ಮಹಿಳಾ ಅಧಿಕಾರಿಗೆ ನಕಲಿ ಪತ್ರಕರ್ತರ ಬ್ಲಾಕ್‌ಮೇಲ್‌

KannadaprabhaNewsNetwork |  
Published : Feb 06, 2026, 04:15 AM IST
ಬ್ಲ್ಯಾಕ್‌ಮೇಲ್‌ ಪ್ರಕರಣದಲ್ಲಿ ಬಂಧಿಸಲ್ಪಟ್ಟ ನಕಲಿ ಪತ್ರಕರ್ತರು | Kannada Prabha

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ ಸರ್ಕಾರಿ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ₹ 50 ಲಕ್ಷಕ್ಕೆ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ್ದ ಮೂವರು ನಕಲಿ ಪತ್ರಕರ್ತರನ್ನು ಮಾಳಮಾರುತಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣ ನಗರದಲ್ಲಿ ಸಂಚಲನ ಮೂಡಿಸಿದ್ದು, ನಕಲಿ ಪತ್ರಕರ್ತರ ಹೆಸರಿನಲ್ಲಿ ನಡೆಯುತ್ತಿದ್ದ ಬ್ಲಾಕ್‌ಮೇಲ್ ಜಾಲದ ಬಗ್ಗೆ ಆತಂಕ ವ್ಯಕ್ತವಾಗಿದೆ.

ಕನ್ನಡಪ್ರಭ ವಾರ್ತೆ ಬೆಳಗಾವಿ

ಸರ್ಕಾರಿ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳ ವಿಡಿಯೋಗಳನ್ನು ರಹಸ್ಯವಾಗಿ ಚಿತ್ರೀಕರಿಸಿ ₹ 50 ಲಕ್ಷಕ್ಕೆ ನೀಡುವಂತೆ ಬ್ಲಾಕ್‌ಮೇಲ್ ಮಾಡಿದ್ದ ಮೂವರು ನಕಲಿ ಪತ್ರಕರ್ತರನ್ನು ಮಾಳಮಾರುತಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣ ನಗರದಲ್ಲಿ ಸಂಚಲನ ಮೂಡಿಸಿದ್ದು, ನಕಲಿ ಪತ್ರಕರ್ತರ ಹೆಸರಿನಲ್ಲಿ ನಡೆಯುತ್ತಿದ್ದ ಬ್ಲಾಕ್‌ಮೇಲ್ ಜಾಲದ ಬಗ್ಗೆ ಆತಂಕ ವ್ಯಕ್ತವಾಗಿದೆ.

ಬಂಧಿತರನ್ನು ಗೋಕಾಕದ ಜಲಾಲ ಗಲ್ಲಿಯ ಸಮೀರ್ ನಿಸಾರ್ ಅಹ್ಮದ್ ಶೇಖ್ (32), ಗೋಕಾಕ ತಾಲೂಕಿನ ಯೋಗಿಕೊಳ್ಳದ ಅಬ್ದುಲ್ ರಶೀದ್ ನಜೀರ್ ಅಹ್ಮದ್ ಮಕಾನದಾರ (51) ಹಾಗೂ ಘಟಪ್ರಭಾದ ಮೊಹಮ್ಮದ್ ದಿಲಾವರ್ ಬಾಳೇಕುಂದ್ರಿ (43) ಎಂದು ಗುರುತಿಸಲಾಗಿದೆ. ಇವರು ತಮ್ಮನ್ನು ಪತ್ರಕರ್ತರೆಂದು ಪರಿಚಯಿಸಿಕೊಂಡು ವಿವಿಧ ವ್ಯಕ್ತಿಗಳ ಖಾಸಗಿ ಮಾಹಿತಿ ಸಂಗ್ರಹಿಸಿ ನಂತರ ಅದನ್ನೇ ಆಧಾರವನ್ನಾಗಿ ಮಾಡಿಕೊಂಡು ಹಣಕ್ಕಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದರೆಂದು ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿದೆ.

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ಸರ್ಕಾರಿ ಮಹಿಳಾ ಅಧಿಕಾರಿಯೊಬ್ಬರ ಖಾಸಗಿ ಕ್ಷಣಗಳನ್ನು ರಹಸ್ಯವಾಗಿ ವಿಡಿಯೋ ಮಾಡಿ ನಂತರ ಆ ವಿಡಿಯೋಗಳನ್ನು ಸಾಮಾಜಿಕ ಜಾಲತಾಣಗಳು ಹಾಗೂ ನ್ಯೂಸ್ ಚಾನೆಲ್‌ಗಳಲ್ಲಿ ಪ್ರಸಾರ ಮಾಡುವುದಾಗಿ ಬೆದರಿಕೆ ಹಾಕಿದ್ದರು. ವಿಡಿಯೋಗಳನ್ನು ಬಹಿರಂಗಪಡಿಸಬಾರದು ಎಂದರೆ ₹50 ಲಕ್ಷ ನೀಡುವಂತೆ ಆರೋಪಿಗಳು ಒತ್ತಡ ಹಾಕುತ್ತಿದ್ದರು ಎಂಬುದು ತಿಳಿದು ಬಂದಿದೆ.

ಈ ಬಗ್ಗೆ ನೊಂದ ಮಹಿಳಾ ಅಧಿಕಾರಿ ಮಾಳಮಾರುತಿ ಪೊಲೀಸ್ ಠಾಣೆಗೆ ದೂರು ನೀಡಿದ್ದರಿಂದ ಪ್ರಕರಣ ಬೆಳಕಿಗೆ ಬಂದಿದೆ. ಮಹಿಳಾ ಅಧಿಕಾರಿಯ ದೂರು

ಭಾರತೀಯ ನ್ಯಾಯ ಸಂಹಿತೆ-2023ರ ಕಲಂ 308(2), 77, 351 ಹಾಗೂ ಮಾಹಿತಿ ತಂತ್ರಜ್ಞಾನ ಕಾಯ್ದೆ-2000ರ ಕಲಂ 66(E), 67, 67(A) ಅಡಿ ಪ್ರಕರಣ ದಾಖಲಿಸಲಾಗಿದೆ.

ನಗರದ ಎಸಿಪಿ ಸಂತೋಷ ಸತ್ಯನಾಯಕ ಅವರ ಮಾರ್ಗದರ್ಶನದಲ್ಲಿ, ಮಾಳಮಾರುತಿ ಪೊಲೀಸ್ ಠಾಣೆಯ ಸಿಪಿಐ ಬಿ.ಆರ್.ಗಡ್ಡೇಕರ್ ನೇತೃತ್ವದ ವಿಶೇಷ ಪೊಲೀಸ್ ತಂಡ ಕಾರ್ಯಾಚರಣೆ ನಡೆಸಿ ಮೂವರು ನಕಲಿ ಪತ್ರಕರ್ತರನ್ನು ಬಂಧಿಸಿದೆ. ಆರೋಪಿಗಳು ಪ್ರಕರಣ ದಾಖಲಿಸದಂತೆ ಪೊಲೀಸರ ಮೇಲೆ ಸಾಕಷ್ಟು ಒತ್ತಡ ಹಾಕುತ್ತಿದ್ದರೂ ಎಂಬುದು ಬೆಳಕಿಗೆ ಬಂದಿದ್ದು, ಪೊಲೀಸರು ಒತ್ತಡ ಲೆಕ್ಕಿಸದೆ ಕಾನೂನು ಕ್ರಮ ಕೈಗೊಂಡಿದ್ದಾರೆ.

ಡಿಜಿಟಲ್‌ ಸಾಧನಗಳ ಜಪ್ತಿ:

ಇನ್ನು, ಬಂಧಿತ ಆರೋಪಿಗಳಿಂದ ಹಲವು ಡಿಜಿಟಲ್ ಸಾಧನಗಳು ಮತ್ತು ಉಪಕರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇದರಲ್ಲಿ ಹಲವು ಮೊಬೈಲ್ ಫೋನ್‌ಗಳು, 64 ಜಿಬಿ ಪೆನ್‌ಡ್ರೈವ್, ಸ್ಯಾಮ್ಸಂಗ್ ಗ್ಯಾಲಕ್ಸಿ ಸರಣಿ ಮೊಬೈಲ್‌ಗಳು, 6 ಹಿಡನ್ ಕ್ಯಾಮೆರಾ ಹೋಲ್ಡರ್‌ಗಳು, ಓಟಿಜಿ ಸಾಧನಗಳು, ಮೆಮೋರಿ ಕಾರ್ಡ್‌ಗಳು, ಕಾರ್ಡ್‌ ರೀಡರ್‌ಗಳು ಹಾಗೂ ಟೊಯೋಟಾ ಇನೋವಾ ಕ್ರಿಸ್ಟಾ ಕಾರ್‌ ಸೇರಿವೆ. ಈ ಸಾಧನಗಳನ್ನು ಫೊರೆನ್ಸಿಕ್ ಪರೀಕ್ಷೆಗೆ ಕಳುಹಿಸುವ ಮೂಲಕ ಇನ್ನಷ್ಟು ಮಾಹಿತಿ ಸಂಗ್ರಹಿಸಲು ಪೊಲೀಸರು ಮುಂದಾಗಿದ್ದಾರೆ.

-------

ಕೋಟ್‌

ಸರ್ಕಾರಿ ಮಹಿಳಾ ಅಧಿಕಾರಿಗೇ ಬ್ಲಾಕ್‌ಮೇಲ್ ನಡೆಸಿದ ಈ ಆರೋಪಿಗಳ ಹಿಂದೆ ಇನ್ನೂ ದೊಡ್ಡ ಜಾಲ ಇರಬಹುದೆಂಬ ಶಂಕಿ ಇದೆ. ಆರೋಪಿಗಳು ಇದೇ ರೀತಿಯಲ್ಲಿ ಇನ್ನೂ ಹಲವರನ್ನು ಬ್ಲಾಕ್‌ಮೇಲ್ ಮಾಡಿರುವ ಸಾಧ್ಯತೆಗಳ ಬಗ್ಗೆ ತನಿಖೆ ನಡೆಯುತ್ತಿದೆ. ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗುತ್ತಿದ್ದು, ಆರೋಪಿಗಳ ಸಂಪರ್ಕ, ಡಿಜಿಟಲ್ ಡೇಟಾ ಹಾಗೂ ಹಣಕಾಸು ವ್ಯವಹಾರಗಳ ಬಗ್ಗೆ ಆಳವಾಗಿ ಪರಿಶೀಲನೆ ನಡೆಸಲಾಗುತ್ತಿದೆ.

- ಭೂಷಣ ಬೊರಸೆ, ನಗರ ಪೊಲೀಸ್ ಆಯುಕ್ತ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಾಮಾಜಿಕ ಜಾಲತಾಣ ಮೇಲೆ ಕಣ್ಣಿಡಲು ಸರ್ಕಾರಿ ಸಾಫ್ಟ್‌ವೇರ್‌
ಬ್ಯಾಲೆಟ್‌ ಪೇಪರಲ್ಲೇ ಪಂಚಾಯ್ತಿ ಚುನಾವಣೆಗೆ ಸರ್ಕಾರ ಮಸೂದೆ