ಬಿಜೆಪಿಯಿಂದ ಸೆ.17ರಿಂದ ಅ.17ರವರಿಗೆ ದೇಶಾದ್ಯಂತ ನಡೆಯುತ್ತಿರುವ ವಿವಿಧ ಸೇವಾ ಸಂಕಲ್ಪಗಳು ಮುಂದುವರಿಯುತ್ತಿದೆ. ಇಂದು ಅಂಗನವಾಡಿ ಕಾರ್ಯಕರ್ತೆಯರು ಪುಟ್ಟ ಮಕ್ಕಳ ಜೊತೆ ನಿತ್ಯ ಮುಂಜಾನೆಯಿಂದ ಸಂಜೆವರೆಗೂ ಇದ್ದು, ಶಿಸ್ತು ಬದ್ಧವಾಗಿ ಲಾಲಿಸಿ ಪಾಲಿಸುವ ಮೂಲಕ ದೇಶಕ್ಕೆ ಒಳ್ಳೆಯ ಪ್ರಜೆಗಳನ್ನು ನೀಡುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಇವರ ಸೇವೆ ಗುರುತಿಸಿ ಸನ್ಮಾನಿಸಲಾಗುತ್ತಿದೆ.
ಹಲಗೂರು: ಸೇವಾ ಸಂಕಲ್ಪ ಅಭಿಯಾನದಡಿ ಸಮೀಪದ ಕೊನ್ನಾಪುರ ಗ್ರಾಮದ ಅಂಗನವಾಡಿ ಕೇಂದ್ರ ಆವರಣದಲ್ಲಿ ಅಂಗನವಾಡಿ ಕಾರ್ಯಕರ್ತೆಯರನ್ನು ಅಭಿನಂದಿಸಲಾಯಿತು. ಜಿಲ್ಲಾ ಬಿಜೆಪಿ ಪ್ರಕೋಷ್ಠಗಳ ಸಂಯೋಜಕ ಬಿ.ಎನ್.ಕೃಷ್ಣೇಗೌಡ ಇವರ ನೇತೃತ್ವದಲ್ಲಿ ಅಂಗನವಾಡಿ ಕಾರ್ಯಕರ್ತರಾದ ಆರ್. ಪ್ರಮೀಳಾ, ರಾಧಾ, ಸುಶೀಲಮ್ಮ ಹಾಗೂ ವಿಮಲಾ ಅವರನ್ನು ಅಭಿನಂದಿಸಲಾಯಿತು.
ಈ ವೇಳೆ ಬಿ.ಎಸ್.ಕೃಷ್ಣೇಗೌಡ ಮಾತನಾಡಿ, ಬಿಜೆಪಿಯಿಂದ ಸೆ.17ರಿಂದ ಅ.17ರವರಿಗೆ ದೇಶಾದ್ಯಂತ ನಡೆಯುತ್ತಿರುವ ವಿವಿಧ ಸೇವಾ ಸಂಕಲ್ಪಗಳು ಮುಂದುವರಿಯುತ್ತಿದೆ. ಇಂದು ಅಂಗನವಾಡಿ ಕಾರ್ಯಕರ್ತೆಯರು ಪುಟ್ಟ ಮಕ್ಕಳ ಜೊತೆ ನಿತ್ಯ ಮುಂಜಾನೆಯಿಂದ ಸಂಜೆವರೆಗೂ ಇದ್ದು, ಶಿಸ್ತು ಬದ್ಧವಾಗಿ ಲಾಲಿಸಿ ಪಾಲಿಸುವ ಮೂಲಕ ದೇಶಕ್ಕೆ ಒಳ್ಳೆಯ ಪ್ರಜೆಗಳನ್ನು ನೀಡುವ ನಿಟ್ಟಿನಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಹಾಗಾಗಿ ಇವರ ಸೇವೆ ಗುರುತಿಸಿ ಸನ್ಮಾನಿಸಲಾಗುತ್ತಿದೆ ಎಂದರು.
ವಿಶ್ವನಾಯಕ, ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನ ಅಂಗವಾಗಿ ಸತತ ಒಂದು ತಿಂಗಳ ಕಾಲ ದೇಶಾದ್ಯಂತ ಸೇವಾ ಕಾರ್ಯಗಳು ನಡೆಯುತ್ತಿವೆ ಎಂದರು. ಈ ವೇಳೆ ಸೋಶಿಯಲ್ ಮೀಡಿಯಾ ಸಂಚಾಲಕ ಬಾಲಚಂದ್ರ, ಮಾಜಿ ಪ್ರಧಾನ ಕಾರ್ಯದರ್ಶಿ ಜಿ.ಕೆ.ನಾಗೇಶ್, ಕರಿಗೌಡ, ಮಾಜಿ ಮಂಡಲ ಉಪಾಧ್ಯಕ್ಷ ಪರಮೇಶ್, ಪ್ರಕಾಶ್ ಸೇರಿದಂತೆ ಇತರರು ಇದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.