ಸರ್ಕಾರಿ ನೌಕರರ ವಿರುದ್ಧದ ಆರೋಪಗಳ ತನಿಖೆಗೆ ಫಾಸ್ಟ್‌ಟ್ರ್ಯಾಕ್ ಮಾದರಿ ಕೋರ್ಟ್ ರಚಿಸಿ: ವೈ.ಎಂ. ಸತೀಶ್

KannadaprabhaNewsNetwork |  
Published : Jan 28, 2026, 02:45 AM IST
ವೈ.ಎಂ.ಸತೀಶ್  | Kannada Prabha

ಸಾರಾಂಶ

ಹಣದ ದುರುಪಯೋಗ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇಂಥಹಾ ಎಲ್ಲ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಸರ್ಕಾರವು ಜಿಲ್ಲಾ ಮಟ್ಟದಲ್ಲಿ ಫಾಸ್ಟ್‍ಟ್ರ್ಯಾಕ್ ಕೋರ್ಟ್‍ಗಳನ್ನು ಪ್ರಾರಂಭಿಸಬೇಕು

ಬಳ್ಳಾರಿ: ಕರ್ನಾಟಕ ಸರ್ಕಾರದ ನೌಕರರ ಭ್ರಷ್ಟಾಚಾರ, ಹಣ ದುರುಪಯೋಗ ಸೇರಿ ವಿವಿಧ ಪ್ರಕರಣಗಳ ತ್ವರಿತ ವಿಚಾರಣೆಗೆ ಜಿಲ್ಲಾ ಮಟ್ಟದಲ್ಲಿ ಫಾಸ್ಟ್‍ಟ್ರ್ಯಾಕ್ ಮಾದರಿಯಲ್ಲಿ ಪ್ರತ್ಯೇಕ ಕೋರ್ಟ್‍ಗಳನ್ನು ಪ್ರಾರಂಭಿಸಬೇಕು ಎಂದು ಬಳ್ಳಾರಿ - ವಿಜಯನಗರ ಜಿಲ್ಲಾ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿ, ವಿಧಾನಪರಿಷತ್ ಸದಸ್ಯ ವೈ.ಎಂ.ಸತೀಶ್ ಆಗ್ರಹಿಸಿದ್ದಾರೆ.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್. ಸುರೇಶ್ ವಿಶೇಷ ಅಧಿವೇಶನದಲ್ಲಿ ಪ್ರಶ್ನೆ ಕೇಳಿ, ಬಳ್ಳಾರಿ ಮಹಾನಗರ ಪಾಲಿಕೆ ಸೇರಿ ರಾಜ್ಯಾದ್ಯಂತ ಅಧಿಕಾರಿಗಳ ಭ್ರಷ್ಟಾಚಾರ ಹೆಚ್ಚಾಗಿದೆ. ಹಣದ ದುರುಪಯೋಗ ಪ್ರಕರಣಗಳು ದಿನೇ ದಿನೇ ಹೆಚ್ಚುತ್ತಿವೆ. ಇಂಥಹಾ ಎಲ್ಲ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಸರ್ಕಾರವು ಜಿಲ್ಲಾ ಮಟ್ಟದಲ್ಲಿ ಫಾಸ್ಟ್‍ಟ್ರ್ಯಾಕ್ ಕೋರ್ಟ್‍ಗಳನ್ನು ಪ್ರಾರಂಭಿಸಬೇಕು ಎಂದರು.ಬಳ್ಳಾರಿ ಮಹಾನಗರ ಪಾಲಿಕೆಯ ಸಹಾಯಕ ಕಂದಾಯ ಅಧಿಕಾರಿ ಆಗಿರುವ ಎನ್. ವೀರೇಶಕುಮಾರ್, ಪ್ರಥಮ ದರ್ಜೆ ಕಂದಾಯ ನಿರೀಕ್ಷಕ ಮನೋಹರ ದ್ವಿತೀಯ ದರ್ಜೆ ಸಹಾಯಕ ಕೆ. ದೊಡ್ಡಬಸಪ್ಪ ಅವರು ₹2.80 ಲಕ್ಷ ಪಾಲಿಕೆಯ ಹಣವನ್ನು ದುರುಪಯೋಗ ಮಾಡಿಕೊಂಡಿರುವ ಆರೋಪವನ್ನು ಎದುರಿಸುತ್ತಿದ್ದು, ಗಾಂಧಿನಗರ ಪೊಲೀಸ್ ಠಾಣೆಯಲ್ಲಿ (0135/2024) ಪ್ರಕರಣ ದಾಖಲಾಗಿದೆ. ಆರೋಪಿತ ಸಿಬ್ಬಂದಿಗಳನ್ನು ಅಮಾನತು ಮಾಡಿ, ಪುನಃ ಕೆಲಸಕ್ಕೆ ತೆಗೆದುಕೊಂಡಿರುವುದು ಸರಿಯಲ್ಲ. ಇಂಥಹವರನ್ನು ಸೇವೆಯಿಂದ ವಜಾ ಮಾಡಬೇಕು ಎಂದು ಆಗ್ರಹಿಸಿದರು.

ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವರಾದ ಬಿ.ಎಸ್. ಸುರೇಶ್ ಅವರು, ನಿವೃತ್ತ ನ್ಯಾಯಾಧೀಶರಾದ ದಾವಣಗೆರೆಯ ಈಶ್ವರ್ ಜಂತ್ಲಿ ಅವರನ್ನು ವಿಚಾರಣಾ ಅಧಿಕಾರಿಗಳನ್ನಾಗಿ, ಹಿಂದಿನ ಸಾಂಖಿಕ ಅಧಿಕಾರಿಗಳಾದ ಸಹಾಯಕ ನಿರ್ದೇಶಕ ರಮೇಶ್ ಅವರನ್ನು ಮಂಡನಾ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ವಿಚಾರಣಾಧಿಕಾರಿಗಳು ಆರು ಸಭೆಗಳನ್ನು ನಡೆಸಿದ್ದು, ಅಂತಿಮ ವಿಚಾರಣಾ ವರದಿ ಇನ್ನೂ ಸ್ವೀಕೃತವಾಗಿಲ್ಲ. ಬಳ್ಳಾರಿ ಮಹಾನಗರ ಪಾಲಿಕೆಯಲ್ಲಿ ಸಿಬ್ಬಂದಿ ಕೊರತೆ ಇರುವ ಕಾರಣ ಆರೋಪಿತರನ್ನು ನಿಯಮಗಳ ಪ್ರಕಾರವೇ ಬೇರೆ ವೃತ್ತಕ್ಕೆ ವರ್ಗ ಮಾಡಲಾಗಿದೆ ಎಂದರು.

ವಿಧಾನಪರಿಷತ್ ಸದಸ್ಯರಾದ ವೈ.ಎಂ. ಸತೀಶ್ ಅವರು, ಭ್ರಷ್ಟಾಚಾರದ ಬಿಸಿ ನನಗೇ ತಾಕಿದೆ. ಕಾರಣ ಭ್ರಷ್ಟಾಚಾರ, ಹಣ ದರುಪಯೋಗದಂಥಹ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ಫಾಸ್ಟ್‌ ಟ್ರ್ಯಾಕ್ ಕೋರ್ಟ್ ಮಾದರಿಯಲ್ಲಿ ಪ್ರತ್ಯೇಕ ಕೋರ್ಟ್‍ಗಳ ಅಗತ್ಯವಿದ್ದು, ಸ್ಥಾಪಿಸಲು ಸರ್ಕಾರ ಮುಂದಾಗಬೇಕು ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುಖ್ಯಮಂತ್ರಿ ಸಿದ್ದರಾಮಯ್ಯ ನನ್ನ ಪಾಲಿನ ಶ್ರೀರಾಮ : ಶಾಸಕ ಪ್ರದೀಪ್‌ ಈಶ್ವರ್‌
ಜಿ ರಾಮ್‌ ಜಿ ವಿರುದ್ಧ ಸಿಡಿದೆದ್ದ ಕಾಂಗ್ರೆಸ್‌ ಪಡೆ - ದುಡಿವ ಕೈಗಳ ಅನ್ನ ಕಸಿವ ಕಾಯ್ದೆ