ಘಟನೆಗೆ ಕಾರಣ ತಿಳಿದುಬಂದಿಲ್ಲ. ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.
ಗದಗ: ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿರುವ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಸಾರ್ವಜನಿಕ ಆರೋಗ್ಯ (ಎಂಪಿಎಚ್) ದ್ವಿತೀಯ ಸೆಮಿಸ್ಟರ್ ವಿದ್ಯಾರ್ಥಿನಿಯೊಬ್ಬರು ಗುರುವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ. ವೀಣಾ ಹಾನಾಪುರ (26) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ. ಜಿಲ್ಲೆಯ ನರಗುಂದ ಪಟ್ಟಣದ ನಿವಾಸಿಯಾಗಿರುವ ವಿದ್ಯಾರ್ಥಿನಿಯ ಕುಟುಂಬ ಪ್ರಸ್ತುತ ಬಾದಾಮಿ ತಾಲೂಕಿನಲ್ಲಿ ವಾಸವಿದೆ ಎನ್ನಲಾಗಿದೆ.
ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿನ ತನ್ನ ಕೊಠಡಿಗೆ ಗುರುವಾರ ರಾತ್ರಿ 8.30ಕ್ಕೆ ತೆರಳಿದ್ದು, ರಾತ್ರಿ 11 ಗಂಟೆಯಾದರೂ ಕೊಠಡಿಯ ಬಾಗಿಲು ತೆರೆಯದೇ ಹಾಗೂ ಊಟಕ್ಕೂ ಹಾಜರಾಗದ ಹಿನ್ನೆಲೆ ಸಹಪಾಠಿ ವಿದ್ಯಾರ್ಥಿನಿಯರು ವಾರ್ಡನ್‌ಗೆ ಮಾಹಿತಿ ನೀಡಿದ್ದಾರೆ. ನಂತರ ಪರಿಶೀಲನೆ ವೇಳೆ ವಿದ್ಯಾರ್ಥಿನಿಯು ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದ್ದು, ತಕ್ಷಣವೇ ಪೊಲೀಸರ ಸಮ್ಮುಖದಲ್ಲಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುವ ಪ್ರಯತ್ನ ಮಾಡಿದರಾದರೂ ಆಸ್ಪತ್ರೆ ತಲುಪುವ ಮೊದಲೇ ವಿದ್ಯಾರ್ಥಿನಿ ಸಾವಿಗೀಡಾಗಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ.
ಘಟನೆಗೆ ಕಾರಣ ತಿಳಿದುಬಂದಿಲ್ಲ. ಗದಗ ಗ್ರಾಮೀಣ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ. ವ್ಯಕ್ತಿ ಕಾಣೆ
ನರೇಗಲ್ಲ: ಪಟ್ಟಣದ ನಿವಾಸಿ ವೀರಯ್ಯ ಶಿವಪುತ್ರಯ್ಯ ಅಡ್ನೂರ(48) ಎಂಬ ಕೂಲಿ ಕಾರ್ಮಿಕ ಕಾಣೆಯಾಗಿದ್ದು, ಈ ಕುರಿತು ನರೇಗಲ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಜು. 18ರಂದು ಬೆಳಗ್ಗೆ 6ಕ್ಕೆ ಗದುಗಿಗೆ ಹೋಗಿ ಬರುವುದಾಗಿ ಹೇಳಿ ಹೋದವರು ಇದುವರೆಗೆ ಮನೆಗೆ ಮರಳಿಲ್ಲ. ಸ್ವಲ್ಪ ಮಟ್ಟಿನ ಬುದ್ಧಿಮಾಂದ್ಯತೆ ಹೊಂದಿರುವ ಇವರು 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಕೋಲು ಮುಖ, ಸಾದಗೆಂಪು ಮೈಬಣ್ಣ ಹೊಂದಿದ್ದಾರೆ. ಕನ್ನಡ ಮಾತನಾಡಬಲ್ಲ ಇವರು ಕೆಂಪು ಬಣ್ಣದ ಅರ್ಧ ತೋಳಿನ ಶರ್ಟ್, ಕೆಂಪು ಲುಂಗಿ ಹಾಗೂ ಕೆಂಪು ಟವೆಲ್ ಧರಿಸಿದ್ದಾರೆ. ಈ ವ್ಯಕ್ತಿಯ ಸುಳಿವು ಸಿಕ್ಕಲ್ಲಿ ನರೇಗಲ್ಲ ಪಿಎಸ್‌ಐ(ದೂ. 08381- 268233/ 9480804454), ರೋಣ ಸಿಪಿಐ(ಮೊ. 9480804434) ಸಂಪರ್ಕಿಸಲು ಕೋರಲಾಗಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.