ನರಿಕೊಂಬು ಎಂಆರ್‌ಎಫ್ ಘಟಕಕ್ಕೆ ಫೌಜಿಯಾ ತರನ್ನುಮ್ ಭೇಟಿ

KannadaprabhaNewsNetwork |  
Published : Jul 21, 2026, 03:00 AM IST
ನರಿಕೊಂಬು ಎಂಆರ್‌ಎಫ್ ಘಟಕ ಹಾಗೂ ಅಳಿಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಗೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಭೇಟಿ | Kannada Prabha

ಸಾರಾಂಶ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸದ ಅಂಗವಾಗಿ ಶುಕ್ರವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಪಂ ವ್ಯಾಪ್ತಿಯ ಎಂಆರ್‌ಎಫ್ (ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ಭೇಟಿ ನೀಡಿ, ಘಟಕದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಂಟ್ವಾಳ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಆಯುಕ್ತೆ ಬಿ. ಫೌಜಿಯಾ ತರನ್ನುಮ್ ಅವರು ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಪ್ರವಾಸದ ಅಂಗವಾಗಿ ಶುಕ್ರವಾರ ಬಂಟ್ವಾಳ ತಾಲೂಕಿನ ನರಿಕೊಂಬು ಗ್ರಾಪಂ ವ್ಯಾಪ್ತಿಯ ಎಂಆರ್‌ಎಫ್ (ಮೆಟೀರಿಯಲ್‌ ರಿಕವರಿ ಫೆಸಿಲಿಟಿ) ಘಟಕಕ್ಕೆ ಭೇಟಿ ನೀಡಿ, ಘಟಕದ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಬಳಿಕ ಅವರು ಅಳಿಕೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ಅನುಷ್ಠಾನದ ಕುರಿತು ಅಧಿಕಾರಿಗಳೊಂದಿಗೆ ಪರಿಶೀಲನೆ ನಡೆಸಿದರು. ಯೋಜನೆಯು ನಿಗದಿತ ಅವಧಿಯಲ್ಲಿ ಗುಣಮಟ್ಟದೊಂದಿಗೆ ಪೂರ್ಣಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಈ ಸಂದರ್ಭ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನರ್ವಾಡೆ ವಿನಾಯಕ ಕಾರ್ಬಾರಿ, ಪ್ರೊಬೆಷನರಿ ಐಎಎಸ್ ಅಧಿಕಾರಿ ಅರ್ಚಿತ್ ದೊಂಗ್ರಿ, ಬಂಟ್ವಾಳ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸಚಿನ್ ಕುಮಾರ್, ನರಿಕೊಂಬು ಗ್ರಾಪಂ ಪಿಡಿಒ ಕೃಷ್ಣ ನಾಯ್ಕ್, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಬಂಟ್ವಾಳ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರ ಜಿ.ಎಸ್. ನಟೇಶ್, ಸಹಾಯಕ ಅಭಿಯಂತರ ಜಗದೀಶ್, ಕಿರಿಯ ಅಭಿಯಂತರ ನಾಸೀರ್, ಜಿಪಂ ನೈರ್ಮಲ್ಯ ಇಲಾಖೆಯ ಸಂಯೋಜಕರಾದ ನವೀನ್ ಹಾಗೂ ಪವನ್ ಕುಮಾರ್, ಗ್ರಾಪಂ ಮಾಜಿ ಅಧ್ಯಕ್ಷ ಸಂತೋಷ್, ಗ್ರಾಪಂ ಸಿಬ್ಬಂದಿ, ಎಂಆರ್‌ಎಫ್ ಘಟಕದ ಸಿಬ್ಬಂದಿ ಹಾಗೂ ಇತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈತಪರ ಯೋಜನೆ ಸ್ಥಗಿತ ಖಂಡಿಸಿ ಪ್ರತಿಭಟನೆ
ಶೇ.33ರಷ್ಟು ಮಹಿಳಾ ಮೀಸಲಾತಿಗೆ ಇಂದು ರಾಜಭವನ ಚಲೋ