ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಸತ್ಕಾರ

KannadaprabhaNewsNetwork |  
Published : Jun 19, 2026, 02:45 AM IST
ಅಭಿನಂದನೆ | Kannada Prabha

ಸಾರಾಂಶ

ಕಸಾಪ ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕ ಹಾಗೂ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ಗುರುವಾರ ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ ಪೂರ್ಣ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು.

ಕಾರ್ಕಳ: ಕಸಾಪ ಉಡುಪಿ ಜಿಲ್ಲೆ, ಹೆಬ್ರಿ ತಾಲೂಕು ಘಟಕ ಹಾಗೂ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆ ಹೆಬ್ರಿ ಇವರ ಜಂಟಿ ಆಶ್ರಯದಲ್ಲಿ ಗುರುವಾರ ಹೆಬ್ರಿಯ ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಕನ್ನಡ ಪ್ರಥಮ ಭಾಷೆಯಲ್ಲಿ ಪೂರ್ಣ ಅಂಕ ಪಡೆದ ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಜರುಗಿತು.ಕಸಾಪ ಹೆಬ್ರಿ ತಾಲೂಕು ಘಟಕ ಅಧ್ಯಕ್ಷ ಶ್ರೀನಿವಾಸ ಭಂಡಾರಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಅಧ್ಯಕ್ಷ ಎಚ್. ನಾಗರಾಜ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಕಸಾಪ ಉಡುಪಿ ಜಿಲ್ಲಾಧ್ಯಕ್ಷ ನೀಲಾವರ ಸುರೇಂದ್ರ ಅಡಿಗ ಆಶಯ ನುಡಿಗಳನ್ನಾಡಿದರು. ಮುಖ್ಯ ಅತಿಥಿಗಳಾಗಿ ಹೆಬ್ರಿ ತಾಲೂಕು ಆರನೇ ಸಾಹಿತ್ಯ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿದ್ದ ಶೇಡಿಮನೆಯ ಶ್ರೀ ಸುಧಾಕರ್ ಶೆಟ್ಟಿ, ಕಾರ್ಯಾಧ್ಯಕ್ಷರಾಗಿದ್ದ ಶಂಕರ ಪೂಜಾರಿ ಶೇಡಿಮನೆ, ಜಿಲ್ಲಾ ಮಾಧ್ಯಮ ಪ್ರತಿನಿಧಿ ನರಸಿಂಹಮೂರ್ತಿ ರಾವ್ ಉಪನ್ಯಾಸಕರಾದ ಶ್ರೀ ದೀಪಕ್ ಎನ್. ಉಪಸ್ಥಿತರಿದ್ದರು.ಈ ಕಾರ್ಯಕ್ರಮದಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿಯಲ್ಲಿ ಪೂರ್ಣ ಅಂಕ ಪಡೆದ 18 ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು.ನಾಗರಾಜ ಶೆಟ್ಟಿ ಅವರು ಮಾತನಾಡಿ, ಮಾಧ್ಯಮ ಯಾವುದೇ ಇದ್ದರೂ ವಿದ್ಯಾರ್ಥಿಗಳು ಕನ್ನಡ ಭಾಷೆ ಮೇಲಿನ ಪ್ರೀತಿಯನ್ನು ಬೆಳೆಸಿಕೊಳ್ಳಬೇಕು. ಆ ನಿಟ್ಟಿನಲ್ಲಿ ಕನ್ನಡ ಮಾಧ್ಯಮ ಶಾಲೆಗಳು ಮತ್ತಷ್ಟು ಬೆಳೆಯಬೇಕು. ಕನ್ನಡವು ಹೃದಯದ ಭಾಷೆಯಾಗಿದ್ದು, ಅದು ಮಾತನಾಡಲು ಸರಾಗ ಮತ್ತು ಸರಳವಾಗಿದೆ. ವಿದ್ಯಾರ್ಥಿಗಳು ಜೀವನದಲ್ಲಿ ಗುರುಹಿರಿಯರಿಗೆ ಸದಾ ಗೌರವ ಸಲ್ಲಿಸಬೇಕು ಎಂದು ನುಡಿದರು.

ಕಾರ್ಯಕ್ರಮದಲ್ಲಿ ಆಶಯ ನುಡಿಗಳನ್ನಾಡಿದ ಕಸಾಪ ಉಡುಪಿ ಜಿಲ್ಲಾಧ್ಯಕ್ಷರಾದ ಶ್ರೀ ನೀಲಾವರ ಸುರೇಂದ್ರ ಅಡಿಗ ಅವರು, ಹೆಬ್ರಿ ಕಸಾಪ ಘಟಕ ನಿರಂತರವಾಗಿ ಉತ್ತಮ ಕೆಲಸಗಳನ್ನು ಮಾಡುತ್ತಿದೆ. ಕನ್ನಡ ಭಾಷೆಯಲ್ಲಿ ಪೂರ್ಣ ಅಂಕಗಳನ್ನು ಪಡೆಯುವುದು ಸುಲಭದ ಮಾತಲ್ಲ. ಅಂತಹ ಅಸಾಧಾರಣ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ಅಭಿನಂದಿಸುತ್ತಿರುವ ಹೆಬ್ರಿ ಕಸಾಪ ಕಾರ್ಯವು ನಿಜಕ್ಕೂ ಶ್ಲಾಘನೀಯ ಎಂದು ಪ್ರಶಂಸಿಸಿದರು.

ಎಸ್.ಆರ್. ಸಮೂಹ ಶಿಕ್ಷಣ ಸಂಸ್ಥೆಯ ಕನ್ನಡ ಭಾಷಾ ಶಿಕ್ಷಕ ಹಾಗೂ ಉಪನ್ಯಾಸಕ ದೀಪಕ್ ಎನ್. ಸ್ವಾಗತಿಸಿದರು. ಕಸಾಪ ಹೆಬ್ರಿ ಘಟಕದ ಗೌರವ ಕಾರ್ಯದರ್ಶಿ ಮಂಜುನಾಥ ಕೆ. ಶಿವಪುರ ಕಾರ್ಯಕ್ರಮ ನಿರೂಪಿಸಿದರು. ಕಸಾಪ ಪದಾಧಿಕಾರಿ ಶ್ರೀ ಮಹೇಶ ಹೈಕಾಡಿ ವಂದಿಸಿದರು.

ಕಾರ್ಯಕ್ರಮದಲ್ಲಿ ಸಾಧಕ ವಿದ್ಯಾರ್ಥಿಗಳು, ಅವರ ಪೋಷಕರು, ಅಧ್ಯಾಪಕ ವೃಂದದವರು ಹಾಗೂ ಕಸಾಪ ತಾಲೂಕು ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಂಆರ್‌ಜಿ ಸಮೂಹದಿಂದ ಗೋವಾದಲ್ಲಿ ಗೋಲ್ಡ್ ಫಿಂಚ್
ವನ್ಯಪ್ರಾಣಿ ಮಾನವ ಸಂಘರ್ಷ ತಡೆಗೆ ಶಾಶ್ವತ ಕ್ರಮ