೆಯ ವಿಶ್ವೇಶ್ವರ ಭಟ್ ಅವರು ಸಂವಾದ ನಡೆಸಿದರು.
ಕೆಪೆಕ್‌ನಿಂದ 90 ಸಾವಿರದಿಂದ 1 ಲಕ್ಷ ಉದ್ಯೋಗ ಸೃಷ್ಟಿ
ತಜ್ಞರಿಂದ 10 ವಿಚಾರ ಮಂಡನೆ