ದೊಡ್ಡಬಳ್ಳಾಪುರ: ತಾಲೂಕಿನ ಹಿಂದೂಪುರ ರಾಜ್ಯ ಹೆದ್ದಾರಿಯ ಮಾಕಳಿದುರ್ಗ ಬಳಿ ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 6 ಜನರು ಮೃತಪಟ್ಟಿದ್ದಾರೆ.
ತಾಲೂಕಿನ ಮಾಕಳಿಯಲ್ಲಿ ಈ ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದ್ದು, ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಮಂಗಳವಾರ ಬೆಳಗ್ಗೆ ದೊಡ್ಡಬಳ್ಳಾಪುರದಿಂದ ಭೀಮೇಶ್ವರ ಬೆಟ್ಟಕ್ಕೆ ಇನ್ನೋವಾ ಕಾರಿನಲ್ಲಿ 8 ಮಂದಿ ಹೊರಟಿದ್ದರು.
ಗೌರಿಬಿದನೂರು ರಸ್ತೆಯ ಮಾಕಳಿ ಬಳಿ ಓವರ್ ಟೇಕ್ ಮಾಡುವ ವೇಳೆ ಎದುರಿಗೆ ಕೆಎಸ್ ಆರ್ ಟಿಸಿ ಬಸ್ ಬಂದಿದೆ. ಈ ವೇಳೆ ಎಡಕ್ಕೆ ಕಾರನ್ನು ಚಲಿಸುವಾಗ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಗಾಯಗೊಂಡಿರುವ ಮತ್ತಿಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಘಟನಾ ಸ್ಥಳಕ್ಕೆ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.ಫೋಟೋ-
1ಕೆಡಿಬಿಪಿ1- ದೊಡ್ಡಬಳ್ಳಾಪುರದ ಮಾಕಳಿದುರ್ಗ ಬಳಿ ಸಂಭವಿಸಿದ ಅಪಘಾತದಲ್ಲಿ ನುಜ್ಜುಗುಜ್ಜಾಗಿರುವ ಕಾರಿನಲ್ಲಿ ಸಿಲುಕಿರುವ ಮೃತದೇಹಗಳು.1ಕೆಡಿಬಿಪಿ2- ಮಾಕಳಿದುರ್ಗ ಬಳಿ ಉರುಳಿ ಬಿದ್ದ ಕಾರು.