ಉಡುಪಿ: ಉಡುಪಿ ಪರ್ಯಾಯೋತ್ಸವಕ್ಕೆ ಜಿಲ್ಲಾ ಮುಸ್ಲಿಂ ಸ್ನೇಹ ಸಮಿತಿಯು ನೀಡಲಿರುವ ಸಹಕಾರದ ಕುರಿತು ಫೇಸ್‌ಬುಕ್‌ನಲ್ಲಿ ಆಕ್ಷೇಪಾರ್ಹ ಬರಹ ಬರೆದ ನಿಟ್ಟೆಯ ಸುಧಾಕರ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.ಈತ ತನ್ನ ಫೇಸ್ ಬುಕ್ ಖಾತೆಯಲ್ಲಿ, ಹಿಂದೂ ಮುಸ್ಲಿಂ ಸೌಹಾರ್ದತೆಯಿಂದ ಇರಬೇಕಾದರೆ ಈ ಸೌಹಾರ್ದ ಸಮಿತಿಯವರಿಗೆ ಎಷ್ಟೋ ಕಾರ್ಯಗಳಿವೆ. ಅದನ್ನ ಬಿಟ್ಟು ಹಿಂದುಗಳ ಪರ್ಯಾಯ ಮೆರವಣಿಗೆಯಲ್ಲಿ ಧಫ್ ದುಫ್ ಡಮ್ ಅಂತ ಕಾರ್ಯಕ್ರಮ ಮಾಡುವ ಅಗತ್ಯವಿಲ್ಲ. ಪರ್ಯಾಯದಲ್ಲಿ ಶರಬತ್, ನೀರಿನ ಬಾಟಲಿ ಹಂಚಿದ ಕೂಡಲೇ ಸೌಹಾರ್ದ ಬೆಳೆಯಲ್ಲ, ಇದರಿಂದ ಹಿಂದುಗಳಿಗೆ ನಂಬಿಕೆ ಏನು ನಿಮ್ಮ ಮೇಲೆ ಹೆಚ್ಚಲ್ಲ. ಬಾಕಿದ್ದನ್ನು ಹೇಳಬೇಕಾದವರು ಹೇಳಿದ್ದಾರೆ ಎಂದು ಪೋಸ್ಟ್ ಹಾಕಿದ್ದ.