ರೈತ, ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು-ಬೊಮ್ಮಾಯಿ

KannadaprabhaNewsNetwork |  
Published : Mar 08, 2026, 02:00 AM IST
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಅವರು ಫಲಾನುಭವಿಗಳಿಗೆ ಸಾಲದ ಚೆಕ್‌ಗಳನ್ನು ವಿತರಿಸಿದರು. | Kannada Prabha

ಸಾರಾಂಶ

ರೈತ ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, ದುಡಿಯುವ ವರ್ಗ ಮಾಡುವ ಕೆಲಸ ಹಾಗೂ ಉತ್ಪಾದನೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

ಹಾವೇರಿ: ರೈತ ಮತ್ತು ದುಡಿಯುವ ವರ್ಗ ಆಧುನಿಕ ಯುಗದ ಕುಬೇರರು. ಅನುದಾನ ಮಂಜೂರು ಮಾಡುವುದರಿಂದ ದೇಶದ ಆರ್ಥಿಕತೆ ಹೆಚ್ಚಾಗುವುದಿಲ್ಲ, ದುಡಿಯುವ ವರ್ಗ ಮಾಡುವ ಕೆಲಸ ಹಾಗೂ ಉತ್ಪಾದನೆಯಿಂದ ಸರ್ಕಾರಕ್ಕೆ ಆದಾಯ ಬರುತ್ತದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.ನಗರದ ಜಿಲ್ಲಾ ಪಂಚಾಯತಿ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಅಗ್ರಣೀಯ ಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಿದ್ದ ಫಲಾನುಭವಿಗಳಿಗೆ ಸಾಲ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.60 ಕೋಟಿ ಜನಧನ್ ಖಾತೆ: ದುಡಿಯುವ ವರ್ಗಕ್ಕೆ ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿಜಿ ಅವರು ಜನರ ಬಳಿ ಹಣ ಬರಬೇಕು ಎಂಬ ಉದ್ದೇಶದಿಂದ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ದೇಶದಲ್ಲಿ 60 ಕೋಟಿ ಜನಧನ್ ಖಾತೆಗಳಿದ್ದು, ಈ ಪೈಕಿ ಮಹಿಳೆಯರ ಖಾತೆಗಳು ಹೆಚ್ಚಾಗಿವೆ. ಜನಧನ ಖಾತೆಯಿಂದ ಮಹಿಳೆಯರು 7ಉಳಿತಾಯ ಮಾಡುತ್ತಿದ್ದಾರೆ. ಡಿಜಿಟಲ್ ಹಣಕಾಸು ವ್ಯವಹಾರದಿಂದ ಬೆಳೆವಿಮೆ, ಪಿಂಚಣಿ, ಬೆಳೆ ಪರಿಹಾರದ ಹಣ ನೇರವಾಗಿ ಫಲಾನುಭವಿ ಖಾತೆಗೆ ಜಮೆಯಾಗುತ್ತದೆ. ಇದರಿಂದ ದುಡಿಯುವ ವರ್ಗಕ್ಕೆ ಅನುಕೂಲವಾಗಿದೆ ಎಂದರು.ದೇಶಕ್ಕೆ ಸ್ವಾತಂತ್ರ್ಯ ದೊರೆತ ಸಮಯದಲ್ಲಿ ದೇಶದ ಜನಸಂಖ್ಯೆ 33 ಕೋಟಿ ಇತ್ತು, ಆದರೂ ಆಹಾರದ ಕೊರತೆ ಇದ್ದು, ಅಮೆರಿಕಾ ಸೇರಿದಂತೆ ವಿವಿಧ ದೇಶಗಳಿಂದ ಭಾರತ ಆಮದು ಮಾಡಿಕೊಳ್ಳಲಾಗುತ್ತಿತ್ತು. ಇಂದು ದೇಶದ ಜನಸಂಖ್ಯೆ 133 ಕೋಟಿಗೂ ಅಧಿಕ ಇದ್ದರೂ ಸಹ ಆಹಾರದ ಕೊರತೆ ಇಲ್ಲ. ಇದಕ್ಕೆ ಕಾರಣ ರೈತರು ಹಾಗೂ ದುಡಿಯುವ ವರ್ಗವಾಗಿದೆ ಎಂದರು. 1.50 ಲಕ್ಷ ಕೋಟಿ ತೆರಿಗೆ ವಿನಾಯಿತಿ: ಕೇಂದ್ರ ಸರ್ಕಾರ 1.50 ಲಕ್ಷ ಕೋಟಿ ರು. ಮೊತ್ತದ ತೆರಿಗೆ ವಿನಾಯಿತಿ ನೀಡಿದೆ. ಇದರಿಂದ ಜನರ ಆರ್ಥಿಕ ವ್ಯವಸ್ಥೆ ಸುಧಾರಿಸಿದೆ ಹಾಗೂ ದುಡಿಯುವ ವರ್ಗಕ್ಕೆ ಅನುಕೂಲವಾಗಿದೆ ಎಂದು ಹೇಳಿದರು.ಜಿಲ್ಲೆಗೆ ಡಿಸಿಸಿ ಬ್ಯಾಂಕ್ನಬಾರ್ಡ್ ಯೋಜನೆ ಮೊತ್ತ ಡಿಸಿಸಿ ಬ್ಯಾಂಕ್‌ಗೆ ಬರುತ್ತಿದ್ದು, ಧಾರವಾಡ ಡಿಸಿಸಿ ಬ್ಯಾಂಕ್‌ನಿಂದ ಜಿಲ್ಲೆಗೆ ಮೊತ್ತ ನೀಡಲಾಗುತ್ತಿತ್ತು. ಹಾವೇರಿ ಜಿಲ್ಲೆಗೆ ಪ್ರತ್ಯೇಕ ಡಿಸಿಸಿ ಬ್ಯಾಂಕ್ ಕನಸು ಈಗ ನನಸಾಗಿದೆ. ಕೇಂದ್ರ ಸಚಿವ ಅಮಿತ ಶಾ ಅವರ ದೂರದೃಷ್ಟಿಕೋನದಿಂದ ಜಿಲ್ಲೆಗೊಂದು ಡಿಸಿಸಿ ಬ್ಯಾಂಕ್ ಘೋಷಣೆ ಮಾಡಿದ್ದಾರೆ. ಈಗಾಗಲೇ ಆರ್‌ಬಿಐಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ಮಾತನಾಡಿ, ದೇಶದ ಆರ್ಥಿಕ ಸದೃಢತೆಗೆ ಬ್ಯಾಂಕ್‌ಗಳ ಪಾತ್ರ ಪ್ರಮುಖವಾಗಿದೆ. ಜನರಿಗೆ ಸಾಲ ಸಿಕ್ಕರೆ ಅವರ ಆರ್ಥಿಕ ಚಟುವಟಿಕೆ ಸುಧಾರಣೆಗೆ ಸಹಾಯವಾಗುತ್ತದೆ. ಹಾಗಾಗಿ ಗ್ರಾಹಕರು ಬ್ಯಾಂಕಿಗೆ ಸಾಲ ಕೇಳಲು ಬಂದಾಗ ಅವರ ಸಮಸ್ಯೆ ಆಲಿಸಬೇಕು, ಹೆಚ್ಚಿನ ಕಾರ್ಯಕ್ಷಮತೆ ತೋರಿಸಬೇಕು ಹಾಗೂ ಧನಾತ್ಮಕವಾಗಿ ಆಲೋಚನೆ ಮಾಡಬೇಕು. ಕೈಗಾರಿಕೆಗೆ ಸಾಲ ನೀಡುವ ಪ್ರಮಾಣ ದ್ವಿಗುಣವಾಗಿದೆ, ಆದರೆ ಕೃಷಿ ಕ್ಷೇತ್ರಕ್ಕೆ ಕಡಿಮೆ ಪ್ರಮಾಣದಲ್ಲಿದೆ. ಕೃಷಿ ಸೇರಿದಂತೆ ಆದ್ಯತಾ ವಲಯಕ್ಕೆ ಸಾಲ ನೀಡುವ ಪ್ರಮಾಣ ಹೆಚ್ಚಾಗಬೇಕು ಎಂದು ಹೇಳಿದರು.ಜಿಪಂ ಸಿಇಒ ರುಚಿ ಬಿಂದಲ್, ಬ್ಯಾಂಕ್ ಆಫ್ ಬರೋಡಾ ಶಿವಮೊಗ್ಗ ವಲಯದ ಪ್ರಾದೇಶಿಕ ಉಪ ವ್ಯವಸ್ಥಾಪಕ ದೀಪಕ ಶಹಕರ, ಮಂಗಳೂರು ವಲಯದ ಉಪ ವ್ಯವಸ್ಥಾಪಕ ರಾಜೇಶ ಶರ್ಮಾ, ಶಿವಮೊಗ್ಗ ವಲಯದ ಪ್ರಾದೇಶಿಕ ವ್ಯವಸ್ಥಾಪಕ ಪಂಕಜಕುಮಾರ ಸಮನ್, ಕರ್ನಾಟಕ ಗ್ರಾಮೀಣ ಬ್ಯಾಂಕ್ ಹಾವೇರಿಯ ಪ್ರಾದೇಶಿಕ ವ್ಯವಸ್ಥಾಪಕ ನವೀನ ಬಿ, ನಬಾರ್ಡನ ಡಿ.ಡಿ.ಎಂ ರಂಗನಾಥ ಎಸ್., ಇತರರು ಇದ್ದರು. ಲೀಡ್ ಬ್ಯಾಂಕಿನ ಮುಖ್ಯ ವ್ಯವಸ್ಥಾಪಕ ಪ್ರಭುದೇವ ಸ್ವಾಗತಿಸಿದರು. 819.74 ಕೋಟಿ ಮೊತ್ತದ ಸಾಲ ವಿತರಣೆ: ಪಿಎಂ.ವಿಶ್ವಕರ್ಮ ಯೋಜನೆಯಡಿ 12 ಫಲಾನುಭವಿಗಳಿಗೆ 11.50 ಲಕ್ಷ ರು. ಪಿಎಂಇಜಿಪಿ ಯೋಜನೆಯಡಿ 12 ಫಲಾನುಭವಿಗಳಿಗೆ 83.45 ಲಕ್ಷ, ಮುದ್ರಾ ಯೋಜನೆಯಡಿ 44 ಫಲಾನುಭವಿಗಳಿಗೆ 251.77 ಲಕ್ಷ, ಪಿಎಂ ಸ್ವನಿಧಿ ಯೋಜನೆಯಡಿ 110 ಫಲಾನುಭವಿಗಳಿಗೆ 19.74 ಲಕ್ಷ, ಪಿಎಂಎಫ್‌ಎA- 26 ಫಲಾನುಭವಿಗಳಿಗೆ 240.33 ಲಕ್ಷ, ಎನ್.ಆರ್.ಎಲ್.ಎಂ-ಎಸ್‌ಎಚ್‌ಜಿ ಯೋಜನೆಯಡಿ 20 ಫಲಾನುಭವಿಗಳಿಗೆ 112 ಲಕ್ಷ ಹಾಗೂ ಎನ್‌ಯುಎಲ್‌ಎಂ ಯೋಜನೆಯಡಿ 05 ಫಲಾನುಭವಿಗಳಿಗೆ 44 ಲಕ್ಷ ಸೇರಿದಂತೆ 301 ಫಲಾನುಭವಿಗಳಿಗೆ 819.74 ಕೋಟಿ ಮೊತ್ತದ ಸಾಲದ ಚೆಕ್ ಹಾಗೂ ಮಂಜೂರಾತಿ ಪತ್ರ ವಿತರಣೆ ಮಾಡಲಾಯಿತು. ಪಿಎಂಜೆಜೆಬಿಯ ಮತ್ತು ಪಿಎಂಎಸ್‌ಬಿವೈ ಯೋಜನೆ ಮೃತರ ಕುಟುಂಬ ಸದಸ್ಯರಿಗೆ ಮರಣ ಪರಿಹಾರ ಚೆಕ್ ವಿತರಣೆ ಮಾಡಲಾಯಿತು.ದುಡಿಯುವ ವರ್ಗದ ಆರ್ಥಿಕ ಸ್ಥಿತಿ ಸುಧಾರಿಸಿದರೆ ನಾಡಿನ ಹಾಗೂ ದೇಶದ ಆರ್ಥಿಕತೆ ಸುಧಾರಿಸುತ್ತದೆ. ಹಾಗಾಗಿ ಪಿ.ಎಂ.ಸ್ವನಿಧಿ, ವಿಶ್ವ್ವಕರ್ಮ ಸೇರಿದಂತೆ ವಿವಿಧ ಯೋಜನೆಗಳಡಿ ಸಾಲ ಪಡೆದ ಫಲಾನುಭವಿಗಳು ಇದರ ಸದುಪಯೋಗ ಪಡೆಸಿಕೊಳ್ಳಬೇಕು. ಸ್ವಾಭಿಮಾನದ ಬದುಕು ನಡೆಸಬೇಕು ಹಾಗೂ ಆರ್ಥಿಕವಾಗಿ ಸದೃಢರಾಗಬೇಕು ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಾರ್ಖಾನೆಯ ಮಾಲಿನ್ಯದಿಂದ ಕೃಷಿ ವಲಯಕ್ಕೆ ಬಿಕ್ಕಟ್ಟು; ಕ್ರಮಕ್ಕೆ ಆಗ್ರಹ
ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಎಸಿ ವ್ಯವಸ್ಥೆಯೇ ಇಲ್ಲ